Homeಮುಖಪುಟ'ಸಿಎಂ ಹುದ್ದೆಗೆ 500 ಕೋಟಿ' : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ...

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

- Advertisement -
- Advertisement -

“ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ” ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ ಎಎಪಿ ಮತ್ತು ಬಿಜೆಪಿ ಪಕ್ಷಗಳು ಕಾಂಗ್ರೆಸ್‌ ಅನ್ನು ಒತ್ತಾಯಿಸಿವೆ.

ಶನಿವಾರ (ಡಿಸೆಂಬರ್ 6) ಚಂಡೀಗಢದಲ್ಲಿ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನವಜೋತ್ ಕೌರ್, ಚರ್ಚೆ ಕಾರಣವಾದ ಹೇಳಿಕೆ ನೀಡಿದ್ದಾರೆ.

“ನನ್ನ ಪತಿ ಕಾಂಗ್ರೆಸ್ ಜೊತೆ ಬಲವಾಗಿ ನಿಂತಿದ್ದಾರೆ. ಪಕ್ಷ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ, ಅವರು ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆ” ಎಂದು ಮಾಜಿ ಶಾಸಕಿಯೂ ಆದ ನವಜೋತ್ ಕೌರ್ ಮಾಧ್ಯಮಗಳ ಮುಂದೆ ಹೇಳಿದ್ದರು.

“ಆದರೂ, ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ನಿರೀಕ್ಷೆ ನನಗಿಲ್ಲ. ಏಕೆಂದರೆ, ಕಾಂಗ್ರೆಸ್‌ನಲ್ಲಿ ಈಗಾಗಲೇ ಐದು ಮಂದಿ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಅವರೆಲ್ಲ ಕಾಂಗ್ರೆಸ್ ಅನ್ನು ಸೋಲಿಸಲು ಪಣತೊಟ್ಟು ನಿಂತಿದ್ದಾರೆ. ಇದನ್ನು ಕಾಂಗ್ರೆಸ್ ಹೈಕಮಾಂಡ್ ಅರ್ಥ ಮಾಡಿಕೊಂಡರೆ, ಅದು ಬೇರೆ ವಿಷಯ” ಎಂದಿದ್ದರು.

“ನಾವು ಯಾವಾಗಲೂ ಪಂಜಾಬ್ ಪರವಾಗಿ ಮಾತನಾಡುತ್ತೇವೆ. ಆದರೆ, ಮುಖ್ಯಮಂತ್ರಿ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ನಮ್ಮಲ್ಲಿ 500 ಕೋಟಿ ರೂಪಾಯಿ ಹಣವಿಲ್ಲ” ಎಂದು ಇದೇ ವೇಳೆ ನವಜೋತ್ ಕೌರ್ ಹೇಳಿದ್ದರು.

ಈ ವೇಳೆ ವರದಿಗಾರರು, “ನಿಮ್ಮಲ್ಲಿ ಯಾರಾದರೂ ಹಣ ಕೇಳಿದ್ದಾರೆಯೇ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ನವಜೋತ್ ಕೌರ್, “ಇಲ್ಲ ಹಣ ಕೇಳಿಲ್ಲ, ಆದರೆ 500 ಕೋಟಿ ರೂಪಾಯಿಯ ಸೂಟ್ ಕೇಸ್ ಕೊಟ್ಟವನೇ ಮುಖ್ಯಮಂತ್ರಿಯಾಗುತ್ತಾನೆ” ಎಂದಿದ್ದರು.

2027ರಲ್ಲಿ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಪ್ರಸ್ತುತ ಅಲ್ಲಿ ಎಎಪಿ ಪಕ್ಷದ ಆಡಳಿತವಿದೆ.

ನವಜೋತ್ ಕೌರ್ ಸಿಧು “ಸತ್ಯವನ್ನೇ ಹೇಳಿದ್ದಾರೆ” ಎಂದು ಆಮ್ ಆದ್ಮಿ ಪಕ್ಷದ ನಾಯಕ ಕುಲದೀಪ್ ಸಿಂಗ್ ಧಲಿವಾಲ್ ಹೇಳಿದ್ದಾರೆ. ಕೌರ್ ಅವರ ಹೇಳಿಕೆಗಳು ಕಾಂಗ್ರೆಸ್ ದೇಶದ “ಅತ್ಯಂತ ಭ್ರಷ್ಟ ಪಕ್ಷ” ಎಂಬುದನ್ನು ಸ್ಪಷ್ಟವಾಗಿ ತೋರಿಸಿವೆ ಎಂದಿದ್ದಾರೆ.

