Homeಮುಖಪುಟ'ಸಂಚಾರ್ ಸಾಥಿ ಆ್ಯಪ್‌'ನಿಂದ ಗೂಢಚರ್ಯೆ ಸಾಧ್ಯವಿಲ್ಲ, ಆದೇಶದಲ್ಲಿ ಬದಲಾವಣೆಗೆ ಸಿದ್ದ : ಸಚಿವ ಸಿಂಧಿಯಾ

‘ಸಂಚಾರ್ ಸಾಥಿ ಆ್ಯಪ್‌’ನಿಂದ ಗೂಢಚರ್ಯೆ ಸಾಧ್ಯವಿಲ್ಲ, ಆದೇಶದಲ್ಲಿ ಬದಲಾವಣೆಗೆ ಸಿದ್ದ : ಸಚಿವ ಸಿಂಧಿಯಾ

- Advertisement -
- Advertisement -

ಕೇಂದ್ರ ಸರ್ಕಾರ ಎಲ್ಲಾ ಸ್ಮಾರ್ಟ್‌ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯಗೊಳಿಸಿರುವುದರಿಂದ ಜನರು ಗೌಪ್ಯತೆ ಕಳೆದುಕೊಳ್ಳುವ ಆತಂಕ ಎದುರಾಗಿದೆ.

ಈ ಕುರಿತು ಬುಧವಾರ (ಡಿ.3) ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ದೂರ ಸಂಪರ್ಕ ಸಚಿವ ಜೋತಿರಾಧಿತ್ಯ ಸಿಂಧಿಯಾ, “ಸಂಚಾರ್ ಸಾಥಿ’ ಆ್ಯಪ್ ಮೂಲಕ ಗೂಡಾಚರ್ಯೆ ನಡೆಯಲು ಸಾಧ್ಯವಿಲ್ಲ. ಜನರ ಪ್ರತಿಕ್ರಿಯೆಗಳನ್ನು ಅನುಸರಿಸಿ ಮೊಬೈಲ್‌ಗಳಲ್ಲಿ ಆ್ಯಪ್ ಇನ್‌ಸ್ಟಾಲ್‌ಗೆ ಸಂಬಂಧಿಸಿದ ಆದೇಶದಲ್ಲಿ ಬದಲಾವಣೆಗಳನ್ನು ಮಾಡಲು ಸಚಿವಾಲಯ ಸಿದ್ಧವಾಗಿದೆ” ಎಂದು ಹೇಳಿದ್ದಾರೆ.

ಸಂಚಾರ್ ಸಾಥಿ ಆ್ಯಪ್‌ನಿಂದ ಬೇಹುಗಾರಿಕೆ ಕುರಿತು ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವ ಸಿಂಧಿಯಾ, “ಸಂಚಾರ್ ಸಾಥಿ ಆ್ಯಪ್‌ನಿಂದ ಯಾವುದೇ ಗೂಢಚಾರಿಕೆ ಸಾಧ್ಯವಿಲ್ಲ, ಯಾವುದೇ ಗೂಢಚಾರಿಕೆ ಸಂಭವಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ಎಲ್ಲಾ ಸ್ಮಾರ್ಟ್‌ ಫೋನ್‌ ತಯಾರಕರು ಹೊಸ ಮೊಬೈಲ್‌ ಫೋನ್‌ಗಳಲ್ಲಿ ಅವುಗಳ ಮಾರಾಟಕ್ಕೂ ಮುನ್ನ ಸಂಚಾರ್ ಸಾಥಿ ಆ್ಯಪ್ ಪ್ರಿ ಇನ್‌ಸ್ಟಾಲ್ ಮಾಡಬೇಕು. ಇಗಾಗಲೇ ಮಾರಾಟವಾಗಿ ಬಳಕೆಯಲ್ಲಿರುವ ಮೊಬೈಲ್‌ ಫೋನ್‌ಗಳಲ್ಲಿ ಸಾಫ್ಟ್‌ವೇರ್ ಅಪ್ಡೇಟ್ ಮೂಲಕ ಆ್ಯಪ್ ಇನ್‌ಸ್ಟಾಲ್ ಮಾಡಿಸಬೇಕು ಎಂದು ನವೆಂಬರ್ 28ರಂದು ನೀಡಿದ ನಿರ್ದೇಶದಲ್ಲಿ ಕೇಂದ್ರ ದೂರ ಸಂಪರ್ಕ ಸಚಿವಾಲಯ ಹೇಳಿದೆ.

