Homeಮುಖಪುಟಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ

ಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ

- Advertisement -
- Advertisement -

ಬುದ್ಧನ ತತ್ವಗಳು, ಬಸವ- ಅಲ್ಲಮರ ಚಿಂತನೆಗಳು, ಬಾಬಾ ಸಾಹೇಬರ ವಿಚಾರಗಳು , ನಮ್ಮ ಸಂವಿಧಾನದ ದಿಕ್ಸೂಚಿಗಳು ಹಾಗೂ ಕಳೆದ 75 ವರ್ಷಗಳಿಂದ ಸ್ಕ್ಯಾಂಡಿನೇವಿಯನ್ ದೇಶಗಳು ಒಂದು ಮಟ್ಟಿಗೆ ಸಾಧಿಸಿದ ಆಧುನಿಕ‌ ಮಾನವೀಯ‌- ವೈಜ್ಞಾನಿಕ ಸಂರಚನೆಗಳು ಇಷ್ಟು ಸಾಕು ಜಗತ್ತು ಮತ್ತು ಅದರೊಳಗಣ ಭಾರತ ಜೀವಂತವಾಗಿ ಇನ್ನಷ್ಟು ವರ್ಷಗಳ ಕಾಲ ಬದುಕಲು.

ಆದರೆ;

ಸರ್ವಾಧಿಕಾರಿ ಫ್ಯಾಸಿಸ್ಟ್ ವ್ಯವಸ್ಥೆಗಳು ಮನುಷ್ಯರು ಬದುಕಬಹುದಾದ ಅವಕಾಶಗಳನ್ನೆ ನಾಶ ಮಾಡುತ್ತಿವೆ.
ಪ್ರಭುತ್ವವಷ್ಟೆ ಫ್ಯಾಸಿಸಮ್ಮನ್ನು ಹುಟ್ಟಿ ಹಾಕುವುದಿಲ್ಲ ಎಂಬ ಅಂಬರ್ಟೊ‌ ಎಕೊನ ಚಿಂತನೆಗಳನ್ನು ಸಹಾನುಭೂತಿಯಿಂದ ನೋಡಬೇಕಾಗಿದೆ.
ಪ್ರಭುತ್ವ ಎನ್ನುವುದಕ್ಕಿಂತ
ವ್ಯವಸ್ಥೆ ಎನ್ನುವುದು ಹೆಚ್ಚು ಸೂಕ್ತ. ಮಧ್ಯಮ ವರ್ಗದ ಗುಮಾನಿಯ,ಆತಂಕದ , ಫೋಬಿಯಾಕಾರಕವಾದ ಮನೋಭಾವವು ತನಗೆ ಬೇಕಾದ ಪ್ರಭುತ್ವವನ್ನು ನಿರ್ಮಾಣ ಮಾಡಿಕೊಳ್ಳುವುದನ್ನು ನೋಡುತ್ತಿದ್ದೇವೆ. ಮಧ್ಯಮ ವರ್ಗವು ಹುಡುಕೀ ಹುಡುಕಿ ಫ್ಯಾಸಿಸ್ಟ್ ನಾಯಕರನ್ನು ಬೆಳೆಸುತ್ತಿದೆ.

ಹಾಗೆ ಸೃಷ್ಟಿಯಾದ ಈ‌ ನಾಯಕರು ಜೀವ ಶತ್ರುಗಳಾಗಿ ಬೆಳೆಯುತ್ತಿದ್ದಾರೆ. ಅಮೆರಿಕದಲ್ಲಿ ಫ್ಯಾಂಗ್ಸ್ ( Face book, Alphabet, Netflix, Google) ಕಂಪೆನಿಗಳು ಅಲ್ಲಿ ಫ್ಯಾಸಿಸಂ ಬೆಳೆಯಲು ಕಾರಣವಾಗುತ್ತಿವೆ‌. ಜಗತ್ತಿನ ಪ್ರಮುಖ ದೇಶಗಳಲ್ಲಿ ಈ ರೀತಿಯ ಬೃಹತ್ ಬಂಡವಾಳಿಗ ಕುಳಗಳು ಹಾಗೂ ಇವುಗಳಿಗೆ ಪೂರಕವಾಗಿ ದುಡಿಯುವವರು ಜನರಲ್ಲಿ ಫ್ಯಾಸಿಸ್ಟ್ ಮನಸ್ಥಿತಿಗೆ ಬೇಕಾದ Consentನ್ನು ಉತ್ಪಾದಿಸುತ್ತಿದ್ದಾರೆ.

ಇದರ ಅಪಾಯಗಳ ಕುರಿತು ಜನರಿಗೆ ತಿಳಿ ಹೇಳಬೇಕಾದ ಚಳುವಳಿಗಳು ಹಾಗೂ ಚಿಂತಕರು ಸೋತು ಹೋದಂತೆ ಕಾಣಿಸುತ್ತಿದ್ದಾರೆ. ಸಮಾಜಗಳು ಗದ್ದಲಗಳ ಗ್ರಾಹಕರಾಗಿ ಸ್ಮಾರ್ಟ್ ಫೋನುಗಳಲ್ಲಿ ಮುಳುಗಿವೆ.

ಆದರೂ ಕವಿಯುತ್ತಿರುವ ಕಗ್ಗತ್ತಲಿಗೆ ದಿಕ್ಕೆಡಲೇಬೇಕು.‌ ಹಾಗೆ ದಿಕ್ಕೆಟ್ಟ. ಕ್ಷಣ. ಬುದ್ಧ, ಜೀಸಸ್, ಪೈಗಂಬರ್, ಬಸವ- ಅಲ್ಲಮ, ಅಂಬೇಡ್ಕರ್, ನಾರಾಯಣಗುರು, ಗಾಂಧಿ ಬೇಕಾಗುತ್ತಾರೆ.

ಆದರೆ ಇತ್ತೀಚೆಗೆ ಎಲಾನ್ ಮಸ್ಕ್ ಮೂರನೇ ಮಹಾಯುದ್ಧ ಹತ್ತಿರದಲ್ಲೆ ಇದೆ ಎಂದಾಗ ಎದೆ ಧಸಕ್ಕೆಂದಿದ್ದಂತೂ ನಿಜ.

ಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ.

ಡಾ. ನೆಲ್ಕುಂಟೆ ವೆಂಕಟೇಶಯ್ಯ,

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...