Homeಮುಖಪುಟಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ...

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

- Advertisement -
- Advertisement -

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌ ಬಂಡವಾಳಶಾಹಿಗಳು ಕೆಲಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುವ ಮೂಲಕ ಉದ್ಯೋಗಿಗಳನ್ನು ಇನ್ನಷ್ಟು ಸಂಕಷ್ಟಕ್ಕೆ ನೂಕಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿಯೇ ಸರ್ಕಾರಗಳು ಕೂಡ ವರ್ತಿಸುತ್ತಿವೆ.

ಇಂತಹ ಸಂದರ್ಭದಲ್ಲಿ ದೇಶದ ಸಂಸತ್ತಿನಲ್ಲಿ ಮಹತ್ವದ ಮಸೂದೆಯೊಂದು ಮಂಡನೆಯಾಗಿದೆ. ಅದೇ ‘ಸಂಪರ್ಕ ಕಡಿತ ಹಕ್ಕು ಮಸೂದೆ’ (Right to Disconnect Bill). ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಕಾನೂನುಬದ್ಧ ಹಕ್ಕನ್ನು ಉದ್ಯೋಗಿಗಳಿಗೆ ನೀಡುವ ಈ ಮಹತ್ವದ ಮಸೂದೆಯನ್ನು ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ ಶುಕ್ರವಾರ (ಡಿಸೆಂಬರ್ 5) ಲೋಕಸಭೆಯಲ್ಲಿ ಮಂಡಿಸಿದ್ದಾರೆ.

ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ಅಧಿಕೃತ ಕೆಲಸದ ಸಮಯದ ನಂತರ ಮತ್ತು ರಜಾದಿನಗಳಲ್ಲಿ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಸಂದೇಶಗಳು ಮತ್ತು ಇಮೇಲ್‌ಗಳಿಗೆ ಪ್ರತಿಕ್ರಿಯಿಸುವಂತೆ ಉದ್ಯೋಗಿಗಳನ್ನು ಒತ್ತಾಯಿಸಬಾರದು ಎಂದು ಈ ಮಸೂದೆ ಹೇಳುತ್ತದೆ. ಶಿಸ್ತು ಕ್ರಮದ ಭಯವಿಲ್ಲದೆ, ಕರೆಗಳು ಮತ್ತು ಇಮೇಲ್‌ಗಳನ್ನು ನಿರಾಕರಿಸುವ ಹಕ್ಕನ್ನು ಇದು ಪ್ರತಿಯೊಬ್ಬ ಕೆಲಸಗಾರರಿಗೆ ನೀಡುತ್ತದೆ.

ಉದ್ಯೋಗಿಗಳು ಕೆಲಸದ ಸಮಯದ ನಂತರ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಇಮೇಲ್‌ಗಳು ಅಥವಾ ಸಂದೇಶಗಳಿಗೆ ಉತ್ತರಿಸುವ ಅಗತ್ಯವಿಲ್ಲ. ಪ್ರತಿಕ್ರಿಯಿಸಲು ನಿರಾಕರಿಸಿದ್ದಕ್ಕಾಗಿ ಯಾವುದೇ ಉದ್ಯೋಗಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತಿಲ್ಲ. ಈ ನಿಯಮ ಫೋನ್ ಕರೆಗಳು, ಪಠ್ಯ ಸಂದೇಶಗಳು, ಇಮೇಲ್‌ಗಳು, ವಿಡಿಯೋ ಕರೆಗಳು ಮುಂತಾದ ಎಲ್ಲಾ ರೀತಿಯ ಸಂವಹನಕ್ಕೂ ಅನ್ವಯಿಸುತ್ತದೆ. ಅಗತ್ಯವಿದ್ದರೆ, ಉದ್ಯೋಗದಾತರು ಮತ್ತು ಉದ್ಯೋಗಿಗಳು ತುರ್ತು ಸಂಪರ್ಕ ನಿಯಮಗಳ ಬಗ್ಗೆ ಪರಸ್ಪರ ಪೂರ್ವ ಒಪ್ಪಂದ ಮಾಡಿಕೊಂಡಿರಬೇಕು. ಕಾನೂನು ಉಲ್ಲಂಘಿಸುವ ಸಂಸ್ಥೆಗಳಿಗೆ ಒಟ್ಟು ಉದ್ಯೋಗಿ ಸಂಭಾವನೆಯ ಶೇಕಡಾ 1 ರಷ್ಟು ದಂಡ ವಿಧಿಸಲು ಮಸೂದೆ ಪ್ರಸ್ತಾಪಿಸಿದೆ.

ತುರ್ತು ನಿಯಮಗಳು

ನೌಕರರ ವೈಯಕ್ತಿಕ ಸಮಯವನ್ನು ರಕ್ಷಿಸುವುದರ ಜೊತೆಗೆ, ನಿಜವಾದ ತುರ್ತು ಪರಿಸ್ಥಿತಿಗಳನ್ನು ಪರಿಹರಿಸಲು ಒಂದು ಕಾರ್ಯವಿಧಾನವನ್ನು ಸಹ ಮಸೂದೆ ಪ್ರಸ್ತಾಪಿಸುತ್ತದೆ. ಕೆಲಸದ ಸಮಯದ ನಂತರ ನೌಕರರನ್ನು ಸಂಪರ್ಕಿಸಲು ಪರಸ್ಪರ ಒಪ್ಪಿದ ನಿಯಮಗಳನ್ನು ರೂಪಿಸಲು ಸಮಿತಿಯನ್ನು ಸ್ಥಾಪಿಸಲು ಇದು ಸಲಹೆ ನೀಡುತ್ತದೆ.

