Homeಮುಖಪುಟರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

- Advertisement -
- Advertisement -

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ (ಡಿಸೆಂಬರ್ 6) ಪತ್ರ ಬರೆದಿದ್ದಾರೆ.

ವಿಮಾನ ಪ್ರಯಾಣಿಕರ ಸುರಕ್ಷತೆಗಾಗಿ ತಂದ ನಿಯಮವನ್ನು ವಿಮಾನಯಾನ ಸಂಸ್ಥೆಗಳು ತಮ್ಮ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡವರು, ಜನರಿಗೆ ಅತಿ ಹೆಚ್ಚು ದರ ವಿಧಿಸಿದವು. ಆ ನಂತರ ನಿಯಮವೇ ವಿಫಲವಾದಾಗ ಅದನ್ನು ರದ್ದುಗೊಳಿಸಿ ಸರ್ಕಾರ ಮತ್ತು ವಿಮಾನಯಾನ ನಿಯಂತ್ರಣ ಪ್ರಾಧಿಕಾರಗಳು ತಮ್ಮ ದೊಡ್ಡ ತಪ್ಪನ್ನು ಮುಚ್ಚಿಹಾಕಿದವು ಎಂಬುದು ಜಾನ್ ಬ್ರಿಟ್ಟಾಸ್ ಅವರ ಮುಖ್ಯ ಆರೋಪವಾಗಿದೆ.

“ದೇಶದ ಅತಿ ದೊಡ್ಡ ವಿಮಾನಯಾನ ಕಂಪನಿಯಾದ ಇಂಡಿಗೋ (ಇದು ದೇಶೀಯ ಮಾರುಕಟ್ಟೆಯಲ್ಲಿ 63-65% ಪಾಲನ್ನು ಹೊಂದಿದೆ) ಇದ್ದಕ್ಕಿದ್ದಂತೆ ಸಾವಿರಾರು ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ಅಥವಾ ತಡಮಾಡಿದ್ದರಿಂದ ದೇಶದಾದ್ಯಂತ ವಿಮಾನ ಪ್ರಯಾಣ ವ್ಯವಸ್ಥೆ ಸಂಪೂರ್ಣವಾಗಿ ತತ್ತರಿಸಿ ಹೋಯಿತು”

“ಒಂದೇ ಖಾಸಗಿ ಕಂಪನಿಗೆ ಇಷ್ಟೊಂದು ದೊಡ್ಡ ಮಾರುಕಟ್ಟೆ ಪ್ರಾಬಲ್ಯ (monopoly) ಇರುವುದರಿಂದ, ಆ ಒಂದು ಕಂಪನಿಯ ವೈಫಲ್ಯವೇ ಒಟ್ಟಾರೆಯಾಗಿ ದೇಶದ ವಿಮಾನಯಾನ ವ್ಯವಸ್ಥೆಯ ವೈಫಲ್ಯವಾಗಿ ಪರಿಣಮಿಸಿತು”

