Homeಮುಖಪುಟಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು ಸಕಾಲವಾಗಿದ್ದು, ರಾಜ್ಯ ಸರ್ಕಾರವು ಅಖಂಡ ಕರ್ನಾಟಕದ ಭಾಗವಾಗಿದ್ದ ಎಲ್ಲ ಪ್ರದೇಶಗಳೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದುವಲ್ಲಿ ವಿಶೇಷ ಕ್ರಿಯಾ ಯೋಜನೆಯನ್ನೇ ರೂಪಿಸಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಕಾಸರಗೋಡಿನಿಂದ ಬೆಂಗಳೂರಿಗೆ ಆಗಮಿಸಿದ್ದ ಗಣ್ಯರ ನಿಯೋಗವನ್ನು ಭೇಟಿ ಮಾಡಿ ಮನವಿ ಸ್ವೀಕರಿಸಿದ ಅವರು, ಕರ್ನಾಟಕ ರಾಜ್ಯವು ಇದೇ ಮೊದಲ ಬಾರಿಗೆ ಗಡಿ ಭಾಗಗಳ ಸಮಸ್ಯೆಗಳನ್ನು ಅವಲೋಕಿಸಿ ಶಾಶ್ವತ ಪರಿಹಾರವನ್ನು ಕಲ್ಪಿಸುವ ಸಂಬಂಧ ಗಡಿ ಉಸ್ತುವಾರಿ ಸಚಿವರನ್ನೇ ನೇಮಿಸಿದ್ದು, ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿರಿಸಿದೆ ಎಂದರು. ಗಡಿ ಉಸ್ತುವಾರಿ ಸಚಿವರು ಕೇವಲ ಗಡಿ ಭಾಗಗಳನ್ನು ಮಾತ್ರ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಗ್ರಹಿಸದೆ ಕಾಸರಗೋಡು, ಸಾಂಗ್ಲಿ, ಸೊಲ್ಲಾಪುರದಂತಹ ಅಚ್ಚ ಕನ್ನಡ ಪ್ರದೇಶಗಳಲ್ಲಿ ವಾಸಿಸುವ ಕನ್ನಡಿಗರ ಸಮಗ್ರ ಹಿತಕ್ಕೆ ಮುಂದಾದಲ್ಲಿ ಅಖಂಡ ಕರ್ನಾಟಕ ತನ್ನ ಸಾಂಸ್ಕೃತಿಕ ಅಸ್ತಿತ್ವವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ ಎಂದ ಅವರು, ರಾಜ್ಯ ಸರ್ಕಾರವು ಇದನ್ನು ಕೇವಲ ಪರಿಹಾರ ಕಾಣದ ಗಡಿ ಸಮಸ್ಯೆ ಎಂದು ಭಾವಿಸಬಾರದೆಂದರು.

ಕಾಸರಗೋಡಿನ ಕನ್ನಡಿಗರು ಕನ್ನಡಕ್ಕೆ ಮತ್ತು ಕರ್ನಾಟಕ ಸಂಸ್ಕೃತಿಗೆ ದುಡಿದ ಗಡಿನಾಡು ಪ್ರತಿಭೆಗಳಿಗೆ ಸೂಕ್ತ ಪ್ರಶಸ್ತಿ ನೀಡಬೇಕು, ಕಾಸರಗೋಡಿನ ಸಾಂಸ್ಕೃತಿಕ ಸ್ಮಾರಕಗಳ ನಿರ್ಮಾಣ ಮತ್ತು ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು, ಕಾಸರಗೋಡಿನಲ್ಲಿ ಕನ್ನಡ ಚಲನಚಿತ್ರಗಳು ನಿಯತವಾಗಿ ಪ್ರದರ್ಶನವಾಗಬೇಕು, ಕಾಸರಗೋಡಿನ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರ ಅನುದಾನ ನೀಡಬೇಕು, ಕಾಸರಗೋಡಿನಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಕರ್ನಾಟಕದ ವಿದ್ಯಾರ್ಥಿಗಳಂತೆಯೇ ಸಮಾನವಾಗಿ ಪರಿಗಣಿಸಬೇಕೆಂಬ ಹಲವು ಅಂಶಗಳುಳ್ಳ ಮನವಿಯನ್ನು ಕಾಸರಗೋಡಿನ ನಿಯೋಗವು ತಮಗೆ ಸಲ್ಲಿಸಿದ್ದು, ಇದನ್ನು ಮುಖ್ಯಮಂತ್ರಿಗಳಿಗೆ, ಗಡಿ ಸಚಿವರಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಸಲ್ಲಿಸಿ ಮುಂಬರುವ ಆಯವ್ಯಯದಲ್ಲಿ ಹೆಚ್ಚಿನ ಹಣ ಮೀಸಲಿಡಲು ಆಗ್ರಹಿಸಲಾಗುವುದು ಎಂದು ಬಿಳಿಮಲೆ ಭರವಸೆ ನೀಡಿದರು. 

ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಶಿವರಾಜ್ ತಂಗಡಗಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಮತ್ತು  ಮಾನ್ಯ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳನ್ನು ಬಿಳಿಮಲೆಯವರ ನೇತೃತ್ವದಲ್ಲಿ ಭೇಟಿ ಮಾಡಿದ ನಿಯೋಗ ಕಾಸರಗೋಡಿನ ಕನ್ನಡಿಗರ ಬೇಡಿಕೆಗಳನ್ನು ಪರಿಗಣಿಸಲು ಮನವಿ ಮಾಡಿತು.

ನಿಯೋಗದಲ್ಲಿ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸೋಮಣ್ಣ ಬೇವಿನಮರದ, ಕೇರಳ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗೌರವ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಕಾಸರಗೋಡಿನ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ನಿವೃತ್ತ ಪ್ರಾಧ್ಯಾಪಕಿ ಡಾ. ಪ್ರಮೀಳ ಮಾಧವ್, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್ಲ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...