Homeಮುಖಪುಟಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

- Advertisement -
- Advertisement -

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್ ಹೈಕೋರ್ಟ್‌ ಸರ್ಕಾರಕ್ಕೆ ಕಠಿಣ ಛೀಮಾರಿ ಹಾಕಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಈ ಪ್ರಕರಣವು ಆಗಸ್ಟ್ 29, 2025 ರಂದು ಜೋಧ್‌ಪುರ ನಿವಾಸಿ ಸೋಹನ್‌ಲಾಲ್ ವಿರುದ್ಧ 2.7 ಕೆಜಿ ಅಫೀಮು ಹೊಂದಿದ್ದ ಆರೋಪದ ಮೇಲೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು.

ಮಲ್ಹರ್‌ಗಢ ಪೊಲೀಸರು ಸಂಜೆ 5 ಗಂಟೆಗೆ ಆತನ ಬಂಧನ ಮಾಡಿದರು. ಸ್ಥಳೀಯ ಸ್ಮಶಾನದ ಎದುರಿಗಿನ ಮೈದಾನದ ಬಳಿ ಆತನನ್ನು ಬಂಧಿಸಿದ್ದೇವೆ ಎಂದು ಹೇಳಿಕೊಂಡರು. ಆದರೆ, ಸೋಹನ್‌ಲಾಲ್ ಅವರ ಕುಟುಂಬವು ಬಸ್‌ನಿಂದ ಯುವಕ ಇಳಿದ ಸಿಸಿಟಿವಿ ದೃಶ್ಯಾವಳಿಗಳನ್ನು ಪ್ರದರ್ಶಿಸಿತು. ಪೊಲೀಸ್ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾದ ಸಮಯಕ್ಕಿಂತ ಐದು ಗಂಟೆಗಳ ಮೊದಲು ಬೆಳಿಗ್ಗೆ 11.39 ಕ್ಕೆ ಸಾಮಾನ್ಯ ಉಡುಪಿನಲ್ಲಿರುವ ವ್ಯಕ್ತಿಗಳು ಆತನನ್ನು ಬಲವಂತವಾಗಿ ಕರೆದುಕೊಂಡು ಹೋಗುವುದು ವಿಡಿಯೊದಲ್ಲಿ ಸೆರೆಯಾಗಿತ್ತು. ದೃಶ್ಯಗಳಲ್ಲಿ ತೋರಿಸಲಾದ ಸ್ಥಳವು ಪೊಲೀಸರು ಉಲ್ಲೇಖಿಸಿದ ಸ್ಥಳದಿಂದ ಸುಮಾರು 35 ಕಿ.ಮೀ ದೂರದಲ್ಲಿದೆ.

ಹೈಕೋರ್ಟ್‌ಗೆ ಸಲ್ಲಿಸಿದ ದೃಶ್ಯಗಳಲ್ಲಿ, ಮಲ್ಹರ್‌ಗಢ ಪೊಲೀಸ್ ಕಾನ್‌ಸ್ಟೆಬಲ್‌ಗಳು ಎಂದು ಗುರುತಿಸಲಾದ ಗುಂಪು ಸೋಹನ್‌ಲಾಲ್ ಅವರನ್ನು ಬಸ್‌ನಿಂದ ಕೆಳಗಿಳಿಸುತ್ತಿರುವುದನ್ನು ಸ್ಪಷ್ಟವಾಗಿ ತೋರಿಸಲಾಗಿದೆ.

ಇದರ ಹೊರತಾಗಿಯೂ, ತನಿಖಾಧಿಕಾರಿ ಎಸ್‌ಐ ಸಂಜಯ್ ಪ್ರತಾಪ್ ಈ ಹಿಂದೆ ನ್ಯಾಯಾಲಯಕ್ಕೆ ವಿಡಿಯೋದಲ್ಲಿರುವ ವ್ಯಕ್ತಿಗಳು “ಮಲ್ಹರ್‌ಗಢ ಪೊಲೀಸರಲ್ಲ” ಎಂದು ಹೇಳಿದ್ದರು. ಡಿಸೆಂಬರ್ 9 ರಂದು ಸಮನ್ಸ್ ಜಾರಿಯಾದ ಮಂದ್‌ಸೌರ್ ಎಸ್‌ಪಿ ವಿನೋದ್ ಕುಮಾರ್ ಮೀನಾ, ವೀಡಿಯೊದಲ್ಲಿ ಕಂಡುಬರುವ ಅಧಿಕಾರಿಗಳನ್ನು ವಾಸ್ತವವಾಗಿ ಮಲ್ಹರ್‌ಗಢ ಠಾಣೆಯಲ್ಲಿ ನಿಯೋಜಿಸಲಾಗಿದೆ ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಾಗ ಈ ಹೇಳಿಕೆ ಬಯಲಾಯಿತು.

ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರು ಕಾನೂನು ವಿಧಾನಗಳನ್ನು ಅನುಸರಿಸಲು ವಿಫಲರಾಗಿದ್ದಾರೆ ಎಂದು ಎಸ್‌ಪಿ ಒಪ್ಪಿಕೊಂಡರು. ನಂತರ ಅವರು ಆಗಿನ ಟಿಐ ರಾಜೇಂದ್ರ ಪನ್ವರ್, ಎಸ್‌ಐ ಸಂಜಯ್ ಪ್ರತಾಪ್, ಎಸ್‌ಐ ಸಾಜಿದ್ ಮನ್ಸೂರಿ ಮತ್ತು ಕಾನ್‌ಸ್ಟೆಬಲ್‌ಗಳಾದ ನರೇಂದ್ರ ಸಿಂಗ್, ಜಿತೇಂದ್ರ ಸಿಂಗ್ ಮತ್ತು ದಿಲೀಪ್ ಜಾಟ್ ಸೇರಿದಂತೆ ಆರು ಅಧಿಕಾರಿಗಳನ್ನು ಅಮಾನತುಗೊಳಿಸಿ, ಹೆಚ್ಚುವರಿ ಎಸ್‌ಪಿ ನೇತೃತ್ವದಲ್ಲಿ ಇಲಾಖಾ ತನಿಖೆಗೆ ಆದೇಶಿಸಿದರು.

ಡಿಸೆಂಬರ್ 5 ರಂದು ಹೈಕೋರ್ಟ್, ಸೋಹನ್‌ಲಾಲ್ ಅವರನ್ನು ನಿರಪರಾಧಿ ಎಂದು ಘೋಷಿಸದಿದ್ದರೂ, ಪೊಲೀಸ್ ಹೇಳಿಕೆಯಲ್ಲಿನ ತೊಂದರೆದಾಯಕ ವ್ಯತ್ಯಾಸಗಳನ್ನು ಗಮನಿಸಿ, ಹೈಕೋರ್ಟ್ ಅವರನ್ನು ಜಾಮೀನು ನೀಡಿತ್ತು. ಆದರೂ ನ್ಯಾಯಾಲಯವು ಅವರನ್ನು ಇನ್ನೂ ನಿರಪರಾಧಿ ಎಂದು ಘೋಷಿಸಿಲ್ಲ, ತನ್ನ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.

ಸೋಹನ್‌ಲಾಲ್ ಅವರ ಸಹೋದರ ಕರ್ತಾರಾಮ್ ವರದಿಗಾರರೊಂದಿಗೆ ಮಾತನಾಡುತ್ತಾ, ಬಸ್ ಮಾಲೀಕರು ಆರಂಭದಲ್ಲಿ ಬಸ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಲು ನಿರಾಕರಿಸಿತು. ನಮ್ಮ ಕುಟುಂಬವು ಬಸ್‌ನಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯಲು ದಿನಗಟ್ಟಲೆ ಕಷ್ಟಪಡಬೇಕಾಯಿತು ಎಂದು ಹೇಳಿದರು. “ಅವರು ಯುವಕನನ್ನು ಬಸ್‌ನಿಂದ ಅಪಹರಿಸಿ ನಂತರ ಅಫೀಮು ಹೊಂದಿದ್ದ ಆರೋಪಿಸಿದರು. ಹೈಕೋರ್ಟ್‌ನ ಹಸ್ತಕ್ಷೇಪವೇ ಸತ್ಯ ಹೊರಬರಲು ಏಕೈಕ ಕಾರಣ ಎಂದು ಹೇಳಿದರು.

ತನಿಖಾ ಅಧಿಕಾರಿಯ ಸಾಕ್ಷ್ಯದಲ್ಲಿನ ವಿರೋಧಾಭಾಸಗಳನ್ನು ಗಮನಿಸಿ, “ಅಸಂವಿಧಾನಿಕ ಮತ್ತು ಕಾನೂನುಬಾಹಿರ ನಡವಳಿಕೆ”ಗಾಗಿ ನ್ಯಾಯಾಲಯ ಪೊಲೀಸರನ್ನು ಖಂಡಿಸಿದೆ ಎಂದು ಡಿಫೆನ್ಸ್‌ ವಕೀಲ ಹಿಮಾಂಶು ಠಾಕೂರ್ ಹೇಳಿದರು. ಅಮಾನತುಗೊಂಡ ಅಧಿಕಾರಿಗಳ ಪಟ್ಟಿಯನ್ನು ಎಸ್‌ಪಿ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇಲಾಖಾ ವಿಚಾರಣೆಗಳು ಪ್ರಾರಂಭವಾಗಿವೆ ಎಂದು ಅವರು ಖಚಿತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...