Homeಅಂತರಾಷ್ಟ್ರೀಯರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

- Advertisement -
- Advertisement -

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು, ಇಂದು ಹೈದರಾಬಾದ್ ಹೌಸ್​ನಲ್ಲಿ ಪ್ರಧಾನಿ ಮೋದಿಯವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಈ ಸಮಯದಲ್ಲಿ ಉಕ್ರೇನ್ ಸಂಘರ್ಷವನ್ನು ಉಲ್ಲೇಖಿಸಿ ಮಾತನಾಡಿರುವ ಪ್ರಧಾನಿ ಮೋದಿ, ಭಾರತ ಯಾವಾಗಲೂ ಶಾಂತಿಯನ್ನು ಬೆಂಬಲಿಸುತ್ತದೆ ಮತ್ತು ಶಾಂತಿಯ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಉಕ್ರೇನ್ ಬಿಕ್ಕಟ್ಟು ಆರಂಭವಾದಾಗಿನಿಂದ ನಾವು ನಿರಂತರ ಚರ್ಚೆ ನಡೆಸಿದ್ದೇವೆ. ಕಾಲಕಾಲಕ್ಕೆ, ನೀವು ಕೂಡ, ನಿಜವಾದ ಸ್ನೇಹಿತರಾಗಿ, ಎಲ್ಲದರ ಬಗ್ಗೆ ನಮಗೆ ಮಾಹಿತಿ ನೀಡುತ್ತಿದ್ದೀರಿ. ನಂಬಿಕೆ ಒಂದು ದೊಡ್ಡ ಶಕ್ತಿ ಎಂದು ನಾನು ನಂಬುತ್ತೇನೆ, ನಾನು ಈ ವಿಷಯವನ್ನು ನಿಮ್ಮೊಂದಿಗೆ ಹಲವು ಬಾರಿ ಚರ್ಚಿಸಿದ್ದೇನೆ. ಅದನ್ನು ಪ್ರಪಂಚದ ಮುಂದೆ ಇರಿಸಿದ್ದೇನೆ ಎಂದಿದ್ದಾರೆ.

ರಾಷ್ಟ್ರಗಳ ಕಲ್ಯಾಣವು ಶಾಂತಿಯ ಹಾದಿಯಲ್ಲಿದೆ. ಒಟ್ಟಾಗಿ, ನಾವು ಜಗತ್ತನ್ನು ಆ ಹಾದಿಯತ್ತ ಕೊಂಡೊಯ್ಯುತ್ತೇವೆ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಪ್ರಯತ್ನಗಳೊಂದಿಗೆ, ಜಗತ್ತು ಮತ್ತೊಮ್ಮೆ ಶಾಂತಿಯ ದಿಕ್ಕಿಗೆ ಮರಳುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಪುಟಿನ್‌ ಅವರ ಈ ಭೇಟಿಯು ಐತಿಹಾಸಿಕವಾಗಿದೆ. ಉಕ್ರೇನ್‌ ಬಿಕ್ಕಟ್ಟಿನ ಬಗ್ಗೆ ನಾವು ನಿರಂತರವಾಗಿ ಚರ್ಚಿಸುತ್ತಿದ್ದೇವೆ. ರಷ್ಯಾ ಶಾಂತಿ ಮಾರ್ಗ ಕಂಡುಕೊಳ್ಳಬೇಕಿದೆ. ಏಕೆಂದರೆ ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದರೆ ಮಾತ್ರ ವಿಶ್ವಕ್ಕೆ ಪ್ರಯೋಜನವಾಗುತ್ತದೆ. ಶಾಂತಿಗಾಗಿ ನಾವು ಎಲ್ಲಾ ಪ್ರಯತ್ನಗಳನ್ನ ಮಾಡುತ್ತೇವೆ. ಉಕ್ರೇನ್-ರಷ್ಯಾ ಸಂಘರ್ಷ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ ಎಂದು ಪುನರ್ ಉಚ್ಛರಿಸಿದರು.

ಇದೇ ವೇಳೆ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌, ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಅವರ ಪ್ರಯತ್ನಗಳನ್ನ ಶ್ಲಾಘಿಸಿದರು.

ಇದಕ್ಕೂ ಮುನ್ನ ಭಾರತ ಪ್ರವಾಸದಲ್ಲಿರುವ ಪುಟಿನ್‌ ಅವರು ರಾಷ್ಟ್ರಪತಿ ಭವನಕ್ಕೆ ಆಗಮಿಸುತ್ತಿದ್ದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.