ಉದ್ಯೋಗದಾತರು ಮತ್ತು ಉದ್ಯೋಗಿ ಪರಸ್ಪರ ಪೂರ್ವ ಮಾತುಕತೆ ನಡೆಸಿ ಒಪ್ಪಿಕೊಂಡ ಸಮಯದ ಅವಧಿಯಲ್ಲಿ ಯಾವುದೇ ರೀತಿಯ ಸಂವಹನದ ಮೂಲಕ ಸಂಪರ್ಕಿಸಬಹುದು. ನೌಕರರು ಕಚೇರಿ ಸಮಯವನ್ನು ಮೀರಿ ಕೆಲಸ ಮಾಡುತ್ತಿದ್ದರೆ, ಅವರೊಂದಿಗೆ ಸಂವಹನ ನಡೆಸಬಹುದು. ಆದರೆ, ಅವರು ಸಾಮಾನ್ಯ ವೇತನ ದರದಲ್ಲಿ ಅಧಿಕಾವಧಿಗೆ ವೇತನ ಪಡೆಯುತ್ತಿರಬೇಕು ಎಂದು ಮಸೂದೆ ಹೇಳುತ್ತದೆ.

ಈ ಮಸೂದೆಯ ಅಗತ್ಯವೇನು?

ಡಿಜಿಟಲ್ ಸಂವಹನ ಸಾಧನಗಳಿಂದ ಹೆಚ್ಚಿನ ಲಾಭವಿದೆ. ಆದರೆ, ಅವುಗಳ ಮೂಲಕ ಉದ್ಯೋಗಿಗಳು ಕೆಲಸದ ಅವಧಿಯ ಹೊರತಾಗಿಯೂ ನಿರಂತರ ಸಂಪರ್ಕದಲ್ಲಿ ಇರಬೇಕು ಎಂಬ ಸಂಸ್ಕೃತಿ ಬೆಳೆದಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ನಿದ್ರಾಹೀನತೆ, ಒತ್ತಡ ಮತ್ತು ಮಾನಸಿಕ ಸುಸ್ತು, ಹಾಗೂ ಸಂದೇಶಗಳಿಗೆ ತಕ್ಷಣ ಪ್ರತಿಕ್ರಿಯಿಸಬೇಕೆಂಬ ಟೆಲಿಪ್ರೆಶರ್ ಅವುಗಳಲ್ಲಿ ಪ್ರಮುಖವಾಗಿವೆ. ಜೊತೆಗೆ, ಕೆಲಸಕ್ಕೆ ಸಂಬಂಧಿಸಿದ ಸಂದೇಶಗಳನ್ನು ನಿರಂತರವಾಗಿ ಪರಿಶೀಲಿಸುವ ಅಭ್ಯಾಸದಿಂದ ‘ಮಾಹಿತಿ ಅತಿಭಾರ’ (info-obesity) ಉಂಟಾಗುತ್ತಿದೆ ಎಂದು ಮಸೂದೆ ಹೇಳುತ್ತದೆ.

ಸುಪ್ರಿಯಾ ಸುಳೆ ಅವರು 2019ರಲ್ಲೂ ಇದೇ ರೀತಿಯ ಮಸೂದೆಯನ್ನು ಮಂಡಿಸಿದ್ದರು. ಇದೀಗ ಡಿಜಿಟಲ್ ಸಂವಹನ ಸಾಧನಗಳ ಮೂಲಕ ಉದ್ಯೋಗಿಗಳ ಮೇಲೆ ಹೇರುತ್ತಿರುವ ಒತ್ತಡವನ್ನು ಇನ್ನಷ್ಟು ವಿವರಿಸಿ ಮತ್ತು ಈ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ಹೊಸ ಮಸೂದೆ ಮಂಡಿಸಿದ್ದಾರೆ. ಭಾರತ ಪ್ರಸ್ತುತ ಜಗತ್ತಿನಲ್ಲೇ ಹೆಚ್ಚು ಬೇಡಿಕೆಯಿರುವ ವಾರಕ್ಕೆ 48 ಗಂಟೆಗಳ ಕೆಲಸದ ಮಿತಿಯನ್ನು ಅನುಸರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

"ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ" ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ...

ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್...

ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಇಂಡಿಗೋ ವಿಮಾನ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 8) ನಿರಾಕರಿಸಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರ ಈಗಾಗಲೇ ಗಮನ ಹರಿಸಿ ಕ್ರಮ ಕೈಗೊಂಡಿದೆ....

ಮಂಡ್ಯದಲ್ಲಿ ಭೀಕರ ಅಪಘಾತ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಬಿದ್ದಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ.ನಾಗತಿಹಳ್ಳಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಮಲಯಾಳಂ ನಟ ದಿಲೀಪ್ ಖುಲಾಸೆ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ (ಡಿಸೆಂಬರ್ 8) ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ ಹನಿ ಎಂ....

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆ ಇಂದಿನಿಂದ (ಡಿಸೆಂಬರ್ 8) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭಗೊಂಡಿದೆ. ಉತ್ತರ ಕರ್ನಾಟಕದ ಸಮಸ್ಯೆಗಳು, ರೈತರ ಸಂಕಷ್ಟ ಮತ್ತು ಬೆಲೆ ಏರಿಕೆಯ ವಿಷಯಗಳನ್ನು ಮುಂದಿಟ್ಟುಕೊಂಡು...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...