Homeಕರ್ನಾಟಕಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

- Advertisement -
- Advertisement -

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮತ್ತು ಅವರ ಮಗ ಹರ್ಷಾನಂದ ಗುತ್ತೇದಾರ್ ಅವರನ್ನು ಪ್ರಮುಖ ಆರೋಪಿಗಳನ್ನಾಗಿ ಹೆಸರಿಸಿದೆ ಎಂದು ವರದಿಯಾಗಿದೆ.

ಆರೋಪ ಪಟ್ಟಿಯಲ್ಲಿ ಇತರ ಐದು ಮಂದಿಯ ಮೇಲೆಯೂ ಆರೋಪ ಹೊರಿಸಲಾಗಿದೆ, ಮತ್ತು ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಸುಭಾಷ್ ಗುತ್ತೇದಾರ್ ಮತ್ತು ಅವರ ಮಗ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

2023ರ ವಿಧಾನಸಭಾ ಚುನಾವಣೆಗೆ ಮುನ್ನ ಈ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿತ್ತು. ಆಳಂದ ಕ್ಷೇತ್ರದಿಂದ ಸುಭಾಷ್ ಗುತ್ತೇದಾರ್ ಮರು ಆಯ್ಕೆ ಬಯಸಿದ್ದರು.

ನಕಲಿ ಫಾರ್ಮ್ 7ರ ಮೂಲಕ ಆಳಂದ ವಿಧಾನಸಭಾ ಕ್ಷೇತ್ರದ 6 ಸಾವಿರಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಪ್ರಯತ್ನಪಟ್ಟಿರುವುದು 2023ರ ವಿಧಾನಸಭಾ ಚುನಾವಣೆಗೆ ಮುನ್ನ ಬೆಳಕಿಗೆ ಬಂದಿತ್ತು.

ಈ ಸಂಬಂಧ ಆಳಂದದ ಆಗಿನ ಚುನಾವಣಾಧಿಕಾರಿ ಹಾಗೂ ಕಲಬುರಗಿಯ ಸಹಾಯಕ ಆಯುಕ್ತೆಯಾಗಿದ್ದ ಮಮತಾ ದೇವಿ ಅವರು 2023ರ ಫೆಬ್ರವರಿ 21ರಂದು ಆಳಂದ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಆರಂಭದಲ್ಲಿ ಆಳಂದ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದರು. ಬಳಿಕ ತನಿಖೆ ಸಿಐಡಿಗೆ ವರ್ಗಾವಣೆಯಾಗಿತ್ತು.

ಆರೋಪಿಗಳನ್ನು ಬಂಧಿಸಲು ಅಗತ್ಯವಾದ ನಿರ್ಣಾಯಕ ದತ್ತಾಂಶಗಳನ್ನು ಚುನಾವಣಾ ಆಯೋಗ ಸಿಐಡಿ ಜೊತೆ ಹಂಚಿಕೊಳ್ಳದ ಕಾರಣ ಪ್ರಕರಣ ಬಹುತೇಕ ಹಳ್ಳಹಿಡಿದಂತೆ ಕಾಣುತ್ತಿದೆ ಎಂದು ದಿ ಹಿಂದೂ ಪತ್ರಿಕೆ 2025ರ ಸೆಪ್ಟೆಂಬರ್ 7ರಂದು ವಿಸ್ತೃತ ವರದಿ ಪ್ರಕಟಿಸಿತ್ತು.

ಸೆಪ್ಟೆಂಬರ್ 18ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಳಂದ ಪ್ರಕರಣದ ದಾಖಲೆ ಬಿಡುಗಡೆ ಮಾಡಿದ್ದರು.

ಆ ಬಳಿಕ, ಆಳಂದ ಸೇರಿದಂತೆ ರಾಜ್ಯದಾದ್ಯಂತ ದಾಖಲಾಗಿರುವ ಮತ್ತು ಮುಂದೆ ದಾಖಲಾಗಲಿರುವ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ 2025ರ ಸೆಪ್ಟೆಂಬರ್ 20ರಂದು ರಾಜ್ಯ ಸರ್ಕಾರ ಆದೇಶಿಸಿತ್ತು.

