Homeಅಂತರಾಷ್ಟ್ರೀಯಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ.

ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್ ಆಫ್ ದಿ ನೇಟಿವಿಟಿಯ ಹೊರಗೆ ಕ್ರಿಸ್‌ಮಸ್ ಮರವನ್ನು ಬೆಳಗಿಸಲಾಗಿದೆ. ಗಾಝಾದ ನರಮೇಧದ ನೋವಿನಿಂದ ಕಳೆದ ಎರಡು ವರ್ಷಗಳಲ್ಲಿ ಮಂಕಾಗಿದ್ದ ಜನರ ಮನಸ್ಸಿನಲ್ಲಿ, ಆ ಬೆಳಕು ಈ ಕೊಂಚ ಭರವಸೆ ಮತ್ತು ಸಮೃದ್ಧಿಯ ಕಿರಣವನ್ನು ಮೂಡಿಸಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಈ ಬಾರಿ ಕ್ರಿಸ್‌ಮಸ್‌ ಮರವನ್ನು ಬೆಳಗಿದ್ದರೂ, ಜನರಿಲ್ಲಿ ಈ ಹಿಂದಿನ ಸಂಭ್ರಮ ಇಲ್ಲ. ಜನರು ಕುಣಿದು ಕುಪ್ಪಳಿಸುವ ಮೂಲಕ ಹಬ್ಬದ ಸಂಭ್ರವನ್ನು ಅನುಭವಿಸುತ್ತಿದ್ದರು. ಆದರೆ, ಈ ಬಾರಿ ಕೇವಲ ಶಾಂತಿಯುತ ಪ್ರಾರ್ಥನೆಯಲ್ಲಿ ಮಾತ್ರ ತೊಡಗಿಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.

ಗಾಝಾ ಮತ್ತು ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ನಡೆಸಿದ ಸತತ ಎರಡು ವರ್ಷಗಳ ನರಮೇಧ ಮತ್ತು ಈಗಲೂ ಪಶ್ಚಿಮ ದಂಡೆಯಲ್ಲಿ ನಡೆಸುತ್ತಿರುವ ದೌರ್ಜನ್ಯದಿಂದ ಬೆಥ್ಲೆಹೆಮ್‌ಗೆ ಭೇಟಿ ನೀಡುವ ಜನರ ಸಂಖ್ಯೆ ಕಡಿಮೆಯಾಗಿದೆ. ಇದು ಅಲ್ಲಿನ ಪ್ರವಾಸೋದ್ಯಮದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಪರದಾಡುವಂತಾಗಿದೆ ಎಂದು ವರದಿ ಹೇಳಿದೆ.

ನಿರುದ್ಯೋಗವು ಶೇಕಡ 34ರಷ್ಟಿದೆ ಮತ್ತು ಬಡತನ ರೇಖೆಯ ಕೆಳಗೆ ವಾಸಿಸುವವರ ಸಂಖ್ಯೆ ಹೆಚ್ಚಾಗಿದೆ. ಶೇಕಡ 40ಕ್ಕೂ ಹೆಚ್ಚು ಜನರು ಜೀವಿಸಲು ಕಷ್ಟಪಡುತ್ತಿದ್ದಾರೆ ಎಂದು ಅಲ್‌-ಜಝೀರಾ ವರದಿ ತಿಳಿಸಿದೆ.

“ಕ್ರಿಸ್‌ಮಸ್ ಹೇಗಿರಬೇಕು ಎಂಬ ಸಂದೇಶವನ್ನು ನಾವು ಜಗತ್ತಿಗೆ ಸಾರುತ್ತೇವೆ. ಈ ವರ್ಷ, ಕ್ರಿಸ್‌ಮಸ್ ಶಾಂತಿಯುತವಾಗಿದ್ದರೆ, ಅದು ಇಡೀ ಜಗತ್ತಿಗೆ ಒಳ್ಳೆಯ ಸಂದೇಶವನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಸ್ಥಳೀಯ ಆಭರಣ ವಿನ್ಯಾಸಕಿ ನಾಡಿಯಾ ಹಜ್‌ಬೌನ್ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದ್ದ ಹಿನ್ನೆಲೆ, ಕಳೆದ ಎರಡು ವರ್ಷಗಳ ಕಾಲ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್ ಸಂಭ್ರಮಾಚರಣೆ ಕಳೆಗುಂದಿತ್ತು. ನಮ್ಮ ಸಹೋದರರು ಸಾಯುತ್ತಿರುವಾಗ ನಾವು ಹೇಗೆ ಸಂಭ್ರಮಪಡಲಿ ಎಂದು ಮಾನವೀಯ ಮನಸ್ಸುಳ್ಳು ಬೆಥ್ಲೆಹೆಮ್‌ನ ಜನರು ಪ್ರಶ್ನಿಸಿದ್ದರು. ಬೀದಿಗಿಳಿದು ಇಸ್ರೇಲ್‌ನ ಆಕ್ರಮಣವನ್ನು ಪ್ರತಿಭಟಿಸಿದ್ದರು.

ಕ್ಯಾಥೋಲಿಕ್ ಪಂಗಡದ ಪರಮೋಚ್ಚ ನಾಯಕರಾಗಿದ್ದ ದಿವಂಗತ ಪೋಪ್ ಫ್ರಾನ್ಸಿಸ್ ಅವರು ಇಸ್ರೇಲ್ ಆಕ್ರಮಣವನ್ನು ತೀವ್ರವಾಗಿ ಖಂಡಿಸಿದ್ದರು. ಗಾಝಾ ಜನತೆಯ ಜೊತೆ ನಿಲ್ಲುವಂತೆ ಜಾಗತಿಕ ಕ್ರೈಸ್ತ ಸಮುದಾಯಕ್ಕೆ ಕರೆ ಕೊಟ್ಟಿದ್ದರು. ಕದನ ವಿರಾಮಕ್ಕೆ ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...