ಅದ್ಧೂರಿ ಸಂಗೀತದ ಮೂಲಕ ರೆಡ್‌ ಕಾರ್ಪೆಟ್‌ ಹಾಸಿ ಪುಟಿನ್‌ಗೆ ಸ್ವಾಗತ ಕೋರಲಾಯಿತು. ಅಲ್ಲದೇ, ಸೇನಾಪಡೆ ಸಿಬ್ಬಂದಿ 21 ಗನ್‌ ಸೆಲ್ಯೂಟ್‌, ಮಿಲಿಟರಿ ಶಿಸ್ತು ಮತ್ತು ಸಕಲ ಗೌರವ ಸಲ್ಲಿಸಿದವು.

ಈ ನಡುವೆ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು, ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಅವರ ಪ್ರಯತ್ನಗಳನ್ನು ಶ್ಲಾಘಿಸಿದರು. ನನ್ನನ್ನು ಭಾರತಕ್ಕೆ ಆಹ್ವಾನಿಸಿದ್ದಕ್ಕೆ ತುಂಬಾ ಧನ್ಯವಾದಗಳು. ಉಕ್ರೇನ್‌ನಲ್ಲಿನ ಪರಿಸ್ಥಿತಿ ಕುರಿತು ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಿದ್ಧರಿದ್ದೇವೆ, ಶಾಂತಿ ಸ್ಥಾಪನೆಗಾಗಿ ಅಮೆರಿಕಾ ಸೇರಿದಂತೆ ಕೆಲವು ಪಾಲುದಾರರೊಂದಿಗೆ ಒಟ್ಟಾಗಿ ಮಾತನಾಡುತ್ತಿದ್ದೇವೆ. ಶಾಂತಿ ಸ್ಥಾಪಿಸಲು ಹರಿಹಾರ ಕಂಡುಕೊಳ್ಳಲು ಪ್ರಯತ್ನ ನಡೆಸುತ್ತಿರುವುದಕ್ಕಾಗಿ ಧನ್ಯವಾದಗಳು ಎಂದು ಹೇಳಿದರು. 

ರಷ್ಯಾ ಮತ್ತು ಭಾರತದ ನಡುವಿನ ಸಂಬಂಧವು ನಂಬಿಕೆಯನ್ನ ಆಧರಿಸಿದೆ. ನಾವು ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದರೆ ಮಾತ್ರ ಅದು ವಿಶ್ವಕ್ಕೆ ಪ್ರಯೋಜನವಾಗುತ್ತದೆ, ನಿಮ್ಮ ಪ್ರಯತ್ನವನ್ನು ಪ್ರಶಂಸಿಸುತ್ತೇವೆಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ಶುಕ್ರವಾರ ಹಲವಾರು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿದುಬಂದಿದೆ.  ಶುಕ್ರವಾರ (ಡಿಸೆಂಬರ್ 5, 2025) ಮಧ್ಯರಾತ್ರಿಯವರೆಗೆ ಎಲ್ಲಾ...

ದ್ವೇಷ ಭಾಷಣ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ, ಕಠಿಣ ಶಿಕ್ಷೆ ಪ್ರಸ್ತಾವನೆ

ಕರ್ನಾಟಕ ಸಚಿವ ಸಂಪುಟವು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆಯನ್ನು ಅಂಗೀಕರಿಸಿದೆ, ದ್ವೇಷ ಭಾಷಣಕ್ಕೆ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹50,000 ದಂಡವನ್ನು ವಿಧಿಸುವ ಕಠಿಣ ಶಿಕ್ಷೆಯ ಪ್ರಸ್ತಾವನೆಯನ್ನು ಈ...

BREAKING NEWS: ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ‘ತಾಂತ್ರಿಕ’ ಅಂತ್ಯ: 1777 ಎಕರೆ ಡಿನೋಟಿಫೈಗೆ ಒಪ್ಪಿದ ಸಚಿವ ಸಂಪುಟ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...

ಲೈಂಗಿಕ ಕಿರುಕುಳ ಆರೋಪ: ಪಾಲಕ್ಕಾಡ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರದ ಬೆನ್ನಲ್ಲೇ, ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್ 

ತಿರುವನಂತಪುರಂ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಕೇರಳ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.  ರಾಹುಲ್ ಮಮ್‌ಕೂಟತಿಲ್ ತಮ್ಮ ಶಾಸಕ...

ದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ದಲಿತರು ಒಗ್ಗಟ್ಟಾಗದೆ ಇದ್ದರೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ; ನಾವು ನೂರಿನ್ನೂರು ಜನ ಪ್ರತ್ಯೇಕ ಹೋರಾಟ ಮಾಡಿದರೆ ಪ್ರಯೋಜನವಿಲ್ಲ, ಒಂದು ಕರೆ ಕೊಟ್ಟರೆ ಲಕ್ಷಾಂತರ ಜನರು ಸೇರುವಂತಾಗಬೇಕು ಎಂದು ಲೋಕೋಪಯೋಗಿ ಸಚಿವ...