2025ರ ಸೆಪ್ಟೆಂಬರ್ 26ರಂದು ಪ್ರಕರಣವನ್ನು ಸಿಐಡಿಯಿಂದ ಎಸ್‌ಐಟಿ ವಹಿಸಿಕೊಂಡಿತ್ತು. ಆ ಬಳಿಕ ಹಳ್ಳ ಹಿಡಿದಿದ್ದ ತನಿಖೆ ಚುರುಕುಗೊಂಡಿತ್ತು.

ಮತದಾರರ ಪಟ್ಟಿಯಿಂದ ಮತದಾರರ ಹೆಸರು ಅಳಿಸುವಂತೆ ನಕಲಿ ಫಾರ್ಮ್‌-7ರ ಮೂಲಕ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿಗೆ 80 ರೂಪಾಯಿಯನ್ನು ಡೇಟಾ ಸೆಂಟರ್ ಅಪರೇಟರ್‌ಗೆ ಪಾವತಿಸಲಾಗಿದೆ ಎಂಬುವುದು ಎಸ್‌ಐಟಿ ತನಿಖೆಯಿಂದ ಬಯಲಾಗಿತ್ತು.

ಡಿಸೆಂಬರ್ 2022ರಿಂದ ಫೆಬ್ರವರಿ 2023ರವರೆಗೆ ಕ್ಷೇತ್ರದ ಒಟ್ಟು 6,018 ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲು ನಕಲಿ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇದಕ್ಕಾಗಿ ಒಟ್ಟು 4.8 ಲಕ್ಷ ರೂ. ಪಾವತಿಸಲಾಗಿದೆ ಎಂದು ಎಸ್‌ಐಟಿ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸಲು ಕಲಬುರಗಿಯ ಕೇಂದ್ರ ಸ್ಥಾನದಲ್ಲಿರುವ ಒಂದು ಡೇಟಾ ಸೆಂಟರ್‌ನಿಂದ ನಕಲಿ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬುವುದನ್ನು ಎಸ್‌ಐಟಿ ಪತ್ತೆ ಮಾಡಿದೆ. ಸ್ಥಳೀಯ ನಿವಾಸಿ ಮೊಹಮ್ಮದ್ ಅಶ್ಫಾಕ್ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಸೂಚನೆಗಳು ಎಸ್‌ಐಟಿ ತನಿಖೆಯಲ್ಲಿ ಕಂಡುಬಂದಿರುವುದಾಗಿ ವರದಿ ಹೇಳಿತ್ತು.

ಎಸ್‌ಐಟಿ ಅಧಿಕಾರಿಗಳು ಸುಭಾಷ್ ಗುತ್ತೇದಾರ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದರು.

ನಂತರ, ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸುಭಾಷ್ ಗುತ್ತೇದಾರ್ ಮತ್ತು ಅವರ ಮಗ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾನಂದ ಗುತ್ತೇದಾರ್‌ಗೆ ಎಸ್‌ಐಟಿ ನೋಟಿಸ್ ಜಾರಿ ಮಾಡಿತ್ತು. ಇದರಿಂದ ಬಂಧನ ಭೀತಿಯಲ್ಲಿದ್ದ ತಂದೆ ಮಗ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

ಈಗ ಸಲ್ಲಿಸಿರುವುದು ಮೊದಲ ಅಥವಾ ಪ್ರಾಥಮಿಕ ಆರೋಪಪಟ್ಟಿ, ಚುನಾವಣಾ ಆಯೋಗ ಅಗತ್ಯ ದತ್ತಾಂಶವನ್ನು ಒದಗಿಸಿದ ನಂತರ ಹೆಚ್ಚಿನ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಕೋರಿ ಎಸ್‌ಐಟಿ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಯಿದೆ ಎಂದು ದಿ ಹಿಂದೂ ಶನಿವಾರ (ಡಿ.13) ವರದಿ ಮಾಡಿದೆ.

