ಮಂಡ್ಯ: ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹ ನೀಡಬೇಕು, ಈ ಮೂಲಕ ಯುವ ರೈತರ ಮದುವೆಯನ್ನು ಪ್ರೋತ್ಸಾಹಿಸುವ ಕೆಲಸ ಇನ್ನಾದರೂ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೆಲೆ ಸರ್ಕಾರಿ ಕೆಲಸಕ್ಕೆ ನೇಮಕಾತಿ ಆಗುವುದು ತೀರಾ ವಿಳಂಬವಾಗಿದೆ. ಇದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಸರ್ಕಾರದ ನೀತಿಯಿಂದಾಗಿ ಖಾಸಗಿ ಕಂಪನಿಗಳು ಕರ್ನಾಟಕಕ್ಕೆ ಉದ್ಯಮ ಸ್ಥಾಪನೆಗಾಗಿ ಬರುತ್ತಿಲ್ಲ ಎಂದು ಆರೋಪಿಸಿದರು.
ರೈತರ ಬೆಳೆಗಳಿಗೆ ಬೆಂಬಲ ಬೆಲೆ ಇಲ್ಲ, ಸಮರ್ಪಕವಾಗಿ ಬೆಳೆ ಬೆಳೆಯಲು ನೀರು ಇಲ್ಲ. ಕೃಷಿ ನಂಬಿಕೊಂಡಿರುವವರ ಬದುಕು ಮೂರಾ ಬಟ್ಟೆಯಾಗಿದೆ. ಇತ್ತ ಕೃಷಿಯನ್ನು ನಂಬಿಕೊಂಡು ಬದುಕು ಕಟ್ಟಿಕೊಳ್ಳಬೇಕೆಂದಿರುವ ಯುವ ರೈತರಿಗೆ ಹೆಣ್ಣು ಸಿಗುತ್ತಿಲ್ಲ. ಇದರಿಂದ ಯುವ ರೈತರಿಗೆ ಬದುಕಿನ ಗ್ಯಾರಂಟಿ ಇಲ್ಲವಾಗಿದೆ ಎಂದು ವಿಷಾದಿಸಿದರು.
ರೈತರನ್ನು ಮದುವೆಯಾಗುವ ಹುಡುಗಿಯರಿಗೆ ₹5 ಲಕ್ಷ ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವನ್ನು ಕೆಆರ್‌ಆರ್‌ಎಸ್ ಒತ್ತಾಯಿಸಿದೆ.
ರೈತ ಯುವಕರನ್ನು ಮದುವೆಯಾಗುವ ಹುಡುಗಿಯರ ಸಂಖ್ಯೆ ತೀವ್ರವಾಗಿ ಕಡಿಮೆಯಾಗುತ್ತಿದೆ ಮತ್ತು ಇದು ಒಂದು ಉದಯೋನ್ಮುಖ ಸಾಮಾಜಿಕ ಸಮಸ್ಯೆಯಾಗಿದ್ದು, ಸರ್ಕಾರ ಇನ್ನೂ ಇದರ ಬಗ್ಗೆ ಗಮನ ಹರಿಸಿಲ್ಲ ಎಂದು ಕೆಆರ್‌ಆರ್‌ಎಸ್ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.
ಇದೇ ತಿಂಗಳ 5ನೇ ತಾರೀಖಿನಂದು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಸಹ ಈ ಬೇಡಿಕೆಯನ್ನು ಸರ್ಕಾರದ ಮುಂದೆ ಇಟ್ಟಿತ್ತು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಕೃಷಿಯಲ್ಲಿ ತೊಡಗಿರುವ ಹುಡುಗರನ್ನು ಮದುವೆಯಾಗುವ ಹುಡುಗಿಯರ ಸಂಖ್ಯೆ ತೀವ್ರ ಮಟ್ಟದಲ್ಲಿ ಇಳಿಕೆ ಆಗಿದೆ. ಇದು ಹೊಸ ರೀತಿಯ ಸಾಮಾಜಿಕ ಸಮಸ್ಯೆಯಾಗಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದ್ದರು.
ಇನ್ನು ಯುವ ಕೃಷಿಕರನ್ನು ಮದುವೆಯಾಗುವ ವಧುಗಳಿಗೆ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಸರ್ಕಾರವನ್ನು ಈ ಮೂಲಕ ಒತ್ತಾಯಿಸುತ್ತಿದೆ. ಇದು ವೈವಾಹಿಕ ಮೈತ್ರಿಗಳನ್ನು ಪ್ರೋತ್ಸಾಹಿಸುವ ಪ್ರಯತ್ನವಾಗಿದೆ ಎಂದು ಹೇಳಿದ್ದರು.


