Homeಮುಖಪುಟಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

- Advertisement -
- Advertisement -

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು ‘ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್’ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಬ್ಲಾಕ್ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಬುಡಕಟ್ಟು ಗುಂಪುಗಳನ್ನು ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರಯತ್ನಗಳು ವಿಫಲವಾದವು.

ಅಧಿಕಾರಿಗಳ ಪ್ರಕಾರ, 79 ಬುಡಕಟ್ಟು ನಿವಾಸಿಗಳು ಮಾಝಿ ಸರ್ಕಾರ್ ಅನ್ನು ಪ್ರತಿನಿಧಿಸುತ್ತೇವೆ ಎಂದು ಹೇಳಿಕೊಳ್ಳುವ ಹೊರಗಿನವರಿಂದ ಪ್ರಭಾವಿತರಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಿಲ್ಲ. ಗ್ರಾಮಸ್ಥರು ಗುಂಪಿನಿಂದ ಗುರುತಿನ ಚೀಟಿಗಳನ್ನು ಪಡೆದುಕೊಂಡಿದ್ದಾರೆ, ಭಾರತೀಯ ಸರ್ಕಾರಿ ಪೌರತ್ವವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಹೇಳಿದರು.

ರಾಣಿಬಂಧ್ ಬಿಡಿಒ ಅನಿಶಾ ಯಶ್ ಮತ್ತು ಖಾತ್ರಾ ಎಸ್‌ಡಿಪಿಒ ಅಭಿಷೇಕ್ ಯಾದವ್ ಮತದಾರರ ನೋಂದಣಿಯ ಮಹತ್ವವನ್ನು ವಿವರಿಸಿದರು. ಆದರೆ ನಿವಾಸಿಗಳು ಮಾತ್ರ ಭಾಗವಹಿಸದೇ ಇರಲು ದೃಢವಾಗಿ ನಿಂತರು.

“ನಾವು ಎರಡು ಕಾಲುಗಳ ಮೇಲೆ ನಡೆಯುವುದಿಲ್ಲ. ನಾವು ಮಾಝಿ ಸರ್ಕಾರ್‌ನಲ್ಲಿ ನಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಾಗ, ನಾವು ಭಾರತ ಸರ್ಕಾರದ ನಾಗರಿಕರಾಗಿ ಉಳಿಯುವುದಿಲ್ಲ” ಎಂದು ನಿವಾಸಿಯೋರ್ವರು ಹೇಳಿರುವುದಾಗಿ ವರದಿಯಾಗಿದೆ.

ಗ್ರಾಮಗಳಿಗೆ ಭೇಟಿ ನೀಡಿ ಮತದಾರರ ನೋಂದಣಿ ಕುರಿತು ಜಾಗೃತಿ ಅಭಿಯಾನಗಳನ್ನು ಮುಂದುವರಿಸಲು ಯೋಜಿಸಿರುವುದಾಗಿ ಆಡಳಿತ ತಿಳಿಸಿದೆ.

“ನಾವು ಮತ್ತೆ ಹಳ್ಳಿಗಳಿಗೆ ಹೋಗಿ ಜನರನ್ನು ಮನವೊಲಿಸಲು ಪ್ರಯತ್ನಿಸುತ್ತೇವೆ. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದು ಏಕೆ ಮುಖ್ಯ ಎಂಬುದರ ಕುರಿತು ನಾವು ನಿರಂತರವಾಗಿ ಪ್ರಚಾರ ಮಾಡುತ್ತೇವೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲಾ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ. ಯಾವುದೇ ಅನರ್ಹ ಮತದಾರರನ್ನು ಪಟ್ಟಿ ಮಾಡಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲು ಭಾರತದ ಚುನಾವಣಾ ಆಯೋಗವು ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅನ್ನು ನಡೆಸುತ್ತದೆ.

ಉತ್ತರ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಲಕ್ಷದ್ವೀಪ, ಮಧ್ಯಪ್ರದೇಶ, ಪುದುಚೇರಿ, ರಾಜಸ್ಥಾನ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದೆ.