ಆಳಂದದಿಂದ ನಾಲ್ಕು ಬಾರಿ ಶಾಸಕರಾಗಿರುವ ಸುಭಾಷ್ ಗುತ್ತೇದಾರ್ 2023ರಲ್ಲಿ ಮೂರು ಬಾರಿ ಶಾಸಕರಾಗಿದ್ದ ಕಾಂಗ್ರೆಸ್‌ನ ಬಿ.ಆರ್. ಪಾಟೀಲ್ ವಿರುದ್ಧ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಇದಕ್ಕೂ ಮುನ್ನ 2018 ರಲ್ಲಿ 697 ಮತಗಳ ಅಲ್ಪ ಅಂತರದಿಂದ ಬಿ.ಆರ್ ಪಾಟೀಲ್ ವಿರುದ್ದ ಗುತ್ತೇದಾರ್ ಗೆಲುವು ಸಾಧಿಸಿದ್ದರು.

ಸುಭಾಷ್ ಗುತ್ತೇದಾರ್ ಅವರ ಎದುರಾಳಿಗೆ ಮತ ಹಾಕುತ್ತಾರೆ ಎಂದು ಶಂಕಿಸಲಾದ ಮತದಾರರ ಹೆಸರುಗಳನ್ನು ಗುರಿಯಾಗಿಸಿಕೊಂಡು ಅಳಿಸಲು ಗುತ್ತೇದಾರ್ ಕುಟುಂಬವು ಕಲಬುರಗಿಯಲ್ಲಿ ಕಾಲ್ ಸೆಂಟರ್ ತರಹದ ಸಂಸ್ಥೆಯನ್ನು ನಡೆಸುತ್ತಿದ್ದ ಅಕ್ರಮ್ ಪಾಷಾ ಅವರನ್ನು ನೇಮಿಸಿಕೊಂಡಿತ್ತು ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಗುತ್ತೇದಾರ್ ಕುಟುಂಬಕ್ಕೆ ಸಂಬಂಧಿಸಿದ ಅನೇಕ ಸ್ಥಳಗಳ ಮೇಲೆ ಎಸ್‌ಐಟಿ ದಾಳಿ ನಡೆಸಿದಾಗ, ಅವರು ಆಳಂದದಲ್ಲಿ ಸಾಕ್ಷ್ಯಗಳನ್ನು ಸುಟ್ಟು ನಾಶಪಡಿಸಿದ್ದಾರೆ ಎಂಬುವುದಾಗಿ ಎಸ್‌ಐಟಿ ಆರೋಪಿಸಿದೆ ಎಂದು ದಿ ಹಿಂದೂ ವರದಿ ಹೇಳಿದೆ.

ಪಾಷಾ ಅವರ ಸಂಸ್ಥೆಯು ಮತದಾರರನ್ನು ಪಟ್ಟಿಯಿಂದ ಅಳಿಸಲು ಮಾಡಿದ ಪ್ರತಿ ನಕಲಿ ಫಾರ್ಮ್ 7 ಅರ್ಜಿಗೆ 80 ರೂಪಾಯಿ ನೀಡಲಾಗಿದೆ ಎಂದು ದೋಷಾರೋಪ ಪಟ್ಟಿ ಆರೋಪಿಸಿದೆ. ಅದರ 22,000ಕ್ಕೂ ಹೆಚ್ಚು ಪುಟಗಳು ಗುತ್ತೇದಾರ್ ಮತ್ತು ಪಾಷಾ ಅವರ ಸಂಸ್ಥೆಯ ನಡುವಿನ ಹಣದ ವ್ಯವಹಾರಗಳು ಸೇರಿದಂತೆ ಹಲವಾರು ತಾಂತ್ರಿಕ ಪುರಾವೆಗಳನ್ನು ಒಳಗೊಂಡಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ವಿವರಿಸಿದೆ.

