Homeಮುಖಪುಟನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

- Advertisement -
- Advertisement -

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ.

ಡಿಸೆಂಬರ್ 8ರಂದು ಪ್ರಕರಣದ ತೀರ್ಪು ಪ್ರಕಟಿಸಿದ್ದ ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಹನಿ ಎಂ.ವರ್ಗೀಸ್, ಪ್ರಕರಣದ 8ನೇ ಆರೋಪಿಯಾಗಿದ್ದ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ್ದರು.

ಉಳಿದ ಆರೋಪಿಗಳಾದ ಸುನಿಲ್ ಎನ್.ಎಸ್ ಅಲಿಯಾಸ್‌ ಪಲ್ಸರ್ ಸುನಿ, ಮಾರ್ಟಿನ್ ಆಂಟೋನಿ, ಮಣಿಕಂಠನ್ ಬಿ, ವಿಜೀಶ್ ವಿಪಿ, ಸಲೀಂ ಎಚ್ ಅಲಿಯಾಸ್ ವಡಿವಲ್ ಸಲೀಂ ಹಾಗೂ ಪ್ರದೀಪ್ ಅವರನ್ನು ದೋಷಿಗಳೆಂದು ಘೋಷಿಸಿದ್ದರು.

ಶಿಕ್ಷೆಯನ್ನು ಪ್ರಶ್ನಿಸಿ ಆರು ಅಪರಾಧಿಗಳು ಮಂಡಿಸಿದ ವಾದ ಆಲಿಸಿದ ನ್ಯಾಯಾಲಯ ಸಾಮೂಹಿಕ ಅತ್ಯಾಚಾರ ಕೃತ್ಯಕ್ಕಾಗಿ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ತನ್ನ ವೃದ್ಧ ತಾಯಿಯ ಪಾಲನೆಗೆ ಇರುವುದು ತಾನೊಬ್ಬನೇ, ಹಾಗಾಗಿ ಶಿಕ್ಷೆಯ ಪ್ರಮಾಣ ತಗ್ಗಿಸುವಂತೆ ಪ್ರಕರಣದ ಪ್ರಮುಖ ಆರೋಪಿ ಎಂದು ಪಲ್ಸರ್‌ ಸುನಿ ಕೋರಿದ್ದರು. ಮತ್ತೊಬ್ಬ ಆರೋಪಿ ಆಂಟನಿ ವಾದ ಮಂಡಿಸಿ ಅಪರಾಧದಲ್ಲಿ ತನ್ನ ಪಾತ್ರ ಇಲ್ಲವಾದರೂ ಈಗಾಗಲೇ ಹಲವು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದೇನೆ. ಹೆತ್ತವರು ತನ್ನ ಮೇಲೆ ಅವಲಂಬಿತರಾಗಿದ್ದಾರೆ ಎಂದಿದ್ದರು. ಮಣಿಕಂಠನ್‌ ಕೂಡ ಇದೇ ರೀತಿಯ ಮನವಿ ಮಾಡಿದ್ದರು. ವಿಜೇತ್‌ ತನ್ನ ಊರಿನ ಸಮೀಪದ ಜೈಲಿಗೆ ಕಳಿಸುವಂತೆ ವಿನಂತಿಸಿದ್ದರು. ವಡಿವಲ್ ಸಲೀಂ ಮತ್ತು ಪ್ರದೀಪ್ ತಾವು ನಿರಪರಾಧಿಗಳು ಎಂದಿದ್ದರು.

ಅಪರಾಧಿಗಳ ವಾದವನ್ನು ಬಲವಾಗಿ ವಿರೋಧಿಸಿದ್ದ ಸರ್ಕಾರಿ ವಿಶೇಷ ಅಭಿಯೋಜಕ ಅಜಕುಮಾರ್, ಸಮಾಜ ಇಂತಹ ಅಪರಾಧಗಳನ್ನು ಸಹಿಸದು ಎಂಬ ಸಂದೇಶವನ್ನು ಶಿಕ್ಷೆ ಸಾರಬೇಕು. ಎಲ್ಲಾ 6 ಜನರಿಗೆ ಅವರ ಅಪರಾಧಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಕೋರಿದ್ದರು.

ಪಿತೂರಿಯಲ್ಲಿ ಭಾಗವಹಿಸಿದ ಎಲ್ಲರೂ ತಮ್ಮ ಅಪರಾಧಗಳಿಗೆ ಸಮಾನವಾಗಿ ಹೊಣೆಗಾರರಾಗಿದ್ದರೂ, ಸುನಿ ಮಾತ್ರ ನಿಜವಾಗಿಯೂ ಅತ್ಯಾಚಾರ ಎಸಗಿದ್ದಾನೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಳ್ಳಬೇಕಾಗಬಹುದು ಎಂದು ನ್ಯಾಯಾಧೀಶೆ ಹನಿ ಅವರು ಮೌಖಿಕವಾಗಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...