Homeಕರ್ನಾಟಕಮಂಡ್ಯದಲ್ಲಿ ಭೀಕರ ಅಪಘಾತ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

ಮಂಡ್ಯದಲ್ಲಿ ಭೀಕರ ಅಪಘಾತ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

- Advertisement -
- Advertisement -

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಬಿದ್ದಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ.ನಾಗತಿಹಳ್ಳಿ ನಡುವೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಈ ಅಪಘಾತ ಸಂಭವಿಸಿದೆ. 

ಮೃತರನ್ನು ಸರೋಜಮ್ಮ(38), ಅವರ ಪತಿ ಸಿದ್ದೇಗೌಡ(45) ಮತ್ತು ಸಾವಿತ್ರಮ್ಮ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಚಿಕ್ಕಮಗಳೂರಿನವರು. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಬಿಂಡಿಗನವಿಲೆ ಪೊಲೀಸ್ ಠಾಣೆಯ ಪಿಎಸ್ಐ ಮಾರುತಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಸಹಾಯದಿಂದ ಸಿದ್ದೇಗೌಡ ಮತ್ತು ಸರೋಜಮ್ಮ ಅವರ ಶವಗಳನ್ನು ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

ನಂತರ, ಕಾರು ಬಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ಹತ್ತಿರದ ಪೊದೆಗಳಲ್ಲಿ ಸಾವಿತ್ರಮ್ಮ ಅವರ ಶವ ಪತ್ತೆಯಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅದೇ ಆಸ್ಪತ್ರೆಗೆ ಕಳುಹಿಸಲಾಗಿದೆ.

ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್ಪಿ ಇ.ಸಿ ತಿಮ್ಮಯ್ಯ, ಡಿವೈಎಸ್ಪಿ ಬಿ ಚಲುವರಾಜು, ಸಿಪಿಐ ಹೇಮಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...