Homeಮುಖಪುಟಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

- Advertisement -
- Advertisement -

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ ಕೃಷಿ ಕಾರ್ಮಿಕನನ್ನು ಬಂಧಿಸುವ ಮೂಲಕ ಪೊಲೀಸರು ಆರೋಪಿಯನ್ನು ಅಲ್ಪಸಮಯದಲ್ಲೇ ಪತ್ತೆಹಚ್ಚಿದ್ದಾರೆ.

ದಾಹೋದ್ ಜಿಲ್ಲೆಯಲ್ಲಿ ಕುಟುಂಬವೊಂದು ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿತ್ತು. ಡಿಸೆಂಬರ್ 4 ರಂದು ಮಗು ಹೊಲದ ಬಳಿ ಆಟವಾಡುತ್ತಿದ್ದಾಗ ಆಕೆಯ ಪೋಷಕರು ಹತ್ತಿರದಲ್ಲಿ ಕೆಲಸ ಮಾಡುತ್ತಿದ್ದರು. ಅಪರಿಚಿತ ವ್ಯಕ್ತಿಯೊಬ್ಬರು ಆಕೆಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗು ಕಿರುಚಿದಾಗ, ದಾಳಿಕೋರ ಆಕೆಯ ಖಾಸಗಿ ಭಾಗಕ್ಕೆ ಲೋಹದ ರಾಡ್ ಅನ್ನು ತುರುಕಿ ತೀವ್ರ ರಕ್ತಸ್ರಾವವಾಗುವಂತೆ ಗಾಯಗೊಳಿಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಕುಟುಂಬವು ಆಕೆಯನ್ನು ಹುಡುಕಲು ಪ್ರಾರಂಭಿಸಿತು, ಆಕೆ ಹೊಲದ ಬಳಿ ಗಾಯಗೊಂಡಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ರಾಜ್‌ಕೋಟ್‌ನ ಜನ್ನಾ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆ ಮೂಲಗಳ ಪ್ರಕಾರ, ಆಕೆಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಆಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ದಾಳಿಕೋರನನ್ನು ಗುರುತಿಸಿದ ಮಗು

ರಾಜ್‌ಕೋಟ್ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ವಿಜಯಸಿನ್ಹ ಗುರ್ಜರ್ ಅವರು, ಪೊಲೀಸರು ತೀವ್ರ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಸುಮಾರು 10 ತಂಡಗಳನ್ನು ರಚಿಸಿ ಸುಮಾರು 100 ಶಂಕಿತರನ್ನು ಪ್ರಶ್ನಿಸಿದ್ದಾರೆ. ಗುರುತಿನ ಪ್ರಕ್ರಿಯೆಯ ಭಾಗವಾಗಿ, ಅಧಿಕಾರಿಗಳು ಮಕ್ಕಳ ತಜ್ಞರ ಸಮ್ಮುಖದಲ್ಲಿ ಸುಮಾರು 10 ವ್ಯಕ್ತಿಗಳನ್ನು ಮಗುವಿನ ಮುಂದೆ ಹಾಜರುಪಡಿಸಿದರು.

ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯ ಕೃಷಿ ಕಾರ್ಮಿಕ ರಾಮಸಿಂಗ್ ತೆರಾಸಿಂಗ್ ದದ್ವೇಜರ್ ಅವರನ್ನು ಹಲ್ಲೆಕೋರ ಎಂದು ಬಾಲಕಿ ಗುರುತಿಸಿದ್ದಾಳೆ. ವಿವಾಹಿತ ಮತ್ತು ಮೂವರು ಮಕ್ಕಳಿರುವ ದದ್ವೇಜರ್ ಅವರನ್ನು ಅಪರಾಧ ಸ್ಥಳದ ಪಕ್ಕದ ಹೊಲದಿಂದ ಬಂಧಿಸಲಾಗಿದೆ ಎಂದು ಗುರ್ಜರ್ ದೃಢಪಡಿಸಿದ್ದಾರೆ.

ಯಾವುದೇ ಹೆಚ್ಚುವರಿ ಶಂಕಿತರ ಭಾಗಿಯಾಗಿರುವುದು ತನಿಖೆಯಲ್ಲಿ ಕಂಡುಬಂದಿಲ್ಲ ಎಂದು ಎಸ್‌ಪಿ ಹೇಳಿದರು. “ಈ ಘಟನೆಯಲ್ಲಿ ಒರ್ವ ಆರೋಪಿ ಮಾತ್ರ ಭಾಗಿಯಾಗಿದ್ದಾನೆ. ಆತನನ್ನು ಪಕ್ಕದ ಹೊಲದಿಂದ ಬಂಧಿಸಲಾಗಿದೆ” ಎಂದು ಗುರ್ಜರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...