Homeಕರ್ನಾಟಕಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

- Advertisement -
- Advertisement -

ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆ ಇಂದಿನಿಂದ (ಡಿಸೆಂಬರ್ 8) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭಗೊಂಡಿದೆ.

ಉತ್ತರ ಕರ್ನಾಟಕದ ಸಮಸ್ಯೆಗಳು, ರೈತರ ಸಂಕಷ್ಟ ಮತ್ತು ಬೆಲೆ ಏರಿಕೆಯ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಕಟ್ಟಿ ಹಾಕಲು ವಿರೋಧಪಕ್ಷಗಳು ಸಿದ್ದತೆ ನಡೆಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯ ಜಟಾಪಟಿ ನಡೆಯುತ್ತಿದೆ ಎಂಬ ಸುದ್ದಿ ಹಿನ್ನೆಲೆ, ಸರ್ಕಾರದ ವಿರುದ್ದ ಅವಿಶ್ವಾಸ ನಿಲುವಳಿ ಮಂಡಿಸಲು ಬಿಜೆಪಿ ಯೋಜಿಸಿತ್ತು. ಆದರೆ, ಸಿಎಂ, ಡಿಸಿಎಂ ಬ್ರೇಕ್‌ ಫಾಸ್ಟ್ ಮೀಟಿಂಗ್ ಮೂಲಕ ಒಗ್ಗಟ್ಟು ಪ್ರದರ್ಶಿಸಿರುವ ಹಿನ್ನೆಲೆ, ಆ ಯೋಜನೆಯನ್ನು ಮರು ವಿಮರ್ಶೆ ನಡೆಸುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸರ್ಕಾರದ ಮೇಲೆ ಮುಗಿ ಬೀಳುವ ಸಾಧ್ಯತೆ ಇದೆ. ಆದರೆ, ಸರ್ಕಾರ ಕಬ್ಬು ಬೆಳಗಾರರ ಜೊತೆ ಸಭೆ ನಡೆಸಿ ಈಗಾಗಲೇ ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹರಿಸಿದೆ. ಮೆಕ್ಕೆ ಜೋಳಕ್ಕೆ ಸಂಬಂಧಿಸಿದಂತೆ ಪ್ರತಿ ರೈತರಿಂದ ಕ್ವಿಂಟಲ್‌ಗೆ ರೂ. 2,400 ರಂತೆ ಎಕರೆಗೆ ಒಬ್ಬ ರೈತನಿಂದ ಗರಿಷ್ಠ 80 ಕ್ವಿಂಟಲ್‌ ಮೆಕ್ಕೆ ಜೋಳ ಖರೀದಿಸುವ ಸಂಬಂಧ ಭಾನುವಾರ ಆದೇಶ ಹೊರಡಿಸಿದೆ.

ಆದರೂ, ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಬೆಳಗಾವಿಯಲ್ಲಿ ಮಂಗಳವಾರ ಪ್ರತಿಭಟನೆ ಮತ್ತು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ವರದಿಗಳು ಹೇಳಿವೆ.

ಕೃಷ್ಣಾ ಮೇಲ್ದಂಡೆ, ಮಹದಾಯಿ, ಮೇಕೆದಾಟು ಸೇರಿದಂತೆ ನೀರಾವರಿ ಯೋಜನೆಗಳ ಬಗ್ಗೆಯೂ ಸದನದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಈ ಬಾರಿಯ ಕಲಾಪದಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆಯೂ ಸೇರಿ ಸುಮಾರು 30 ಮಸೂದೆಗಳು ಮಂಡನೆಯಾಗಲಿವೆ ಎಂದು ವರದಿಯಾಗಿದೆ.

ಎಂಇಎಸ್‌, ಶಿವಸೇನೆ ಪ್ರತಿಭಟನೆ ಎಚ್ಚರಿಕೆ

ಅಧಿವೇಶನದ ಸಮಯದಲ್ಲಿ ಎಂಇಎಸ್ ಹಾಗೂ ಶಿವಸೇನೆಯ ಚಟುವಟಿಕೆಗಳು ಬಿರುಸು ಪಡೆದಿದೆ. ಹಾಗಾಗಿ, ಬೆಳಗಾವಿ ನಗರದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಈ ವರ್ಷವೂ ಎಂಇಎಸ್ ಸಂಘಟನೆ ಮಹಾಮೇಳಾವ್ ಆಯೋಜಿಸಲು ಮುಂದಾಗಿತ್ತು. ಆದರೆ, ಕನ್ನಡ ಪರ ಸಂಘಟನೆಗಳ ತೀವ್ರ ವಿರೋಧ ಹಿನ್ನೆಲೆ, ಶಾಂತಿ–ಸುವ್ಯವಸ್ಥೆಗೆ ದಕ್ಕೆ ಉಂಟಾಗುವ ಕಾರಣ ನೀಡಿ ಪೊಲೀಸರು ಕಾರ್ಯಕ್ರಮಕ್ಕೆ ಸಂಪೂರ್ಣವಾಗಿ ಅನುಮತಿ ನಿರಾಕರಿಸಿದ್ದಾರೆ.

ಅನುಮತಿ ನಿರಾಕರಿಸಿದರೂ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರು ಇಂದು ಬೆಳಗಾವಿ ನಗರದಲ್ಲಿ ತೀವ್ರ ಚಟುವಟಿಕೆ ನಡೆಸುವ ಸೂಚನೆ ನೀಡಿದ್ದಾರೆ. ಹಾಗಾಗಿ, ನಗರದ ಪ್ರಮುಖ ರಸ್ತೆ, ಚೌಕ, ಗಡಿ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...