Homeಮುಖಪುಟ'ಜೈ ಶ್ರೀ ರಾಮ್' ಹೇಳಲು ನಿರಾಕರಿಸಿದ ಮುಸ್ಲಿಂ ಚಾಲಕನಿಗೆ ಕಿರುಕುಳ; ಬಿಜೆಪಿ ಕಾರ್ಯಕರ್ತನ ಬಂಧನ

‘ಜೈ ಶ್ರೀ ರಾಮ್’ ಹೇಳಲು ನಿರಾಕರಿಸಿದ ಮುಸ್ಲಿಂ ಚಾಲಕನಿಗೆ ಕಿರುಕುಳ; ಬಿಜೆಪಿ ಕಾರ್ಯಕರ್ತನ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಆಗ್ರಾದ 57 ವರ್ಷದ ಮುಸ್ಲಿಂ ಟ್ಯಾಕ್ಸಿ ಚಾಲಕನೊಬ್ಬ ಜೈ ಶ್ರೀರಾಮ್ ಎಂದು ಹೇಳಲು ನಿರಾಕರಿಸಿದ್ದಕ್ಕಾಗಿ ಕಿರುಕುಳ ನೀಡಿ ಹಲ್ಲೆ ನಡೆಸಿದ ಒಂದು ವಾರದ ನಂತರ, ಪ್ರಮುಖ ಆರೋಪಿ ರೋಹಿತ್ ಠಾಕೂರ್‌ನನ್ನು ಬಂಧಿಸಲಾಗಿದೆ.

ದೇಶದ ವಿವಿಧ ಭಾಗಗಳಲ್ಲಿ ಮುಸ್ಲಿಮರ ಮೇಲೆ ನಿರಂತರ ಕಿರುಕುಳ ನಡೆಯುತ್ತಿರುವ ನಡುವೆಯೇ ಈ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಸದಸ್ಯರನ್ನು ಬೆನ್ನಟ್ಟಿ ಜೈ ಶ್ರೀರಾಮ್ ಎಂದು ಕೂಗುವಂತೆ ಒತ್ತಾಯಿಸಲಾಗುತ್ತಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದ ವೀಡಿಯೊದಲ್ಲಿ, ಬಿಜೆಪಿ ಕಾರ್ಯಕರ್ತ ಎನ್ನಲಾದ ಆರೋಪಿ ಠಾಕೂರ್, ಡ್ರೈವರ್ ರಹೀಶ್ ಖಾನ್ ಎಂಬ ವೃದ್ಧ ವ್ಯಕ್ತಿಗೆ ಜೈ ಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸುತ್ತಿರುವುದು ಸೆರೆಯಾಗಿದೆ. ಕ್ಯಾಬ್ ಚಾಲಕ ದುಃಖ ವ್ಯಕ್ತಪಡಿಸಿ, “ನಿಮ್ಮ ಕೆಲಸ ನೋಡಿಕೊಳ್ಳಿ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಠಾಕೂರ್, “ಎರಡು ಅಥವಾ ಮೂರು ದಿನಗಳಲ್ಲಿ, ನೀವು ಜೈ ಶ್ರೀರಾಮ್ ಎಂದು ಹೇಳಬೇಕಾಗುತ್ತದೆ” ಎಂದು ಹೇಳಿದ್ದಾನೆ.

ಠಾಕೂರ್ ತನ್ನ ಫೇಸ್‌ಬುಕ್ ಪುಟದಲ್ಲಿ, “ಇವರು ನಿಜವಾದ ಭಯೋತ್ಪಾದಕರು” ಎಂಬ ಶೀರ್ಷಿಕೆಯೊಂದಿಗೆ ಆತನೇ ವೀಡಿಯೊ ಅಪ್‌ಲೋಡ್ ಮಾಡಿದ್ದಾನೆ.

ವರದಿಗಳ ಪ್ರಕಾರ, ಮತ್ತೊಬ್ಬ ವ್ಯಕ್ತಿಯೊಂದಿಗೆ ಬಂದ ಠಾಕೂರ್ ಮುಸ್ಲಿಂ ಚಾಲಕರ ಮೇಲೆ ಹಲ್ಲೆ ನಡೆಸಿದ್ದಾರೆ. “… ನಾನು ಜೈ ಶ್ರೀರಾಮ್ ಎಂದು ಹೇಳಲು ನಿರಾಕರಿಸಿದಾಗ, ಅವರು ನನ್ನ ಗಡ್ಡವನ್ನು ಎಳೆದು ನನ್ನ ಕೆನ್ನೆಗೆ ಹೊಡೆದರು” ಎಂದು ಅವರು ಹೇಳಿದರು.