ಅಕ್ರಮ್ ಪಾಷಾ, ಅವರ ಸಹೋದರ ಅಸ್ಲಂ ಪಾಷಾ ಮತ್ತು ಸಂಬಂಧಿ ಮೊಹಮ್ಮದ್ ಅಶ್ಫಾಕ್ ಜೊತೆ ಸೇರಿ ನಕಲಿ ದಾಖಲೆಗಳನ್ನು ಬಳಸಿಕೊಂಡು ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ (NVSP)ನಲ್ಲಿ ಖಾತೆಗಳನ್ನು ತೆರೆದಿದ್ದರು. ಪಶ್ಚಿಮ ಬಂಗಾಳ ಮೂಲದ ಬಾಪಿ ಅದ್ಯ ಎಂಬಾತ ನಡೆಸುತ್ತಿದ್ದ https://otpbazar.online ವೆಬ್‌ಸೈಟ್‌ನಿಂದ ನಕಲಿ ದಾಖಲೆಗಳನ್ನು ಖರೀದಿಸಿದ್ದರು. ಆತನಿಗೆ ಅಕ್ರಮ್ ಪಾಷಾ ಅವರ ಪತ್ನಿಯ ಖಾತೆಯಿಂದ ಹಣ ಪಾವತಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಅಶ್ಫಾಕ್ ಅವರು ಪಾಷಾ ಸಹೋದರರು ನೀಡಿದ್ದ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್ ಮಾತ್ರವಲ್ಲದೆ, ಅವರ ಮೊಬೈಲ್ ಫೋನ್ ಮತ್ತು ಇಂಟರ್ನೆಟ್ ಸಂಪರ್ಕವನ್ನೂ ಕೂಡ ಈ ಅಕ್ರಮಕ್ಕೆ ಬಳಸಿದ್ದಾರೆ. ಈ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಅವು ಸಾಕ್ಷ್ಯದ ಭಾಗವಾಗಿದೆ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

ವಂಚನೆಯಿಂದ ಸೃಷ್ಟಿಸಲಾದ ಲಾಗಿನ್ ಐಡಿಗಳನ್ನು ಬಳಸಿಕೊಂಡು ಮೂವರು ಆರೋಪಿಗಳು ಡಿಸೆಂಬರ್ 12, 2022 ಮತ್ತು ಫೆಬ್ರವರಿ 16, 2023ರ ನಡುವೆ 5,994 ನಕಲಿ ಫಾರ್ಮ್ 7 ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿಗಳನ್ನು ಆಳಂದ ವಿಧಾನಸಭಾ ಕ್ಷೇತ್ರದ ಮತದಾರರ ಹೆಸರಿನಲ್ಲಿ ಸಲ್ಲಿಸಲಾಗಿದೆ. ಅರ್ಜಿಯನ್ನು ಯಾರ ಹೆಸರಿನಲ್ಲಿ ಸಲ್ಲಿಸಲಾಗಿದೆಯೂ, ಯಾರ ಹೆಸರನ್ನು ಅಳಿಸಲು ಕೋರಲಾಗಿದೆಯೋ ಈ ಇಬ್ಬರಿಗೂ ಈ ವಿಷಯ ಗೊತ್ತಿರಲಿಲ್ಲ.

ಪ್ರಕರಣದ ಹಿನ್ನೆಲೆ : 2018ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 697 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಸುಭಾಷ್‌ ಗುತ್ತೇದಾರ್ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಆರ್.ಪಾಟೀಲ್ ಸೋಲನುಭವಿಸಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ಗೆದ್ದರು. ಚುನಾವಣೆಗೂ ಮುನ್ನ ಆದ ಬೆಳವಣಿಗೆಯಲ್ಲಿ ಸತ್ಯ ಸಂಗತಿಯೊಂದು ಪಾಟೀಲರ ಗಮನಕ್ಕೆ ಬಂದಿತ್ತು. ಸಾವಿರಾರು ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಿರುವುದು ಸ್ವತಃ ಮತದಾರರಿಗೂ ಗೊತ್ತಿಲ್ಲ ಎಂಬುದು ದೊಡ್ಡ ಆಘಾತ ತಂದಿತ್ತು.