ಈ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆಗಳು ನಡೆಯಲಿವೆ ಎಂಬುದನ್ನು ಗಮನಿಸಬಹುದು. ಅವುಗಳೆಂದರೆ, ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ.

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಡಿಸೆಂಬರ್ 11 ರಂದು ಎಣಿಕೆ ಅವಧಿ ಮತ್ತು ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆಯೊಂದಿಗೆ ಪ್ರಾರಂಭವಾಗುತ್ತದೆ. ಡಿಸೆಂಬರ್ 12 ರಿಂದ 15 ರವರೆಗೆ, ನಿಯಂತ್ರಣ ಕೋಷ್ಟಕವನ್ನು ನವೀಕರಿಸಲಾಗುತ್ತದೆ. ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ, ಇದನ್ನು ಡಿಸೆಂಬರ್ 16 ರಂದು ಪ್ರಕಟಿಸಲಾಗುತ್ತದೆ.

ಡಿಸೆಂಬರ್ 16 ಮತ್ತು ಜನವರಿ 15 ರ ನಡುವೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಆದರೆ ಸೂಚನೆ ಹಂತವು ಫೆಬ್ರವರಿ 7 ರವರೆಗೆ ಮುಂದುವರಿಯುತ್ತದೆ. ಫೆಬ್ರವರಿ 14 ರಂದು ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...

ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ ‘ಜಾತ್ಯತೀತ ಜನತಾದಳ’ ನಾಯಕ ಕುಮಾರಸ್ವಾಮಿ

ಭಗವದ್ಗೀತೆಯನ್ನು 'ಪವಿತ್ರ ಗ್ರಂಥ' ಎಂದಿರುವ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ, ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಭಗವದ್ಗೀತೆ ಬೋಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೇಂದ್ರ ಶಿಕ್ಷಣ...

‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಆರ್‌ಟಿ) ಪಠ್ಯಪುಸ್ತಕವನ್ನು 'ಲವ್ ಜಿಹಾದ್' ಪಿತೂರಿಯೊಂದಿಗೆ ಜೋಡಿಸುವ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಮಂಗಳವಾರ (ಡಿಸೆಂಬರ್...

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಪ್ರಪ್ರಥಮ ‘ಫಿಫಾ ಶಾಂತಿ’ ಪ್ರಶಸ್ತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಹೊಸ ಫಿಫಾ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ನೀಡಲಾಯಿತು. ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಬಹಿರಂಗವಾಗಿ ಆಸೆ ವ್ಯಕ್ತಪಡಿಸಿದ್ದ ಅವರಿಗೆ, ಹೊಸದಾಗಿ ರಚಿಸಲಾದ ಫಿಫಾ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಟ್ರಂಪ್...

ಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ

ಬುದ್ಧನ ತತ್ವಗಳು, ಬಸವ- ಅಲ್ಲಮರ ಚಿಂತನೆಗಳು, ಬಾಬಾ ಸಾಹೇಬರ ವಿಚಾರಗಳು , ನಮ್ಮ ಸಂವಿಧಾನದ ದಿಕ್ಸೂಚಿಗಳು ಹಾಗೂ ಕಳೆದ 75 ವರ್ಷಗಳಿಂದ ಸ್ಕ್ಯಾಂಡಿನೇವಿಯನ್ ದೇಶಗಳು ಒಂದು ಮಟ್ಟಿಗೆ ಸಾಧಿಸಿದ ಆಧುನಿಕ‌ ಮಾನವೀಯ‌- ವೈಜ್ಞಾನಿಕ...

ಮಧ್ಯಪ್ರದೇಶ| ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟ ಚಿರತೆ ಮರಿ ಸಾವು

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡಿಗೆ ಬಿಟ್ಟ ಒಂದು ದಿನದ ನಂತರ ಚಿರತೆ ಮರಿ ಸಾವನ್ನಪ್ಪಿದೆ ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಗುರುವಾರ ಅಂತರರಾಷ್ಟ್ರೀಯ ಚಿರತೆ ದಿನದ...