Homeಕರ್ನಾಟಕಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

- Advertisement -
- Advertisement -

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಾ. ಪರಮೇಶ್ವರ್, ಬಾಡಿಗೆ ಮನೆಗಳಲ್ಲಿ ವಾಸಿಸುವ ವಿದೇಶಿ ಪ್ರಜೆಗಳಾಗಿರುವ ಪುನರಾವರ್ತಿತ ಅಪರಾಧಿಗಳು ಪೊಲೀಸರ ಗಮನಕ್ಕೆ ಬರುತ್ತಿದ್ದಾರೆ ಎಂದು ಹೇಳಿದರು.

“ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ದಂಧೆ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ. ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ. ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಸದನಕ್ಕೆ ಮಾಹಿತಿ ನೀಡಿದರು.

“ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರೀಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ. ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ ತಡೆಗಟ್ಟಲು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ನೇತೃತ್ವದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎ.ಎನ್.ಟಿ.ಎಫ್) ಪಡೆಯನ್ನು ಸ್ಥಾಪಿಸಲಾಗಿದೆ” ಎಂದು ಹೇಳಿದರು.

“ರಾಜ್ಯದ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವ ಕುರಿತು ಡ್ರಗ್ಸ್ ಹಾವಳಿಯನ್ನು ಪೂರ್ಣವಾಗಿ ತಡೆಗಟ್ಟಲು ಗಾಂಜಾ ಬೆಳೆಯನ್ನು ಬೆಳೆಯುವುದು, ಮಾರಾಟ ಮಾಡುವುದು ಕಾನೂನಾತ್ಮಕ ಅಪರಾಧವಾಗಿರುತ್ತದೆ ಎಂಬ ಅಂಶಗಳ, ಗಾಂಜಾ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದಾಗುವ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ” ಎಂದರು.

“ಮಾದಕ ದ್ರವ್ಯಗಳ ಅಕ್ರಮ ಸಾಗಾಣಿಕೆ ಮತ್ತು ಜಾಲ ಕುರಿತು ಸ್ಥಳೀಯ ಬಾತ್ಮೀದಾರರು, ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ಬೀಟ್ ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಸಾಗಾಣಿಕೆ ಬಗ್ಗೆ ವಿಶೇಷವಾಗಿ ಮಾಹಿತಿಯನ್ನು ಸಂಗ್ರಹಿಸಿ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಹೇಳಿದರು.

“ಪ್ರತಿ ತಿಂಗಳು ಶಾಲಾ-ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಮಾದಕ ವಸ್ತುಗಳ ಸೇವನೆಯಿಂದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ. ಸಂಶಯಾಸ್ಪದ ಹೈ ಸೆಕ್ಯುರಿಟಿ ಸ್ಥಳಗಳಲ್ಲಿ ಬಿಗಿ ನಿಗಾವಣೆ ಇಡಲಾಗಿದೆ. ಪಾರ್ಸಲ್ ಸರ್ವೀಸ್, ಕೋರಿಯರ್ ಸೆಂಟರ್, ರೆಸಾರ್ಟ್/ಫಾರ್ಮ್ ಹೌಸ್‌ಗಳಿಗೆ ದಿಢೀರ್ ಭೇಟಿ ಕೈಗೊಂಡು ನಗರ ಹೊರವಲಯಗಳಲ್ಲಿ ಡ್ರಗ್ಸ್ ಪಾರ್ಟಿಗಳನ್ನು ತಡೆಗಟ್ಟುವ ಬಗ್ಗೆ ವಿಶೇಷ ಪೆಟ್ರೋಲಿಂಗ್ ನಡೆಸಲಾಗಿರುತ್ತದೆ” ಎಂದು ವಿವರಿಸಿದರು.

“ಪ್ರತಿ ಮಾಹೆಯಲ್ಲಿ ಜಿಲ್ಲಾ ಮಟ್ಟದ ಎನ್‌ಸಿಒಆರ್‌ಡಿ ಸಭೆಗಳನ್ನು ನಡೆಸಲು ಎಲ್ಲಾ ಘಟಕಾಧಿಕಾರಿಗಳಿಗೆ ತಿಳಿಸಲಾಗಿರುತ್ತದೆ. ಪ್ರತಿ ವರ್ಷ ಜೂನ್ 26ರಂದು ಮಾದಕ ವಸ್ತುಗಳ ನಿಗ್ರಹ ದಿನವನ್ನು ಆಚರಣೆ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮಾದಕ ವಸ್ತು ಮಾರಾಟ ಉತ್ಪಾದನೆ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ವಿ.ಸಿ. ಮೂಲಕವು ಸಹ ಎಲ್ಲ ಘಟಕಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...