Homeಮುಖಪುಟ'ನರೇಗಾ' ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

- Advertisement -
- Advertisement -

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು ‘ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ’ ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ.

ಸರ್ಕಾರ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ ಒದಗಿಸುವ ಖಾತರಿಯುಕ್ತ ಉದ್ಯೋಗವನ್ನು ಪ್ರಸ್ತುತದ 100 ದಿನಗಳಿಂದ 125 ದಿನಗಳಿಗೆ ಏರಿಸಲು ನಿರ್ಧರಿಸಿದೆ. ಜೊತೆಗೆ, ಈ ಯೋಜನೆಯಡಿ ಕನಿಷ್ಠ ಕೂಲಿಯನ್ನು ದಿನಕ್ಕೆ 240 ರೂಪಾಯಿಗೆ ಮರುಪರಿಷ್ಕರಣೆ ಮಾಡಲು ಉದ್ದೇಶಿಸಿದೆ. ಈ ವಿಸ್ತರಿತ ಯೋಜನೆಯನ್ನು ಜಾರಿಗೆ ತರುವ ಸಲುವಾಗಿ ಹೆಚ್ಚುವರಿ ಬಜೆಟ್ ಅನುದಾನ ಒದಗಿಸಲು ತೀರ್ಮಾನಿಸಿದೆ.

ನರೇಗಾ ಯೋಜನೆಯಡಿ ಬಾಕಿ ಉಳಿದಿರುವ ರಾಜ್ಯದ ಪಾಲು ಸುಮಾರು 51,627 ಕೋಟಿ ರೂಪಾಯಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರುತ್ತಿರುವ ನಡುವೆ ಯೋಜನೆಯಲ್ಲಿ ಬದಲಾವಣೆಗಳನ್ನು ತರಲು ಕೇಂದ್ರ ಮುಂದಾಗಿದೆ.

ನರೇಗಾ ಹಣ ತಡೆಹಿಡಿದಿರುವುದರಿಂದ ಗ್ರಾಮೀಣ ಭಾಗದ ಕಾರ್ಮಿಕರಿಗೆ ಕೂಲಿ ಕೊಡುವುದೇ ನಿಂತುಹೋಗಿದೆ ಮತ್ತು ಚಾಲ್ತಿಯಲ್ಲಿರುವ ಅನೇಕ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿವೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿಕೊಂಡಿದೆ. ರಾಜಕೀಯ ದ್ವೇಷದಿಂದ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದೆ.

ನರೇಗಾ ಯೋಜನೆಯ ಅನುಷ್ಠಾನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ, ಮಾರ್ಚ್ 9, 2022 ರಿಂದ ಪಶ್ಚಿಮ ಬಂಗಾಳದಲ್ಲಿ ಯೋಜನೆಗೆ ಹಣಕಾಸು ಒದಗಿಸುವುದನ್ನು ನಿಲ್ಲಿಸಿದೆ. ಬಾಕಿ ಪಾವತಿಸುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳ ಸರ್ಕಾರ ಕಾನೂನು ಹೋರಾಟ ನಡೆಸುತ್ತಿದೆ.

ಆಗಸ್ಟ್ 1,2025ರಿಂದ ಪಶ್ಚಿಮ ಬಂಗಾಳದಲ್ಲಿ ನರೇಗಾ ಯೋಜನೆಯನ್ನು ಪುನರ್‌ ಅನುಷ್ಠಾನಗೊಳಿಸುವಂತೆ ನಿರ್ದೇಶಿಸಿದ ಕಲ್ಕತ್ತಾ ಹೈಕೋರ್ಟ್‌ ಜೂನ್ 18,2025ರಂದು ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಅಕ್ಟೋಬರ್ 27, 2025ರಂದು ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ರಾಜ್ಯದಲ್ಲಿ ಯೋಜನೆಯ ಅನುಷ್ಠಾನಕ್ಕೆ ‘ವಿಶೇಷ ಷರತ್ತುಗಳನ್ನು’ ವಿಧಿಸುವ ಅಧಿಕಾರವನ್ನು ಹೈಕೋರ್ಟ್ ಕೇಂದ್ರಕ್ಕೆ ಬಿಟ್ಟಿತ್ತು.