“ಗೆಲ್ಲುವುದು ಬಿಡ, ಕನಿಷ್ಠ ಅಭ್ಯರ್ಥಿಯಾಗಲು 500 ಕೋಟಿ ರೂಪಾಯಿ ಕೊಡಬೇಕು. ಹೀಗಿರುವಾಗ ಆ ಪಕ್ಷದ (ಕಾಂಗ್ರೆಸ್) ಪರಿಸ್ಥಿತಿ ಊಹಿಸಿ. ಪಂಜಾಬ್ ಕಾಂಗ್ರೆಸ್‌ನಲ್ಲಿ ಐವರು ಮುಖ್ಯಮಂತ್ರಿ ಅಭ್ಯರ್ಥಿಗಳು ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ” ಎಂದು ಧಲಿವಾಲ್ ಟೀಕಿಸಿದ್ದಾರೆ.

“ರಾಜ್ಯದ ವಿರೋಧ ಪಕ್ಷ ಎಷ್ಟು ವಿಭಜಿತ ಮತ್ತು ದುರ್ಬಲವಾಗಿದೆ ಎಂಬುದನ್ನು ಇದು ತೋರಿಸಿದೆ. ಹಲವರು ಸಿಎಂ ಅಭ್ಯರ್ಥಿಗಳು ಎಂದು ಹೇಳಿಕೊಂಡು ಓಡಾಡುತ್ತಿರುವುದರಿಂದ ಕಾಂಗ್ರೆಸ್‌ಗೆ ದೊಡ್ಡ ಹಾನಿ ಉಂಟಾಗಿದೆ” ಎಂದು ಧಲಿವಾಲ್ ಹೇಳಿದ್ದಾರೆ.

“ಕಾಂಗ್ರೆಸ್ ಹೇಗೆ ಕಾರ್ಯನಿರ್ವಹಿಸುತ್ತದೆ, ನಾಯಕತ್ವವನ್ನು ಹೇಗೆ ನಿರ್ಧರಿಸಲಾಗುತ್ತದೆ ಮತ್ತು ವೈಯಕ್ತಿಕ ಮಹತ್ವಾಕಾಂಕ್ಷೆಗಳು ಮತ್ತು ಹಣಕಾಸಿನ ವ್ಯವಹಾರಗಳಿಗಾಗಿ ಪಂಜಾಬ್‌ನ ಹಿತಾಸಕ್ತಿಗಳನ್ನು ಹೇಗೆ ಬದಿಗಿಡಲಾಗುತ್ತದೆ ಎಂಬುದರ ಕೊಳಕು ಸತ್ಯವನ್ನು ನವಜೋತ್ ಕೌರ್ ಸಿಧು ಅವರ ಹೇಳಿಕೆ ಬಹಿರಂಗಪಡಿಸಿದೆ” ಎಂದು ಆಮ್ ಆದ್ಮಿ ಪಕ್ಷದ ಪಂಜಾಬ್ ಪ್ರಧಾನ ಕಾರ್ಯದರ್ಶಿ ಬಲ್ತೇಜ್ ಪನ್ನು ಬರೆದುಕೊಂಡಿದ್ದಾರೆ.

“ಕೌರ್ ಅವರ ಹೇಳಿಕೆ ತೀವ್ರ ಗೊಂದಲ ಸೃಷ್ಟಿಸುವಂತದ್ದು. ಈ ಬಗ್ಗೆ ಕಾಂಗ್ರೆಸ್‌ನಿಂದ ಉತ್ತರ ಪಡೆಯಲು ಪಂಜಾಬ್‌ನ ಜನರು ಅರ್ಹರು ಎಂದಿದ್ದಾರೆ.

“ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ 500 ಕೋಟಿ ರೂಪಾಯಿ ವೆಚ್ಚವಾಗುತ್ತದೆ. ಅದನ್ನು ಭರಿಸಲು ನನ್ನ ಪತಿ ನವಜೋತ್ ಸಿಂಗ್ ಸಿಧುಗೆ ಸಾಧ್ಯವಿಲ್ಲ” ಎಂದು ನವಜೋತ್ ಕೌರ್ ಸಿಧು ಸಾರ್ವಜನಿಕವಾಗಿ ಹೇಳುವ ಮೂಲಕ ಕಾಂಗ್ರೆಸ್‌ನಲ್ಲಿನ ‘ಹಣದ ಚೀಲ’ಗಳ ರಾಜಕೀಯವನ್ನು ಬಹಿರಂಗಪಡಿಸಿದ್ದಾರೆ ಎಂದು ಬಿಜೆಪಿ ನಾಯಕ ತರುಣ್ ಚುಗ್ ಹೇಳಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರ ಪತ್ನಿಯೇ ಮುಖ್ಯಮಂತ್ರಿ ಸ್ಥಾನವನ್ನು ಒಪ್ಪಂದದ ಮೂಲಕ ‘ಖರೀದಿಸಬಹುದು ಎಂದು ಹೇಳಿರುವುದು, ಪಕ್ಷದಲ್ಲಿ ಸಂಪೂರ್ಣ ನೈತಿಕ ಕುಸಿತವನ್ನು ತೋರಿಸಿದೆ ಎಂದು ತರುಣ್ ಚುಗ್ ಟೀಕಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ಆಂತರಿಕ ಕಾರ್ಯಚಟುವಟಿಕೆಯು ಪಂಜಾಬ್‌ನ ರಾಜಕೀಯವನ್ನು ಪ್ರಜಾಪ್ರಭುತ್ವ ನಾಯಕತ್ವ ಪ್ರಕ್ರಿಯೆಯ ಬದಲು ಹಣ-ಚಾಲಿತ ಹರಾಜು ವ್ಯವಸ್ಥೆಗೆ ಇಳಿಸಿದೆ ಎಂಬುವುದನ್ನು ಕೌರ್ ಅವರ ಹೇಳಿಕೆ ತೋರಿಸಿದೆ ಎಂದು ತರುಣ್ ಚುಗ್ ಹೇಳಿದ್ದಾರೆ.

ಸಿಧು ಕುಟುಂಬವು ಯಾವುದೋ ಉದ್ದೇಶಕ್ಕಾಗಿ ಪಕ್ಷಕ್ಕೆ ಸೇರಿದೆ ಎಂದು ತೋರುತ್ತಿದೆ. ಈಗ ಅವರು ತಮ್ಮ ಉದ್ದೇಶ ಪೂರ್ಣಗೊಂಡಿದೆ ಎಂದು ನಂಬಿದ್ದಾರೆ. ಪಂಜಾಬ್‌ನ ಜನರಿಗೆ ಸಿಧು ಕುಟುಂಬದ ಕ್ರಮಗಳು ಅರ್ಥವಾಗುತ್ತಿಲ್ಲ ಎಂದು ಕಾಂಗ್ರೆಸ್ ಸಂಸದ ಸುಖಜಿಂದರ್ ಸಿಂಗ್ ರಾಂಧವ ತಿಳಿಸಿದ್ದಾರೆ.

“ಅವರು [ಸಿಧು ಕುಟುಂಬ] ಮುಖ್ಯಮಂತ್ರಿಯ ಸ್ಥಾನಕ್ಕೆ ಸಮಾನವಾದ ಹುದ್ದೆಯಾದ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಾಗ, ಯಾರಿಗೆ ಅವರು ಸೂಟ್‌ಕೇಸ್ ಹಸ್ತಾಂತರಿಸಿದ್ದರು ಮತ್ತು ಎಷ್ಟು ಬೆಲೆಗೆ?” ಎಂದು ರಾಂಧವ ಪ್ರಶ್ನಿಸಿದ್ದಾರೆ.

