Homeಮುಖಪುಟಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

- Advertisement -
- Advertisement -

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್ 10) ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳ ಹಿನ್ನೆಲೆ ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿರುವ ಅವರು, “ಮಾಧ್ಯಮ ವರದಿಗಳಿಂದ ನನಗೆ ‘ವೀರ ಸಾವರ್ಕರ್ ಪ್ರಶಸ್ತಿ’ ಪ್ರಧಾನ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅದನ್ನು ಇಂದು ದೆಹಲಿಯಲ್ಲಿ ಪ್ರಧಾನ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ಈ ಪ್ರಶಸ್ತಿ ಘೋಷಣೆಯ ಬಗ್ಗೆ ನನಗೆ ನಿನ್ನೆ ಕೇರಳದಲ್ಲಿರುವಾಗ ಗೊತ್ತಾಯಿತು. ಅಲ್ಲಿ ನಾನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ ಚಲಾಯಿಸಲು ಹೋಗಿದ್ದೆ. ತಿರುವನಂತಪುರಂನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ, ನನಗೆ ಅಂತಹ ಪ್ರಶಸ್ತಿಯ ಬಗ್ಗೆ ತಿಳಿದಿಲ್ಲ. ನಾನು ಅದನ್ನು ಸ್ವೀಕರಿಸಲು ಒಪ್ಪದೆ ನನ್ನ ಹೆಸರನ್ನು ಘೋಷಿಸುವುದು ಆಯೋಜಕರ ಬೇಜವಾಬ್ದಾರಿಯಾಗಿದೆ ಎಂದಿದ್ದೆ”

“ಅದರ ಹೊರತಾಗಿಯೂ, ಇಂದು ದೆಹಲಿಯಲ್ಲಿ, ಕೆಲವು ಮಾಧ್ಯಮಗಳು ಅದೇ ಪ್ರಶ್ನೆಯನ್ನು ಕೇಳುತ್ತಲೇ ಇವೆ. ಆದ್ದರಿಂದ, ಈ ವಿಷಯವನ್ನು ಸ್ಪಷ್ಟವಾಗಿ ಸ್ಪಷ್ಟಪಡಿಸಲು ನಾನು ಈ ಹೇಳಿಕೆಯನ್ನು ನೀಡುತ್ತಿದ್ದೇನೆ” ಎಂದಿದ್ದಾರೆ.

“ಪ್ರಶಸ್ತಿಯ ಸ್ವರೂಪ, ಅದನ್ನು ನೀಡುವ ಸಂಸ್ಥೆ ಅಥವಾ ಯಾವುದೇ ಇತರ ಸಂದರ್ಭೋಚಿತ ವಿವರಗಳ ಬಗ್ಗೆ ಗೊತ್ತಿಲ್ಲದಿರುವಾಗ, ನಾನು ಇಂದು ಕಾರ್ಯಕ್ರಮಕ್ಕೆ ಹಾಜರಾಗುವ ಅಥವಾ ಪ್ರಶಸ್ತಿಯನ್ನು ಸ್ವೀಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಹೈರೇಂಜ್ ರೂರಲ್ ಡೆವಲಪ್‌ಮೆಂಟ್ ಸೊಸೈಟಿ (ಹೆಚ್‌ಆರ್‌ಡಿಎಸ್‌) ಎಂಬ ಸರ್ಕಾರೇತರ ಸಂಸ್ಥೆ ಶಶಿ ತರೂರ್ ಅವರಿಗೆ ‘ವೀರ್ ಸಾವರ್ಕರ್ ಇಂಟರ್ನ್ಯಾಷನಲ್ ಇಂಪ್ಯಾಕ್ಟ್ ಅವಾರ್ಡ್ 2025’ ನೀಡಲು ಮುಂದಾಗಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬುಧವಾರ ನವದೆಹಲಿಯ ಎನ್‌ಡಿಎಂಸಿ ಕನ್ವೆನ್ಷನ್ ಹಾಲ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಅಭಿವೃದ್ಧಿ, ಸಾಮಾಜಿಕ ಸುಧಾರಣೆ ಮತ್ತು ಮಾನವೀಯ ಸಂಪರ್ಕದಲ್ಲಿ ಬದಲಾವಣೆಗಾಗಿ ಶ್ರಮಿಸಿದ ವ್ಯಕ್ತಿಗಳು ಮತ್ತು ಸಂಘಟನೆಗಳನ್ನು ಈ ಕಾರ್ಯಕ್ರಮದಲ್ಲಿ ಗೌರವಿಸಲಾಗುತ್ತದೆ ಎಂದು ವರದಿ ಹೇಳಿದೆ.

