Homeಮುಖಪುಟ'ಸಿಎಂ ಹುದ್ದೆಗೆ 500 ಕೋಟಿ' ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

- Advertisement -
- Advertisement -

“500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ” ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಸೋಮವಾರ (ಡಿಸೆಂಬರ್ 8) ಅಮಾನತುಗೊಳಿಸಿದೆ.

ನವಜೋತ್ ಕೌರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಕಾಂಗ್ರೆಸ್‌ನ ಪಂಜಾಬ್ ಘಟಕ ತಿಳಿಸಿದೆ.

ಈ ಕುರಿತ ಆದೇಶ ಪತ್ರವನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ (ಪಿಸಿಸಿ) ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಸೋಮವಾರ ಸಂಜೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಶನಿವಾರ (ಡಿಸೆಂಬರ್ 6) ಚಂಡೀಗಢದಲ್ಲಿ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ನವಜೋತ್ ಕೌರ್, ಅಮಾನತಿಗೆ ಕಾರಣವಾದ ಹೇಳಿಕೆ ನೀಡಿದ್ದರು.

“ನನ್ನ ಪತಿ ಕಾಂಗ್ರೆಸ್ ಜೊತೆ ಬಲವಾಗಿ ನಿಂತಿದ್ದಾರೆ. ಪಕ್ಷ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ, ಅವರು ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆ” ಎಂದು ಮಾಜಿ ಶಾಸಕಿಯೂ ಆದ ನವಜೋತ್ ಕೌರ್ ಮಾಧ್ಯಮಗಳ ಮುಂದೆ ಹೇಳಿದ್ದರು.

“ಆದರೂ, ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ನಿರೀಕ್ಷೆ ನನಗಿಲ್ಲ. ಏಕೆಂದರೆ, ಕಾಂಗ್ರೆಸ್‌ನಲ್ಲಿ ಈಗಾಗಲೇ ಐದು ಮಂದಿ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಅವರೆಲ್ಲ ಕಾಂಗ್ರೆಸ್ ಅನ್ನು ಸೋಲಿಸಲು ಪಣತೊಟ್ಟು ನಿಂತಿದ್ದಾರೆ. ಇದನ್ನು ಕಾಂಗ್ರೆಸ್ ಹೈಕಮಾಂಡ್ ಅರ್ಥ ಮಾಡಿಕೊಂಡರೆ, ಅದು ಬೇರೆ ವಿಷಯ” ಎಂದಿದ್ದರು.

“ನಾವು ಯಾವಾಗಲೂ ಪಂಜಾಬ್ ಪರವಾಗಿ ಮಾತನಾಡುತ್ತೇವೆ. ಆದರೆ, ಮುಖ್ಯಮಂತ್ರಿ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ನಮ್ಮಲ್ಲಿ 500 ಕೋಟಿ ರೂಪಾಯಿ ಹಣವಿಲ್ಲ” ಎಂದು ಇದೇ ವೇಳೆ ನವಜೋತ್ ಕೌರ್ ಹೇಳಿದ್ದರು.

ಈ ವೇಳೆ ವರದಿಗಾರರು, “ನಿಮ್ಮಲ್ಲಿ ಯಾರಾದರೂ ಹಣ ಕೇಳಿದ್ದಾರೆಯೇ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ನವಜೋತ್ ಕೌರ್, “ಇಲ್ಲ ಹಣ ಕೇಳಿಲ್ಲ, ಆದರೆ 500 ಕೋಟಿ ರೂಪಾಯಿಯ ಸೂಟ್ ಕೇಸ್ ಕೊಟ್ಟವನೇ ಮುಖ್ಯಮಂತ್ರಿಯಾಗುತ್ತಾನೆ” ಎಂದಿದ್ದರು.

ನವಜೋತ್ ಅವರ ಈ ಹೇಳಿಕೆ ಮುಂದಿಟ್ಟುಕೊಂಡು ಪಂಜಾಬ್‌ನ ಎಎಪಿ ಮತ್ತು ಬಿಜೆಪಿ ಪಕ್ಷಗಳು ಕಾಂಗ್ರೆಸ್ ಮೇಲೆ ಮುಗಿಬಿದ್ದಿತ್ತು. ಕಾಂಗ್ರೆಸ್ ಈ ಕುರಿತು ಸ್ಪಷ್ಟನೆ ನೀಡುವಂತೆ ಆಗ್ರಹಿಸಿತ್ತು.

ವಿವಿಧ ಕಾಂಗ್ರೆಸ್ ನಾಯಕರೂ ಕೂಡ ನವಜೋತ್ ಕೌರ್ ಹೇಳಿಕೆ ವಿರುದ್ದ ಕಿಡಿಕಾರಿದ್ದರು. ಅವರ ಹೇಳಿಕೆಯನ್ನು ಅಲ್ಲಗಳೆದಿದ್ದರು.

ಪಿಸಿಸಿ ಅಧ್ಯಕ್ಷ ಅಮರಿಂದರ್ ಸಿಂಗ್ ‘ಭ್ರಷ್ಟ’ : ನವಜೋತ್ ಕೌರ್

ತನ್ನನ್ನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಸೋಮವಾರ ಸಂಜೆ ಪ್ರತಿಕ್ರಿಯಿಸಿದ ನವಜೋತ್ ಕೌರ್, ಪಿಸಿಸಿ ಅಧ್ಯಕ್ಷ ಅಮರಿಂದರ್ ಸಿಂಗ್ ‘ಅಸೂಕ್ಷ್ಮ, ಬೇಜವಾಬ್ದಾರಿ, ನೈತಿಕವಾಗಿ ಅಪ್ರಾಮಾಣಿಕ ಮತ್ತು ಭ್ರಷ್ಟ’ ಎಂದು ಕಿಡಿಕಾರಿದ್ದಾರೆ.

“ಅಮರಿಂದರ್ ಅವರ ಅಸಮರ್ಥತೆ ಮತ್ತು ಬೇಜವಾಬ್ದಾರಿ ವರ್ತನೆಯಿಂದ ನೋಯಿಸಲ್ಪಟ್ಟ ನನ್ನ ಎಲ್ಲಾ ಸಹೋದರ ಸಹೋದರಿಯರ ಪರವಾಗಿ ನಾನು ನಿಲ್ಲುತ್ತೇನೆ. ಅವರನ್ನು ಅಧ್ಯಕ್ಷರನ್ನಾಗಿ ಸ್ವೀಕರಿಸಲು ನಾನು ನಿರಾಕರಿಸುತ್ತೇನೆ. ಮುಖ್ಯಮಂತ್ರಿ ಅವರನ್ನು ಏಕೆ ರಕ್ಷಿಸುತ್ತಿದ್ದಾರೆಂದು ನನಗೆ ಆಶ್ಚರ್ಯವಾಗುತ್ತದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...