“ಇದರಿಂದ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ನೆಲದಲ್ಲಿ ಮಲಗುವ ಪರಿಸ್ಥಿತಿ ಉಂಟಾಯಿತು. ತೀವ್ರ ಆನಾರೋಗ್ಯದಿಂದ ಇದ್ದ ತಮ್ಮ ಸಂಬಂಧಿಕರನ್ನು ತುರ್ತಾಗಿ ನೋಡಲು ಹೊರಟವರು, ಮೃತ ಸಂಬಂಧಿಕರ ಮುಖವನ್ನು ಕೊನೆಯದಾಗಿ ಕಾಣಲು ತೆರಳುತ್ತಿದ್ದವರು, ಆಪ್ತರ ಮದುವೆಯಲ್ಲಿ ಪಾಲ್ಗೊಳ್ಳಲು ಹೊರಟವರು, ಉದ್ಯೋಗ ಸಂದರ್ಶನಕ್ಕೆ ಹಾಜರಾಗಲು ಅಥವಾ ಕೆಲಸದ ಮೊದಲ ದಿನ ಕಚೇರಿಗೆ ತೆರಳಲು ಹೊರವರು ಸೇರಿದಂತೆ ಸಾವಿರಾರು ಜನರು ಸಂಕಷ್ಟಗಳನ್ನು ಎದುರಿಸಿದರು. ಹಾಗಾಗಿ, ವಿಮಾನಯಾನ ಬಿಕ್ಕಟ್ಟಿನಿಂದ ಉಂಟಾದ ಮಾನವೀಯ ನೋವು ಮತ್ತು ಆರ್ಥಿಕ ನಷ್ಟ ಎರಡೂ ಎಂದಿಗೂ ಕಂಡಿರದಷ್ಟು ದೊಡ್ಡದು ಮತ್ತು ಸಾಕ್ಷ್ಯಕ್ಕೆ ನಿಲುಕದ್ದು” ಎಂದು ಜಾನ್ ಬ್ರಿಟ್ಟಾಸ್ ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ಒತ್ತಡವನ್ನು ಮೊದಲೇ ಊಹಿಸಬಹುದಾಗಿದ್ದರೂ, ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದ ನಂತರ, ಮೊದಲು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದ ಸುರಕ್ಷಾ ನಿಯಮಗಳನ್ನೇ ತುರ್ತಾಗಿ ದುರ್ಬಲಗೊಳಿಸಲಾಯಿತು ಅಥವಾ ಹಿಂತೆಗೆದುಕೊಳ್ಳಲಾಯಿತು. ಇದು ಗಂಭೀರವಾದ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ: ಪ್ರಯಾಣಿಕರ ಸುರಕ್ಷತೆಯನ್ನು ಕೇವಲ ವ್ಯಾಪಾರಿ ಲಾಭ ಮತ್ತು ಸೌಲಭ್ಯಕ್ಕಾಗಿ ತ್ಯಾಗ ಮಾಡಲಾಯಿತೇ? ಎಂದು ಬ್ರಿಟ್ಟಾಸ್ ಪ್ರಶ್ನಿಸಿದ್ದಾರೆ.

ವಿಮಾನಯಾನವನ್ನು ನೋಡಿಕೊಳ್ಳುವ ಸರ್ಕಾರದ ನಿಯಂತ್ರಣ ಸಂಸ್ಥೆಗಳು ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಎರಡು ದೊಡ್ಡ ವಿಮಾನ ಕಂಪನಿಗಳು ಬಹುತೇಕ ಎಲ್ಲಾ ವಿಮಾನ ಸೇವೆಗಳನ್ನು ತಮ್ಮ ಕಬಳಿಕೆಯಲ್ಲಿ ಇಟ್ಟುಕೊಂಡಿವೆ, ಇದರಿಂದ ಇತರ ಕಂಪನಿಗಳಿಗೆ ಸ್ಪರ್ಧೆ ಮಾಡುವ ಅವಕಾಶ ಕಡಿಮೆಯಾಗುತ್ತಿದೆ.

ಅದೇ ಸಮಯದಲ್ಲಿ, ಹಲವಾರು ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗಿ ಕಂಪನಿಗಳಿಗೆ ವಹಿಸಲಾಗಿ, ಅವುಗಳನ್ನು ವ್ಯವಹಾರದಂತೆ ನಡೆಸಲಾಗುತ್ತಿದೆ. ಇದರ ಪರಿಣಾಮವಾಗಿ ಹೊಸ ವಿಮಾನ ನಿಲ್ದಾಣಗಳು ಅಥವಾ ಚಿಕ್ಕ ಪ್ರಾದೇಶಿಕ ವಿಮಾನ ನಿಲ್ದಾಣಗಳಿಗೆ ಬೆಳೆಯಲು ಅವಕಾಶ ಸಿಗುತ್ತಿಲ್ಲ.