ತರೂರ್‌ಗೆ ಮಾಹಿತಿ ನೀಡಿದ್ದೆವು

ಹೆಚ್‌ಆರ್‌ಡಿಎಸ್‌ ಸಂಸ್ಥೆಯ ಸ್ಥಾಪಕ ಮತ್ತು ಕಾರ್ಯದರ್ಶಿ ಅಜಿ ಕೃಷ್ಣನ್, ‘ರಾಷ್ಟ್ರ ನಿರ್ಮಾಣಕ್ಕಾಗಿ ಮಾಡಿದ ಕೆಲಸ’ ಪರಿಗಣಿಸಿ ತರೂರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತರೂರ್ ಅವರಿಗೆ ಪ್ರಶಸ್ತಿ ನೀಡುವ ಬಗ್ಗೆ ಒಂದು ತಿಂಗಳ ಹಿಂದೆಯೇ ತಿಳಿಸಲಾಗಿತ್ತು. ನಾವು ತರೂರ್ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಪ್ರಶಸ್ತಿಯ ಬಗ್ಗೆ ತಿಳಿಸಿದ್ದೆವು ಮತ್ತು ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದ್ದೆವು. ಇದಲ್ಲದೆ ಎರಡು ವಾರಗಳ ಹಿಂದೆ ನಮ್ಮ ತೀರ್ಪುಗಾರರ ಉಸ್ತುವಾರಿ ರವಿಕಾಂತ್ ಅವರು ತರೂರ್ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿದ್ದರು. ಯಾವುದೇ ಸಮಸ್ಯೆ ಇಲ್ಲದೆ ತರೂರ್ ಕಾರ್ಯಕ್ರಮಕ್ಕೆ ಹಾಜರಾಗಲು ಮತ್ತು ಪ್ರಶಸ್ತಿ ಸ್ವೀಕರಿಸಲು ಒಪ್ಪಿಕೊಂಡಿದ್ದರು. ಈಗ ಕಾಂಗ್ರೆಸ್‌ನ ಒತ್ತಡದಿಂದ ಅವರು ಅಲ್ಲಗಳೆಯುತ್ತಿರಬಹುದು ಎಂದು ಅಜಿ ಕೃಷ್ಣನ್ ಹೇಳಿರುವುದಾಗಿ ಪತ್ರಿಕೆ ಉಲ್ಲೇಖಿಸಿದೆ.

ತರೂರ್ ಮತ್ತು ಕಾಂಗ್ರೆಸ್‌

ಬುಧವಾರ ತಿರುವನಂತಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್, ತರೂರ್ ಸೇರಿದಂತೆ ಪಕ್ಷದ ಯಾವುದೇ ಸದಸ್ಯರು ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಬಾರದು. ಏಕೆಂದರೆ ಆತ ಬ್ರಿಟಿಷರ ಮುಂದೆ ತಲೆಬಾಗಿದವರು ಎಂದು ಹೇಳಿದ್ದರು.

ತರೂರ್ ಆ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಏಕೆಂದರೆ, ಆ ಪ್ರಶಸ್ತಿ ಸ್ವೀಕರಿಸುವುದು ಕಾಂಗ್ರೆಸ್‌ಗೆ ಅವಮಾನ ಮತ್ತು ಪಕ್ಷವನ್ನು ಮುಜುಗರಕ್ಕೀಡು ಮಾಡುತ್ತದೆ ಎಂದು ಮುರಳೀಧರನ್ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...