Homeಅಂತರಾಷ್ಟ್ರೀಯಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸುನಾಮಿ ಎಚ್ಚರಿಕೆ ನೀಡಿ ವಾಪಸ್ ಪಡೆದ ಸರ್ಕಾರ

- Advertisement -
- Advertisement -

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ.

ಅವೋಮೋರಿ ಪ್ರದೇಶದ ಕರಾವಳಿಯಿಂದ ಸುಮಾರು 80 ಕಿ.ಮೀ ದೂರದಲ್ಲಿ ಭೂಮಿಯ 50 ಕಿ.ಮೀ (31 ಮೈಲಿ) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ. ಆರಂಭದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿತ್ತು, ಈಗ ಅದನ್ನು ವಾಪಸ್ ಪಡೆಯಲಾಗಿದೆ. ಆದರೆ, ಸಮುದ್ರದಲ್ಲಿ ಸುಮಾರು 70 ಸೆಂ.ಮೀ (27 ಇಂಚು) ಎತ್ತರದ ಅಲೆಗಳು ಕಂಡುಬಂದಿವೆ ಎಂದು ಸುದ್ದಿ ಸಂಸ್ಥೆ ಬಿಬಿಸಿ ವರದಿ ಮಾಡಿದೆ.

ಭೂಕಂಪ ಹಿನ್ನೆಲೆ ಕೆಲವು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಸಾವಿರಾರು ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿವೆ. ಮುಂದಿನ ದಿನಗಳಲ್ಲಿ ಇನ್ನೂ ಬಲವಾದ ಭೂಕಂಪ ಸಂಭವಿಸಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಕನಿಷ್ಠ ಒಂದು ವಾರದವರೆಗೆ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಭೂಕಂಪದ ಬಳಿಕ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಜಪಾನ್ ಪ್ರಧಾನಿ ಸನೈ ತಾಕೈಚಿ, “ಕೆಲ ದಿನಗಳ ಕಾಲ ಪ್ರತಿನಿತ್ಯ ಭೂಕಂಪ ಎದುರಿಸಲು ಸಿದ್ದರಾಗಿರಿ. ಮನೆ, ಕಚೇರಿಗಳ ಪೀಠೋಪಕರಣಗಳು ಹಾನಿಯಾಗದಂತೆ ಸುರಕ್ಷಿತವಾಗಿಡಿ. ಕಂಪನದ ಅನುಭ ಆದರೆ ತಕ್ಷಣ ಕಟ್ಟಡಗಳಿಂದ ಹೊರಗೆ ಓಡಿ” ಎಂದು ಹೇಳಿದ್ದಾರೆ.

ರಾಯಿಟರ್ಸ್ ಸುದ್ದಿ ಸಂಸ್ಥೆಯ ಪ್ರಕಾರ, ಸುಮಾರು 90,000 ನಿವಾಸಿಗಳನ್ನು ಸ್ಥಳಾಂತರಿಸಲು ಸರ್ಕಾರ ಆದೇಶ ನೀಡಿದೆ. ಅವೋಮೋರಿ ಪ್ರಿಫೆಕ್ಚರ್ ಸರ್ಕಾರ ಹೇಳಿದ ಪ್ರಕಾರ, ಸುಮಾರು 2,700 ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪೂರ್ವ ಜಪಾನ್ ರೈಲ್ವೆ ಸಂಸ್ಥೆಯು ಈಶಾನ್ಯ ಕರಾವಳಿ ಭಾಗದ ಕೆಲವು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ.

ಜಪಾನ್ ಸರ್ಕಾರವು ಪ್ರಧಾನ ಮಂತ್ರಿಯ ಬಿಕ್ಕಟ್ಟು ನಿರ್ವಹಣಾ ಕೇಂದ್ರದಲ್ಲಿ ಒಂದು ಪ್ರತಿಕ್ರಿಯೆ ಕಚೇರಿಯನ್ನು ಸ್ಥಾಪಿಸಿದೆ ಮತ್ತು ತುರ್ತು ತಂಡವನ್ನು ಸಿದ್ದಪಡಿಸಿದೆ ಎಂದು ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಮಿನೋರು ಕಿಹರಾ ಹೇಳಿದ್ದಾರೆ.

“ನಾವು ಹಾನಿಯನ್ನು ನಿರ್ಣಯಿಸಲು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಸೇರಿದಂತೆ ತುರ್ತು ವಿಪತ್ತು ಪ್ರತಿಕ್ರಿಯೆ ಕ್ರಮಗಳನ್ನು ಜಾರಿಗೆ ತರಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಭೂಕಂಪದಿಂದ ತನ್ನ ಹಿಗಾಶಿಡೋರಿ ಮತ್ತು ಒನಗಾವಾ ಪರಮಾಣು ವಿದ್ಯುತ್ ಸ್ಥಾವರಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಜಪಾನಿನ ವಿದ್ಯುತ್ ಕಂಪನಿ ಟೊಹೊಕು ಎಲೆಕ್ಟ್ರಿಕ್ ಪವರ್‌ ಹೇಳಿದೆ. ನಿಷ್ಕ್ರಿಯಗೊಂಡ ಫುಕುಶಿಮಾ ಅಣುವಿದ್ಯುತ್ ಕೇಂದ್ರದಲ್ಲಿಯೂ ಭೂಕಂಪದಿಂದ ಯಾವುದೇ ತೊಂದರೆ ಕಂಡುಬಂದಿಲ್ಲ ಎಂದು ವರದಿಯಾಗಿದೆ.

ಮಾರ್ಚ್ 11, 2011ರಂದು ದೇಶದ ಪೂರ್ವ ಕರಾವಳಿಯಲ್ಲಿ 9.0 ತೀವ್ರತೆಯ ಭೂಕಂಪ ಸಂಭವಿಸಿದಾಗ ಫುಕುಶಿಮಾ ಅಣುವಿದ್ಯುತ್ ಸ್ಥಾವರಕ್ಕೆ ಹಾನಿಯಾಗಿತ್ತು. ಈ ಭೂಕಂಪ ಅತ್ಯಂತ ಶಕ್ತಿಶಾಲಿಯಾಗಿತ್ತು. ಪರಿಣಾಮ ಸಮುದ್ರದಲ್ಲಿ ಎದ್ದ ಸುನಾಮಿ ಅಲೆಗಳು ಹೊನ್ಶು ದ್ವೀಪವನ್ನು ಮುಳುಗಿಸಿತ್ತು. ಇದರಲ್ಲಿ ಸುಮಾರು 18 ಸಾವಿರ ಜನರು ಸಾವನ್ನಪ್ಪಿದ್ದರು.

ಜಪಾನ್ ವಿಶ್ವದ ಅತಿ ಹೆಚ್ಚು ಭೂಕಂಪ ಪೀಡಿತ ರಾಷ್ಟ್ರಗಳಲ್ಲಿ ಒಂದಾಗಿದೆ. ಜಪಾನ್‌ ಭೂಮಂಡಲದ ರಿಂಗ್ ಆಫ್ ಫೈರ್ ಪ್ರದೇಶದಲ್ಲಿದೆ. ಇಲ್ಲಿ ವರ್ಷಕ್ಕೆ ಸುಮಾರು 1,500 ಭೂಕಂಪನದ ಅನುಭವಗಳಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...