“ಇದಲ್ಲದೆ, ವಿಮಾನಗಳ ಸುರಕ್ಷತಾ ನಿಯಮಗಳನ್ನು ಕೂಡ ಸಡಿಲಗೊಳಿಸಲಾಗುತ್ತಿದೆ. ವಿಮಾನಯಾನ ಕಂಪನಿಗಳು ಜನರಿಂದ ಹೆಚ್ಚು ಹಣ ವಸೂಲಿ ಮಾಡಿ ಲಾಭ ಪಡೆಯುತ್ತಿದ್ದರೂ, ಸರ್ಕಾರ ಇದನ್ನು ತಡೆಯಲು ಕ್ರಮಕೈಗೊಳ್ಳುತ್ತಿಲ್ಲ. ಸರ್ಕಾರಕ್ಕೆ ಅಧಿಕಾರವೂ ಇದೆ, ಸಂಸತ್ ಸಮಿತಿಯ ಸಲಹೆಯೂ ಇದೆ. ಆದರೂ, ಅವರು ಸರಿಯಾದ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ” ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಆರೋಪಿಸಿದ್ದಾರೆ.

“ವಿಮಾನಯಾನ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳು ತುಂಬಾ ಗಂಭೀರವಾದದ್ದು, ಅದನ್ನು ಆಂತರಿಕ ಪರಿಶೀಲನೆಗಳು ಅಥವಾ ಸಲಹಾ ಪತ್ರಗಳ ಮೂಲಕ ಸರಿಪಡಿಸುವುದು ಸಾಧ್ಯವಿಲ್ಲ. ಸರ್ಕಾರದ ಮೇಲಿನ ಜನರ ನಂಬಿಕೆ ಉಳಿಯಬೇಕಾದರೆ, ಸಂಪೂರ್ಣವಾಗಿ ಸ್ವತಂತ್ರ, ಪಾರದರ್ಶಕ ಮತ್ತು ನಿಗದಿತ ಅವಧಿಯಲ್ಲಿ ಮುಗಿಯುವ ದೊಡ್ಡ ತನಿಖೆಯನ್ನು ಆರಂಭಿಸಬೇಕು. ಈ ತನಿಖೆಗೆ ನಿಯಂತ್ರಣ ಇಲಾಖೆಯ ದಾಖಲೆಗಳು, ವಿಮಾನಯಾಣ ಕಂಪನಿಗಳು ಎಷ್ಟು ಸಿದ್ಧವಾಗಿದ್ದವು ಎಂಬ ಮಾಹಿತಿಗಳು, ಹಾಗೂ ಟಿಕೆಟ್ ದರ ಏರಿಕೆಯ ವಿವರಗಳು ಎಲ್ಲವೂ ಲಭ್ಯವಾಗಬೇಕು. ಈ ಎಲ್ಲಾ ವಿಷಯಗಳನ್ನು ಸಂಪೂರ್ಣವಾಗಿ ಪರಿಶೀಲಿಸಲು ಒಂದು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಥವಾ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಬೇಕು. ಜೊತೆಗೆ, ದೊಡ್ಡ ಪ್ರಮಾಣದ ವಿಳಂಬಗಳು ಅಥವಾ ಸೇವಾ ವ್ಯತ್ಯಯಗಳು ಸಂಭವಿಸಿದಾಗ ಪ್ರಯಾಣಿಕರಿಗೆ ಸ್ವಯಂ ಪರಿಹಾರ, ನ್ಯಾಯಯುತ ಸೇವೆ ಮತ್ತು ಪಾರದರ್ಶಕ ಟಿಕೆಟ್ ದರ ದೊರಕುವಂತೆ ಮಾಡಲು ‘ಪ್ರಯಾಣಿಕರ ಹಕ್ಕುಗಳ ಕಾಯ್ದೆ’ಯನ್ನು ತಕ್ಷಣ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸದ ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...