Homeಮುಖಪುಟಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ತಿರುವನಂತಪುರಂ ಮಹಾನಗರ, ವಕ್ಫ್‌ ವಿವಾದದ ಮುನಂಬಂ ಗೆದ್ದ ಬಿಜೆಪಿ

- Advertisement -
- Advertisement -

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆಯ ಸೂಚನೆ ನೀಡಿದೆ.

ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಪುರಸಭೆ ಹಾಗೂ ನಗರ ಮಹಾನಗರ ಪಾಲಿಕೆ, ಎಲ್ಲದರಲ್ಲೂ ಕಾಂಗ್ರೆಸ್-ಮುಸ್ಲಿಂ ಲೀಗ್ ನೇತೃತ್ವದ ಯುಡಿಎಫ್‌ ಹೆಚ್ಚಿನ ಸ್ಥಾನಗಳನ್ನು ಗಳಿಸಿದೆ. ಆಡಳಿತರೂಢ ಸಿಪಿಐ(ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್‌) ಕೆಲವೆಡೆ ತನ್ನ ಸಾಂಪ್ರದಾಯಿಕ ಬಲಿಷ್ಠ ಕೋಟೆಗಳನ್ನೂ ಉಳಿಸಿಕೊಳ್ಳಲು ಹೆಣಗಾಡಿದೆ.

ಮುಂದಿನ ವರ್ಷ (2026) ನಡೆಯಲಿರುವ ಕೇರಳದ ವಿಧಾನಸಭಾ ಚುನಾವಣೆಗೆ ಈ ಚುನಾವಣೆ ದಿಕ್ಸೂಚಿ ಎಂದು ಪರಿಗಣಿಸಲಾಗಿದೆ. ಇಂದಿನ ಫಲಿತಾಂಶ ರಾಜಕೀಯ ಪಲ್ಲಟಕ್ಕೆ ಕಾರಣವಾಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದರ ಜೊತೆಗೆ ತಿರುವನಂತಪುರಂ ಮಹಾನಗರ ಪಾಲಿಕೆ, ವಕ್ಫ್‌ ಭೂಮಿ ವಿವಾದದ ಕೇಂದ್ರವಾಗಿರುವ ಮುನಂಬಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ದಾಖಲಿಸಿರುವುದು, ಮುಂದಿನ ಚುನಾವಣೆಯಲ್ಲಿ ಎನ್‌ಡಿಎಯ ಸೀಮಿತ, ಆದರೆ ಗಮನಾರ್ಹ ವಿಸ್ತರಣೆಯನ್ನು ಒತ್ತಿ ಹೇಳುತ್ತಿದೆ.

ಕೇರಳದ 6 ಮಹಾನಗರ ಪಾಲಿಕೆಗಳು, 87 ಪುರಸಭೆಗಳು, 14 ಜಿಲ್ಲಾ ಪಂಚಾಯತ್‌ಗಳು, 152 ತಾಲೂಕು ಪಂಚಾಯತ್‌ಗಳು ಮತ್ತು 941 ಗ್ರಾಮ ಪಂಚಾಯತ್‌ಗಳಿಗೆ 2025ರ ಡಿಸೆಂಬರ್ 9 ಮತ್ತು 11ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಅದರ ಫಲಿತಾಂಶ ಇಂದು ಪ್ರಕಟಗೊಂಡಿದೆ.

6 ಮಹಾನಗರ ಪಾಲಿಕೆಗಳಾದ ತಿರುವನಂತಪುರಂ, ಕೊಲ್ಲಂ, ಕೊಚ್ಚಿ, ತ್ರಿಶೂರ್, ಕಣ್ಣೂರು, ಕೋಝಿಕ್ಕೋಡ್ ಪೈಕಿ ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರು ಈ ನಾಲ್ಕರಲ್ಲಿ ಯುಡಿಎಫ್‌ ಜಯಭೇರಿ ಸಾಧಿಸಿದೆ.