ಜೂನ್‌ 18ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜುಲೈ 31ರಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಿಶೇಷ ರಜಾ ಅವಧಿಯ ಅರ್ಜಿ ಸಲ್ಲಿಸಿತ್ತು. ಆದರೆ, ಅದರ ಮರುದಿನ ಆಗಸ್ಟ್ 1ರಂದು ಯೋಜನೆ ಪುನರಾರಂಭಿಸುವಂತೆ ಹೈಕೋರ್ಟ್ ಸೂಚಿಸಿತ್ತು. ಆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಆಗಸ್ಟ್ 2025ರಿಂದ ಯೋಜನೆಯನ್ನು ಪುನರ್‌ ಅನುಷ್ಠಾನಗೊಳಿಸುವಾಗ, ಯಾವುದೇ ಅಕ್ರಮಗಳು ಸಂಭವಿಸದಂತೆ ನೋಡಿಕೊಳ್ಳಲು ದೇಶದ ಇತರ ರಾಜ್ಯಗಳಲ್ಲಿ ಇರುವಂತೆ ವಿಶೇಷ ಷರತ್ತುಗಳು, ನಿರ್ಬಂಧಗಳು ಮತ್ತು ನಿಯಮಗಳು ಇತ್ಯಾದಿಗಳನ್ನು ವಿಧಿಸಲು ಕೇಂದ್ರ ಸರ್ಕಾರ ಸಂಪೂರ್ಣ ಅಧಿಕಾರ ಹೊಂದಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿತ್ತು.

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಯಾದ ಕಾರಣ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಪಶ್ಚಿಮ ಬಂಗಾಳದಲ್ಲಿ ವಿಶೇಷ ಷರತ್ತುಗಳೊಂದಿಗೆ ನರೇಗಾ ಯೋಜನೆಯನ್ನು ಪುನರಾರಂಭಿಸಲು ಮುಂದಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ನವೆಂಬರ್‌ನಲ್ಲಿ ವರದಿ ಮಾಡಿತ್ತು.

ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಪಾಲಿಸದ ಕಾರಣ 2005ರ ನರೇಗಾ ಕಾಯ್ದೆಯ ಸೆಕ್ಷನ್ 27 ಅನ್ನು ಅನ್ವಯಿಸಿ ಕೇಂದ್ರ ಸರ್ಕಾರ ಮಾರ್ಚ್ 9, 2022ರಿಂದ ಪಶ್ಚಿಮ ಬಂಗಾಳಕ್ಕೆ ಯೋಜನೆಯ ಹಣ ಬಿಡುಗಡೆ ಮಾಡುವುದನ್ನು ಸ್ಥಗಿತಗೊಳಿಸಿದೆ. ಅಂದಿನಿಂದ, ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಯಾವುದೇ ಕೆಲಸ ನಡೆದಿಲ್ಲ. ಯೋಜನೆಯನ್ನು ಸ್ಥಗಿತಗೊಳಿಸುವ ಮೊದಲು, 2014-15 ಮತ್ತು 2021-22 ರ ನಡುವೆ ಪಶ್ಚಿಮ ಬಂಗಾಳದ 51 ಲಕ್ಷದಿಂದ 80 ಲಕ್ಷ ಕುಟುಂಬಗಳು ವಾರ್ಷಿಕವಾಗಿ ಯೋಜನೆಯ ಲಾಭ ಪಡೆಯುತ್ತಿದ್ದವು.

2005ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿರುವ ನರೇಗಾ ಕಾಯ್ದೆ ಭಾರತದ ಅತಿದೊಡ್ಡ ಸಾಮಾಜಿಕ ಭದ್ರತಾ ಕ್ರಮಗಳಲ್ಲಿ ಒಂದಾಗಿದೆ. ಗ್ರಾಮೀಣ ಕುಟುಂಬಗಳಿಗೆ ‘ಕೆಲಸದ ಹಕ್ಕನ್ನು’ ಖಾತರಿಪಡಿಸುವ ಉದ್ದೇಶದಿಂದ ರಚಿತವಾದ ಈ ಕಾನೂನು, ವಿಶೇಷ ಕೌಶಲ್ಯಗಳಿಲ್ಲದ ಜನರಿಗೆ ಕೆಲಸದ ಖಾತರಿ ಒದಗಿಸುತ್ತದೆ.