ಈ ಮಧ್ಯೆ, 38 ವರ್ಷಗಳಿಂದ ಕ್ಯಾಬ್ ಚಾಲಕರಾಗಿರುವ ಖಾನ್ ಒಂದು ತಿಂಗಳ ಹಿಂದೆ ಸಾಲದ ಮೇಲೆ ಸ್ವಂತ ಕಾರು ಖರೀದಿಸಿದ್ದರು ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ. ಘಟನೆಯ ದಿನ, ಅವರು ಆಗ್ರಾ ಕ್ಯಾಂಟ್ ರೈಲ್ವೆ ನಿಲ್ದಾಣದಿಂದ ತಾಜ್ ಮಹಲ್ ಮೆಟ್ರೋ ಪಾರ್ಕಿಂಗ್‌ಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗಿದ್ದರು. ಅವರು ಕಾರನ್ನು ನಿಲ್ಲಿಸುತ್ತಿದ್ದಾಗ, ಠಾಕೂರ್ ಮತ್ತು ಅವರ ಸಹಚರರು ಅವರ ಬಳಿಗೆ ಬಂದು ಕಿರುಕುಳ ನೀಡಿದ್ದಾರೆ.

ಉತ್ತರ ಪ್ರದೇಶದ ಪತ್ರಕರ್ತ ಮದನ್ ಮೋಹನ್ ಸೋನಿ ಪ್ರಕಾರ, ಡಿಸೆಂಬರ್ 2 ರಂದು ಠಾಕೂರ್ ಅವರನ್ನು ಆಗ್ರಾ ಪೊಲೀಸರು ಬಂಧಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಠಾಕೂರ್ ಅವರ ಫೇಸ್‌ಬುಕ್ ಪುಟದಲ್ಲಿ, ಅವರು ಬಿಜೆಪಿ ಮತ್ತು ನರೇಂದ್ರ ಮೋದಿಗೆ ತಮ್ಮ ಬೆಂಬಲವನ್ನು ಬಹಿರಂಗವಾಗಿ ತೋರಿಸಿದ್ದಾರೆ. ಘಟನೆಯ ಸ್ವಲ್ಪ ಸಮಯದ ನಂತರ ಅವರು ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಕೆಂಪು ಕೋಟೆಯಲ್ಲಿ ಮುಸ್ಲಿಂ ಸಂದರ್ಶಕರನ್ನು ಚಿತ್ರೀಕರಿಸುವಾಗ, ಠಾಕೂರ್ ಇಸ್ಲಾಮೋಫೋಬಿಕ್ ನಿಂದನೆ ಬಳಸುವುದು ಸೆರೆಯಾಗಿದೆ. ಒಂದು ಹಂತದಲ್ಲಿ, ಅವರು ಒಬ್ಬ ವ್ಯಕ್ತಿಯನ್ನು ನಿಲ್ಲಿಸಿ ಅದೇ ರೀತಿಯಲ್ಲಿ ಜೈ ಶ್ರೀರಾಮ್ ಎಂದು ಹೇಳಲು ಒತ್ತಾಯಿಸಿದ್ದಾನೆ.

ಆತ ತನ್ನ ಫೇಸ್‌ಬುಕ್ ಪುಟದಲ್ಲಿ ಮುಸ್ಲಿಂ ಪುರುಷರಿಗೆ ಕಿರುಕುಳ ನೀಡುವುದು, ಜೈ ಶ್ರೀರಾಮ್ ಎಂದು ಜಪಿಸುವಂತೆ ಒತ್ತಾಯಿಸುವುದು ಅಥವಾ ಇಸ್ಲಾಮೋಫೋಬಿಕ್ ನಿಂದನೆಗಳನ್ನು ಬಳಸುವುದು ಮುಂತಾದ ವೀಡಿಯೊಗಳಿವೆ. ನವೆಂಬರ್ 24 ರಂದು ಅಪ್‌ಲೋಡ್ ಮಾಡಲಾದ ಒಂದು ವೀಡಿಯೊದಲ್ಲಿ, ತಾಜ್ ಮಹಲ್ ವಾಸ್ತವವಾಗಿ ತೇಜೋ ಮಹಾಲಯ ಎಂದು ಆತ ಜೋರಾಗಿ ಹೇಳಿಕೊಳ್ಳುತ್ತಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...