“ಯಾರಾದರೂ ಹಿಂತಿರುಗಿ ಹೋಗಿ ಈ ಕುಟುಂಬದ ಹಳೆಯ ಸಂದರ್ಶನಗಳು ಮತ್ತು ಪತ್ರಿಕೆಗಳ ಹೇಳಿಕೆಗಳನ್ನು ಓದಿದರೆ, ಅವರು ಕಾಂಗ್ರೆಸ್ ಅನ್ನು ಉಳಿಸಲು ಬಂದಿದ್ದಾರೋ ಅಥವಾ ಅದನ್ನು ಸಂಪೂರ್ಣವಾಗಿ ನಾಶಮಾಡಲು ಬಂದಿದ್ದಾರೋ ಎಂಬುದು ಸ್ಪಷ್ಟವಾಗುತ್ತದೆ ಎಂದು” ಎಂದು ರಾಂಧವ ಕಿಡಿಕಾರಿದ್ದಾರೆ.

“ಅವರು ಬೇರೆ ಪಕ್ಷದ ಶಾಖೆಯಲ್ಲಿ ಕುಳಿತುಕೊಂಡು ಇಂತಹ ಹೇಳಿಕೆಗಳನ್ನು ನೀಡಿದ್ದರೆ ಚೆನ್ನಾಗಿರುತ್ತಿತ್ತು. ಜನರು ನಾಟಕವನ್ನು ಇನ್ನಷ್ಟು ಆನಂದಿಸಬಹುದಿತ್ತು. ಆದರೆ ಈಗ, ಅವರು ಹೊರಡುವಾಗ ಪಕ್ಷದ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ” ಎಂದು ರಾಂಧವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನವಜೋತ್ ಸಿಂಗ್ ಸಿಧು ಸ್ವತಃ [ಬಿಜೆಪಿಗೆ] ಮನೆಗೆ ಮರಳುವ ಮುನ್ನ, ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಸಂತೋಷದಿಂದ ವಿದಾಯ ಹೇಳಿ ಆ ಕಡೆಯ ಬಾಗಿಲು ತೋರಿಸಬೇಕು” ಎಂದು ರಾಂಧವ ಹೇಳಿದ್ದಾರೆ.

ನವಜೋತ್ ಸಿಂಗ್ ಸಿಧು 2004ರಲ್ಲಿ ಬಿಜೆಪಿಯೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಆದರೆ 2016 ರಲ್ಲಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದರು. ಒಂದು ವರ್ಷದ ನಂತರ ಅವರು ಕಾಂಗ್ರೆಸ್ ಸೇರಿದರು.

2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಎಎಪಿ ವಿರುದ್ಧ ಸೋತ ನಂತರ, ಸಿಧು ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ವೇಳೆ ಅವರು ಅಮೃತಸರ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಜೀವನ್ ಜ್ಯೋತ್ ಕೌರ್ ವಿರುದ್ಧ ಸೋತಿದ್ದರು.

ತನ್ನ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾದ ಬಳಿಕ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನವಜೋತ್ ಕೌರ್ ಸಿಧು “ನಮ್ಮ ಕಾಂಗ್ರೆಸ್ ಪಕ್ಷ ನಮ್ಮಿಂದ ಎಂದಿಗೂ ಏನನ್ನೂ ಕೇಳಿಲ್ಲ ಎಂಬ ನನ್ನ ಹೇಳಿಕೆಯನ್ನು ತಿರುಚಿದ್ದು ನೋಡಿ ನನಗೆ ಆಘಾತವಾಯಿತು” ಎಂದಿದ್ದಾರೆ.

“ನವಜೋತ್ ಸಿಂಗ್ ಸಿಂಧು ಬೇರೆ ಯಾವುದೇ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಬಗ್ಗೆ ಕೇಳಿದಾಗ, ಮುಖ್ಯಮಂತ್ರಿ ಹುದ್ದೆಗೆ ನೀಡಲು ನಮ್ಮ ಬಳಿ ಹಣವಿಲ್ಲ ಎಂದು ನಾನು ಹೇಳಿದ್ದೆ. ಎಚ್ಚರಿಕೆಯಿಂದ ಆಲಿಸಿ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...