ಈ ನಿರ್ದೇಶನದ ಬಗ್ಗೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಮತ್ತು ಇತರ ಸಾರ್ವಜನಿಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಕೇಂದ್ರ ಸರ್ಕಾರ ಜನರ ಮೇಲೆ ಕಣ್ಗಾವಲು ಇಡಲು ಮಾಡಿರುವ ಹೊಸ ತಂತ್ರ ಎಂದು ಆರೋಪಿಸಿದ್ದಾರೆ.

ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಸಿಂಧಿಯಾ, “ಸಂಚಾರ್ ಸಾಥಿ ಆ್ಯಪ್ ಡಿಲಿಟ್ ಮಾಡಲು ಸಾಧ್ಯವಾಗದಂತೆ ಎಂಬೆಡ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು. ಆ್ಯಪ್ ಪ್ರಿ ಇನ್‌ಸ್ಟಾಲ್‌ಗೆ ನಿರ್ದೇಶಿಸಿರುವುದು ನಿಜ. ಆದರೆ, ಅದು ಬೇಡವಾದಾಗ ಬಳಕೆದಾರರು ಅನ್‌ ಇನ್‌ಸ್ಟಾಲ್ ಮಾಡಬಹುದು” ಎಂದಿದ್ದಾರೆ.

ಜನರ ಮೊಬೈಲ್‌ ಫೋನ್‌ಗಳಲ್ಲಿ ಆ್ಯಪ್ ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸುವ ಮೂಲಕ ಅವರ ಮೆಸೇಜ್‌ಗಳು ಸೇರಿದಂತೆ ಚಲನವಲನಗಳ ಮೇಲೆ ಕಣ್ಣಿಡಲು ಸರ್ಕಾರ ಪ್ರಯತ್ನಿಸುತ್ತಿದೆ. ಇದು ಸಂವಿಧಾನ ಖಾತ್ರಿಪಡಿಸಿದ ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಆ್ಯಪ್ ಜನರನ್ನು ಸೈಬರ್ ವಂಚನೆಯಂತಹ ಕೃತ್ಯಗಳಿಂದ ರಕ್ಷಿಸಲು ಇನ್‌ಸ್ಟಾಲ್ ಮಾಡಿಸಲಾಗುತ್ತಿದೆ. ಈ ವಿಚಾರದಲ್ಲಿ ಜನರಿಗೆ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸಿಂಧಿಯಾ ಸಮರ್ಥಿಸಿಕೊಂಡಿದ್ದಾರೆ. ಮೊಬೈಲ್ ಬಳಕೆದಾರರು ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಂಡಿಲ್ಲ ಎಂದರೆ, ಅದು ಕಾರ್ಯನಿರ್ವಹಿಸುವುದಿಲ್ಲ. ಅಲ್ಲದೆ, ಬೇಡವಾದಾಗ ಆ್ಯಪ್ ಡಿಲಿಟ್ ಮಾಡಬಹುದು ಎಂದು ಸಿಂಧಿಯಾ ಲೋಕಸಭೆಗೆ ತಿಳಿಸಿದ್ದಾರೆ.

ಸುಮಾರು 1.5 ಕೋಟಿ ಅಪ್ಲಿಕೇಶನ್‌ ಈಗಾಗಲೇ ಡೌನ್‌ಲೋಡ್‌ ಆಗಿವೆ. ಪೋರ್ಟಲ್ ಮತ್ತು ಅಪ್ಲಿಕೇಶನ್‌ ಮೂಲಕ 26 ಲಕ್ಷ ಕದ್ದ ಹ್ಯಾಂಡ್‌ಸೆಟ್‌ಗಳನ್ನು ಪತ್ತೆಹಚ್ಚಲಾಗಿದೆ, 7 ಲಕ್ಷ ಕದ್ದ ಹ್ಯಾಂಡ್‌ಸೆಟ್‌ಗಳನ್ನು ಗ್ರಾಹಕರಿಗೆ ಹಿಂತಿರುಗಿಸಲಾಗಿದೆ, 41 ಲಕ್ಷ ಮೊಬೈಲ್ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ ಮತ್ತು 6 ಲಕ್ಷ ವಂಚನೆಗಳನ್ನು ತಡೆಯಲಾಗಿದೆ ಎಂದು ಸಿಂಧಿಯಾ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...