Homeಕರ್ನಾಟಕಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ (ಡಿಸೆಂಬರ್ 11) ತಿರಸ್ಕರಿಸಿದೆ.

ವಿಚಾರಣಾ ನ್ಯಾಯಾಧೀಶರು ಈ ಹಿಂದೆ ಮತ್ತೊಂದು ಅತ್ಯಾಚಾರ ಪ್ರಕರಣದಲ್ಲಿ ತಮ್ಮನ್ನು ದೋಷಿ ಎಂದು ಘೋಷಿಸಿದ್ದಾರೆ. ಅವರು ತಮ್ಮ ವಿರುದ್ಧ ಪಕ್ಷಪಾತದಿಂದ ನಡೆದುಕೊಳ್ಳುವ ಸಾಧ್ಯತೆಯಿದೆ ಎಂದು ಪ್ರಜ್ವಲ್‌ ರೇವಣ್ಣ ಆತಂಕ ವ್ಯಕ್ತಪಡಿಸಿದ್ದರು. ಶಿಕ್ಷೆ ಘೋಷಣೆಯಾಗಿರುವ ಪ್ರಕರಣದ ನ್ಯಾಯಧೀಶರ ಮಾಡಿರುವ ಕೆಲ ಟಿಪ್ಪಣಿಗಳನ್ನು ಅವರು ಉಲ್ಲೇಖಿಸಿದ್ದರು.

ಪ್ರಕರಣದ ಸಾಕ್ಷ್ಯಗಳನ್ನು ಆಧರಿಸಿ ಹಾಗೂ ಕರ್ನಾಟಕ ಹೈಕೋರ್ಟ್ ನೀಡಿದ್ದ ಗಮನಾರ್ಹ ಅಭಿಪ್ರಾಯಗಳನ್ನು ಪರಿಗಣಿಸಿ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೊಯಮಲ್ಯ ಬಾಗ್ಚಿಹಾಗೂ ವಿಪುಲ್ ಎಂ. ಪಂಚೋಲಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ತಿಳಿಸಿದೆ.

ವಿಚಾರಣಾ ನ್ಯಾಯಾಧೀಶರು ಮಾಡಿದ ಟಿಪ್ಪಣಿಗಳ ಆಧಾರದಲ್ಲಿಅವರು ಪಕ್ಷಪಾತಿಯಾಗಿದ್ದಾರೆಂದು ಹೇಳುವುದಕ್ಕೆ ಅಥವಾ ಪ್ರಕರಣವು ಪೂರ್ವ ನಿರ್ಧರಿತವಾಗಿದೆ ಎನ್ನುವುದಕ್ಕೆ ಆಧಾರವಾಗುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಸೆಪ್ಟೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್ ವರ್ಗಾವಣೆ ಅರ್ಜಿಯನ್ನು ವಜಾಗೊಳಿಸಿದ ನಂತರ ಪ್ರಜ್ವಲ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ತಮ್ಮ ಮನೆಕೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ತಪ್ಪಿತಸ್ಥ ಎಂದು ಘೋಷಿಸಿದ್ದ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಕಳೆದ ಆಗಸ್ಟ್‌ನಲ್ಲಿ ಆಜೀವ ಜೈಲು ಶಿಕ್ಷೆ ವಿಧಿಸಿದ್ದರು. ಈ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಹೈಕೋರ್ಟ್‌ನಲ್ಲಿ ಬಾಕಿ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...