ಈ ಸಂಬಂಧ ಬಿ.ಆರ್ ಪಾಟೀಲ್ ತಕ್ಷಣ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿದ್ದರು. ‘ಬೂತ್ ಮಟ್ಟದ ಅಧಿಕಾರಿಯೊಬ್ಬರು [ಬಿಎಲ್‌ಒ] ತಮ್ಮ ಸಹೋದರನ ಹೆಸರನ್ನೇ ಅಳಿಸಿ ಹಾಕಲು ಕೋರಿರುವ ಫಾರ್ಮ್ 7 ಅರ್ಜಿಯನ್ನು ಅನಿರೀಕ್ಷಿತವಾಗಿ ಗಮನಿಸಿದ್ದರು. ಆದರೆ, ಅವರ ಸಹೋದರ ಅರ್ಜಿ ಸಲ್ಲಿಸಿರಲಿಲ್ಲ. ಆ ಬಿಎಲ್‌ಒ ಸಹೋದರನು ನನ್ನ ಬೆಂಬಲಿಗ. ಅದೇ ಹಳ್ಳಿಯ ಇನ್ನೊಬ್ಬ ಮತದಾರರ ಹೆಸರಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅವರಿಗೂ ಅದರ ಬಗ್ಗೆ ತಿಳಿದಿರಲಿಲ್ಲ. ಇದು ನಮಗೆ ಮತ ಕಳ್ಳತನದ ಸುಳಿವು ನೀಡಿತ್ತು ಎನ್ನುತ್ತಾರೆ ಬಿ.ಆರ್ ಪಾಟೀಲ್

ಬಿ.ಆರ್ ಪಾಟೀಲ್ ಮೂಲಕ ಪ್ರಕರಣ ಸದ್ದು ಮಾಡುತ್ತಿದ್ದಂತೆ ತಮ್ಮ ಗುರುತುಗಳನ್ನು ದುರುಪಯೋಗ ಮಾಡಿಕೊಂಡು, ಫಾರ್ಮ್‌ 7ರ ಅರ್ಜಿಗಳನ್ನು ಸಲ್ಲಿಸಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿ ಹಾಕಲು ಯತ್ನಿಸಿರುವ ಸಂಬಂಧ ಅನೇಕ ಮತದಾರರು ತಮ್ಮ ದೂರುಗಳನ್ನು ಆಳಂದ ತಹಶೀಲ್ದಾರ್‌ಗೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ 6,018 ಅರ್ಜಿಗಳನ್ನು ಪರಿಶೀಲನೆ ಮಾಡಲಾಗಿತ್ತು.

ಆಳಂದದ ಚುನಾವಣಾಧಿಕಾರಿ ಹಾಗೂ ಕಲಬುರಗಿಯ ಸಹಾಯಕ ಆಯುಕ್ತೆ ಮಮತಾ ದೇವಿ ಅವರು 2023ರ ಫೆಬ್ರವರಿ 21ರಂದು ಆಳಂದ ಪೊಲೀಸರಿಗೆ ದೂರು ನೀಡಿ ಪ್ರಕರಣದ ಸ್ವರೂಪವನ್ನು ವಿವರಿಸಿದ್ದರು. 6,018 ಪ್ರಕರಣಗಳಲ್ಲಿ ಕೇವಲ 24 ಅರ್ಜಿಗಳು ಮಾತ್ರ ಅಸಲಿಯಾಗಿವೆ. ಸದರಿ 24 ಅರ್ಜಿಗಳಿಗೆ ಸಂಬಂಧಿಸಿದ ಮತದಾರರು ತಮ್ಮ ಕ್ಷೇತ್ರವನ್ನು ಬೇರೆಡೆಗೆ ಬದಲಿಸಿದ್ದರಿಂದ ಇಲ್ಲಿನ ಮತದಾರರ ಪಟ್ಟಿಯಲ್ಲಿ ಹೆಸರು ಅಳಿಸಿ ಹಾಕಲು ಕೋರಿರುವುದು ನಿಜ. ಉಳಿದ 5,994 ಮತದಾರರ ಹೆಸರಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಮಮತಾ ದೇವಿ ಹೇಳಿದ್ದರು.

ಇಷ್ಟು ದೊಡ್ಡ ಮಟ್ಟದಲ್ಲಿ ಸುಳ್ಳು ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿರುವ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ (26/2023 ಆಳಂದ ಪೊಲೀಸ್ ಠಾಣೆ) ದಾಖಲಾಗಿತ್ತು. ಅಂತಿಮವಾಗಿ, ಈ 5,994 ಮತದಾರರ ಹೆಸರುಗಳನ್ನು ಪಟ್ಟಿಯಲ್ಲಿ ಉಳಿಸಿಕೊಳ್ಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...