Homeಮುಖಪುಟಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

- Advertisement -
- Advertisement -

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. 

ಡಿಸೆಂಬರ್ 8ನೇ ತಾರೀಖಿನ ರಾತ್ರಿ ಅರುಣಾಚಲ ಪ್ರದೇಶದ ಹಯುಲಿಯಾಂಗ್-ಚಾಗಲಗಂ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಸೇನೆ ಕಾರ್ಯಾಚರಣೆಯಲ್ಲಿ ಇಂದು 18 ಜನರ ಶವಗಳನ್ನು ಪತ್ತೆ ಮಾಡಲಾಗಿದೆ. 

ವಾಹನದಲ್ಲಿ 22 ಕಾರ್ಮಿಕರಿದ್ದು, ಅಂಜಾವ್ ಜಿಲ್ಲೆಯ ಹಯುಲಿಯಾಂಗ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಗುವಾಹಟಿಯಲ್ಲಿ ಗುರುವಾರ ರಕ್ಷಣಾ ವಕ್ತಾರರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಗಾಯಗೊಂಡ ಕೆಲಸಗಾರನೊಬ್ಬ ಸಹಾಯ ಕೋರಿ ಅವರನ್ನು ತಲುಪಿದ ನಂತರ, ಸ್ಪಿಯರ್ ಕಾರ್ಪ್ಸ್ ಬುಧವಾರ (ಡಿಸೆಂಬರ್ 10) ಶೋಧ ಮತ್ತು ರಕ್ಷಣಾ ಪ್ರಯತ್ನಗಳಲ್ಲಿ ತೊಡಗಿಕೊಂಡಿತು ಎಂದು ತಿಳಿಸಿದೆ. 

“ಚಾಗಲಗಂನಿಂದ ಸರಿಸುಮಾರು 12 ಕಿ.ಮೀ ದೂರದಲ್ಲಿರುವ ಅಪಘಾತ ಸ್ಥಳವು ಸೀಮಿತ ಸಂಪರ್ಕದೊಂದಿಗೆ ಕಠಿಣ ಭೂಪ್ರದೇಶದಲ್ಲಿದೆ ಮತ್ತು ಬದುಕುಳಿದವರು ಬರುವವರೆಗೂ ಯಾವುದೇ ಸ್ಥಳೀಯ ಸಂಸ್ಥೆ, ಗುತ್ತಿಗೆದಾರ ಅಥವಾ ನಾಗರಿಕ ಪ್ರತಿನಿಧಿಯಿಂದ ವರದಿ ಮಾಡಲಾಗಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಈ ಕಾರ್ಮಿಕರು ಪೂರ್ವ ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಗೆಲಾಪುಖುರಿ ಚಹಾ ತೋಟದಲ್ಲಿ ದುಡಿಯುತ್ತಿದ್ದ ಕಾರ್ಮಿಕರಾಗಿದ್ದಾರೆ. ಗುರುವಾರ, ಸ್ಪಿಯರ್ ಕಾರ್ಪ್ಸ್ ಹಲವಾರು ಶೋಧ ಮತ್ತು ರಕ್ಷಣಾ ತಂಡಗಳು, ವೈದ್ಯಕೀಯ ತಂಡಗಳು, ಸ್ಥಳೀಯ ಪೊಲೀಸರು, ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಹಯುಲಿಯಾಂಗ್‌ನ ಅಧಿಕಾರಿಗಳನ್ನು ನೇಮಿಸಲಾಗಿದ್ದು,  “ಬೆಳಿಗ್ಗೆ 11.55 ಕ್ಕೆ, ನಾಲ್ಕು ಗಂಟೆಗಳ ತೀವ್ರ ಶೋಧದ ನಂತರ, ಟ್ರಕ್ ಅನ್ನು 200 ಮೀಟರ್ ಆಳ ಕಂದಕದಲ್ಲಿ ಪತ್ತೆ ಹಚ್ಚಲಾಗಿದೆ. 

ಈ ವೇಳೆ ಹದಿನೆಂಟು ಶವಗಳನ್ನು ಹುಡುಕಲಾಗಿದ್ದು, ಹಗ್ಗದ ಮೂಲಕ ಅವುಗಳನ್ನು ಮೇಲೆ ತರಲಾಗುತ್ತಿದೆ. ಸಾವು ನೋವುಗಳ ನಡುವೆ ಮೃತದೇಹಗಳನ್ನು ಸ್ಥಳಾಂತರಿಸಲು ಜಿಲ್ಲಾ ವೈದ್ಯಕೀಯ ಅಧಿಕಾರಿಯನ್ನು ಕರೆತರಲಾಗಿದೆ ಎಂದು ಸೇನೆಯ ಹೇಳಿಕೆ ತಿಳಿಸಲಾಗಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...