Homeಮುಖಪುಟಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

- Advertisement -
- Advertisement -

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿದ್ದಾರೆ.

ರಾಜ್ಯಪಾಲ ಸಿ.ವಿ ಆನಂದ್ ಬೋಸ್ ಸರ್ಕಾರದಿಂದ ವರದಿ ಕೇಳಿದ್ದು, ಪೊಲೀಸರು ಕಾರ್ಯಕ್ರಮದ ಮುಖ್ಯ ಸಂಘಟಕ ಸತಾದ್ರು ದತ್ತ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಮೆಸ್ಸಿ ಕಾರ್ಯಕ್ರಮದಲ್ಲಿ ಆಗಿದ್ದೇನು?

‘ಗೋಟ್ ಇಂಡಿಯಾ ಟೂರ್ 2025’ರ ಮೊದಲ ಹಂತವಾಗಿ ಶನಿವಾರ ಬೆಳಿಗ್ಗೆ 11:30ರ ಸುಮಾರಿಗೆ ಮೆಸ್ಸಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣ ತಲುಪಿದರು. ಅವರೊಂದಿಗೆ ಅರ್ಜೆಂಟೀನಾ ತಂಡದ ಸಹ ಆಟಗಾರರಾದ ಲೂಯಿಸ್ ಸುವಾರೆಜ್ ಮತ್ತು ರೊಡ್ರಿಗೋ ಡಿ ಪಾಲ್ ಇದ್ದರು. ಮೆಸ್ಸಿ ಕ್ರೀಡಾಂಗಣದಲ್ಲಿ ಜನತ್ತ ಕೈ ಬೀಸಿ, ಸಣ್ಣ ಗೌರವ ಸ್ವೀಕರಿಸಿ ಬಳಿಕ ಆಟಗಾರರು ಮತ್ತು ಗಣ್ಯರೊಂದಿಗೆ ಸಂವಾದ ನಡೆಸಿದರು.

ಕೇವಲ 10-20 ನಿಮಿಷಗಳಷ್ಟೇ ಇದ್ದು ಬೇಗನೇ ಹೊರಟುಹೋದರು. ಇದರಿಂದ 4 ರಿಂದ 18 ಸಾವಿರದವರೆಗೆ ಪಾವತಿಸಿ ಟಿಕೆಟ್ ಪಡೆದಿದ್ದ ಅಭಿಮಾನಿಗಳಿಗೆ ಮೆಸ್ಸಿಯನ್ನು ಸರಿಯಾಗಿ ನೋಡಲು ಸಾಧ್ಯವಾಗಲಿಲ್ಲ. ಕಾರಣ, ರಾಜಕಾರಣಿಗಳು, ಸೆಲೆಬ್ರಿಟಿಗಳು, ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಅವರನ್ನು ಬಿಗಿಯಾಗಿ ಸುತ್ತುವರಿದಿದ್ದರು.

ಇದರಿಂದ ನಿರಾಸೆಗೊಂಡ ಪ್ರೇಕ್ಷಕರು ಜೋರಾಗಿ ಕೂಗಲು ಶುರು ಮಾಡಿದರು. ನೀರಿನ ಬಾಟಲ್‌ಗಳು, ಕುರ್ಚಿಗಳು ಮತ್ತು ಇತರ ವಸ್ತುಗಳನ್ನು ಮೈದಾನಕ್ಕೆ ಎಸೆದರು. ಕೆಲವರು ಬ್ಯಾರಿಕೇಡ್‌ಗಳನ್ನು ಮುರಿದು ಮೈದಾನಕ್ಕೆ ನುಗ್ಗಿದರು. ಬ್ಯಾನರ್‌, ಹೋರ್ಡಿಂಗ್ಸ್, ಮತ್ತು ಕುಳಿತುಕೊಳ್ಳುವ ಸೀಟುಗಳನ್ನು ಹಾನಿಗೊಳಿಸಿದರು (ಕೆಲವನ್ನು ಬೆಂಕಿಹಚ್ಚಿದರು). ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ಗಲಾಟೆ ನಿಯಂತ್ರಿಸಿದರು. ಘಟನೆಯಿಂದ ಯಾವುದೇ ಸಾವು-ನೋವು ವರದಿಯಾಗಿಲ್ಲ, ಆದರೆ, ಕ್ರೀಡಾಂಗಣದ ಆಸ್ತಿಗೆ ಹಾನಿಯಾಗಿದೆ.

ಕ್ರೀಡಾಂಗಣದ ಕಾರ್ಯಕ್ರಮಕ್ಕೂ ಮುನ್ನ ಮೆಸ್ಸಿ ಅವರು ಲೇಕ್ ಟೌನ್‌ನಲ್ಲಿ ತಮ್ಮ 70 ಅಡಿ ಎತ್ತರದ ಪ್ರತಿಮೆಯನ್ನು ವರ್ಚುವಲ್‌ ಆಗಿ ಅನಾವರಣಗೊಳಿಸಿದರು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಳಪೆ ವ್ಯವಸ್ಥೆಗೆ ಆಘಾತ ವ್ಯಕ್ತಪಡಿಸಿ, ಮೆಸ್ಸಿ ಮತ್ತು ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಘಟನೆಯ ತನಿಖೆಗೆ ಉನ್ನತ ಮಟ್ಟದ ಸಮಿತಿ (ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ) ಘೋಷಿಸಿದ್ದಾರೆ. ಈ ಸಮಿತಿ ಘಟನೆ ಕಾರಣ ತಿಳಿಸಲಿದೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟುವ ಕ್ರಮಗಳನ್ನು ಶಿಫಾರಸು ಮಾಡಲಿದೆ.

ಪೊಲೀಸರು ಮುಖ್ಯ ಸಂಘಟಕ ಸತಾದ್ರು ದತ್ತ ಅವರನ್ನು ಕಳಪೆ ವ್ಯವಸ್ಥೆಗಾಗಿ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಡಿಜಿಪಿ ರಾಜೀವ್ ಕುಮಾರ್ ಅವರು ಸಂಘಟಕರು ಟಿಕೆಟ್ ಹಣ ಮರುಪಾವತಿಗೆ ಲಿಖಿತ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯಪಾಲ ಸಿ.ವಿ ಆನಂದ ಬೋಸ್ ಸರ್ಕಾರದಿಂದ ವಿವರವಾದ ವರದಿ ಕೇಳಿದ್ದು, ವ್ಯವಸ್ಥೆಯ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ಕೋಲ್ಕತ್ತಾದ ಕಾರ್ಯಕ್ರಮದ ಬಳಿಕ ಮೆಸ್ಸಿ ಇಂದು ಸಂಜೆ ಹೈದರಾಬಾದ್‌ಗೆ ತೆರಳಲಿದ್ದಾರೆ. ಅಲ್ಲಿ, ಕೋಲ್ಕತ್ತಾದ ಘಟನೆ ಮರುಕಳಿಸದಂತೆ ಎಲ್ಲಾ ಎಚ್ಚರಿಕೆ ವಹಿಸಲಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...