ಪ್ರಸ್ತುತ ನರೇಗಾ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 100 ದಿನಗಳ ಕೆಲಸ ಸಿಗುತ್ತಿದೆ ಮತ್ತು ಕೂಲಿ ದರಗಳು ರಾಜ್ಯ ಸರ್ಕಾರಗಳು ಪ್ರಕಟಿಸುವ ಅಧಿಸೂಚನೆಗಳ ಅನುಸಾರ ಇದೆ. ಆದರೆ ಹೋರಾಟಗಾರರು ಮತ್ತು ಸಂಘಟನೆಗಳು ದೀರ್ಘಕಾಲದಿಂದಲೂ ಈ ಯೋಜನೆಯ ಕೊರತೆಗಳನ್ನು ಎತ್ತಿತೋರಿಸುತ್ತಲೇ ಬಂದಿದ್ದಾರೆ. ಕೂಲಿ ಅತ್ಯಂತ ಕಡಿಮೆ ಇರುವುದು, ಕೂಲಿ ಪಾವತಿಯಲ್ಲಿ ತಿಂಗಳುಗಳ ಕಾಲ ತಡವಾಗುವುದು, ಹಾಗೂ ಯೋಜನೆಗೆ ತೀವ್ರ ಹಣಕಾಸಿನ ಕೊರತೆ, ಇವೆಲ್ಲವೂ ಈ ಯೋಜನೆಯ ದೊಡ್ಡ ತೊಡಕುಗಳು.

ನರೇಗಾ ಯೋಜನೆಯ ಕೂಲಿಯನ್ನು ಪ್ರತಿ ರಾಜ್ಯದ ಕನಿಷ್ಠ ಕೂಲಿಗೆ (statutory minimum wage) ಸಮನಾಗಿ ಹೆಚ್ಚಿಸಬೇಕು. ಸರ್ಕಾರ ಈಗ ಪ್ರಸ್ತಾವಿಸಿರುವ ದಿನಕ್ಕೆ 240 ರೂಪಾಯಿ ಕೂಲಿ ಕೂಡ ಹಲವು ರಾಜ್ಯಗಳಲ್ಲಿ ಕಾನೂನುಬದ್ಧವಾಗಿ ನಿಗದಿಪಡಿಸಿರುವ ಕನಿಷ್ಠ ಕೂಲಿಗಿಂತ ಕಡಿಮೆ ಇದೆ. ಇದರಿಂದಾಗಿ ಗ್ರಾಮೀಣ ಕಾರ್ಮಿಕರಿಗೆ ರಾಜ್ಯದ ಇತರ ಕಾರ್ಮಿಕರಿಗಿಂತ ಕಡಿಮೆ ಕೂಲಿ ಕೊಡುವುದು ಕಾನೂನಿನ ಮಟ್ಟದಲ್ಲೇ ಸ್ಥಿರೀಕರಣಗೊಂಡಂತಾಗುತ್ತದೆ. ಈ ಮೂಲಕ ‘ಕೂಲಿ ತಾರತಮ್ಯವನ್ನು ಸಾಂಸ್ಥಿಕಗೊಳಿಸಲಾಗುತ್ತಿದೆ (institutionalising wage discrimination)ಎಂದು ಹೋರಾಟಗಾರರು ಹೇಳುತ್ತಿದ್ದಾರೆ.

ಹಣಕಾಸು ವರ್ಷದ ಮಧ್ಯದಲ್ಲಿ ಯೋಜನೆಯ ಹಣ ನಿಯಮಿತವಾಗಿ ಖಾಲಿಯಾಗುವುದರಿಂದ, ರಾಜ್ಯಗಳು ಕೆಲಸ ನಿಲ್ಲಿಸುವ ಅಥವಾ ವೇತನ ವಿಳಂಬ ಮಾಡುವ ಪರಿಸ್ಥಿತಿಯಿದೆ. ಹಾಗಾಗಿ ಯೋಜನೆಯ ಬಜೆಟ್ ಹೆಚ್ಚಿಸಬೇಕು ಎಂಬ ಬೇಡಿಕೆ ಬಹಳ ಹಿಂದಿನಿಂದಲೂ ಇದೆ. ಇದರ ಜೊತೆಗೆ ಆಧಾರ್-ಸಂಬಂಧಿತ ಪಾವತಿ ಅಡೆತಡೆಗಳನ್ನು ಪರಿಹರಿಸಬೇಕು ಎಂಬ ಮತ್ತೊಂದು ಬೇಡಿಕೆಯೂ ಇದೆ. ಜನವರಿ 1, 2024 ರಿಂದ ಆಧಾರ್ ಆಧರಿತ ಪಾವತಿ ವ್ಯವಸ್ಥೆ( ಎಬಿಪಿಎಸ್‌) ಅನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇದರಿಂದ ಕಾರ್ಮಿಕರ ಕೂಲಿ ಪಾವತಿಯಲ್ಲಿ ಇನ್ನಷ್ಟು ಅಡೆತಡೆಗಳು ಎದುರಾಗುತ್ತಿವೆ ಎಂಬ ವರದಿಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...