ಇದು ಗಮನಾರ್ಹ ಗೆಲುವು. ಏಕೆಂದರೆ, 2020ರಲ್ಲಿ ಎಲ್‌ಡಿಎಫ್‌ ಗೆದ್ದಿದ್ದ ಹಲವು ಮಹಾನಗರ ಪಾಲಿಕೆಗಳನ್ನು ಯುಡಿಎಫ್‌ ಮರಳಿ ಪಡೆದುಕೊಂಡಿದೆ. ವಿಶೇಷವಾಗಿ ಕಣ್ಣೂರು ಮತ್ತು ತ್ರಿಶೂರ್‌ ಪಾಲಿಕೆಗಳು ದೀರ್ಘಕಾಲದಿಂದ ಎಲ್‌ಡಿಎಫ್‌ನ ಬಲಿಷ್ಠ ಕೋಟೆಗಳಾಗಿದ್ದವು.

ಬಿಜೆಪಿ ನೇತೃತ್ವದ ಎನ್‌ಡಿಎ ಮೊದಲ ಬಾರಿಗೆ ತಿರುವನಂತಪುರಂ ಮಹಾನಗರ ಪಾಲಿಕೆಯನ್ನು ಗೆದ್ದುಕೊಂಡಿದೆ. ಇದು ಬಿಜೆಪಿಗೆ ಕೇರಳದ ನಗರ ರಾಜಕಾರಣದಲ್ಲಿ ಮಹತ್ವದ ಮುಂದಡಿಯಾಗಿದೆ.

ಎಲ್‌ಡಿಎಫ್‌ ಕೇವಲ ಒಂದು ಮಹಾನಗರ ಪಾಲಿಕೆಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕೋಝಿಕ್ಕೋಡ್ ಪಾಲಿಕೆಯಲ್ಲಿ ಎಲ್‌ಡಿಎಫ್‌ ಗೆದ್ದಿದೆ. ಆದರೆ, ಅಲ್ಲಿಯೂ ಯುಡಿಎಫ್‌ ಮತ್ತು ಎನ್‌ಡಿಎ ಪ್ರಬಲ ಪೈಪೋಟಿ ಕೊಟ್ಟಿದೆ.

ಒಟ್ಟು 86 ಪುರಸಭೆಗಳ (2020ರಲ್ಲಿ 87 ಇದ್ದವು, ಒಂದು ಕಡಿಮೆಯಾಗಿದೆ) ಪೈಕಿ 54 ಪುರಸಭೆಗಳನ್ನು ಯುಡಿಎಫ್‌ ಗೆದ್ದುಕೊಂಡಿದೆ. ಇದು ನಗರ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಯುಡಿಎಫ್‌ನ ಪ್ರಾಬಲ್ಯ ಹೆಚ್ಚಳವಾಗಿರುವುದನ್ನು ತೋರಿಸುತ್ತದೆ.

ಎರ್ನಾಕುಳಂ, ಆಲಪ್ಪುಝ, ಮಲಪ್ಪುರಂ, ಕೊಟ್ಟಾಯಂ, ಪಾಲಕ್ಕಾಡ್‌ ಪುರಸಭೆಗಳಲ್ಲಿ ಯುಡಿಎಫ್‌ ಬಲಿಷ್ಠವಾಗಿ ಗೆದ್ದಿದೆ. ಹಿಂದೆ ಕಳೆದುಕೊಂಡಿದ್ದ ಪತ್ತನಂತಿಟ್ಟ ಮತ್ತು ಇಡುಕ್ಕಿ ಪುರಸಭೆಗಳನ್ನು ಮರಳಿ ಪಡೆದಿದೆ.

ಎಲ್‌ಡಿಎಫ್‌ ತನ್ನ ಸಾಂಪ್ರದಾಯಿಕ ಬಲಿಷ್ಠ ಕೇಂದ್ರಗಳ ಪೈಕಿ ಕೆಲವನ್ನು ಉಳಿಸಿಕೊಂಡಿದೆ. ತಿರುವನಂತಪುರಂನ ಕೆಲ ಭಾಗಗಳು, ಕೊಲ್ಲಂ ಕೋಝಿಕ್ಕೋಡ್ ಮತ್ತು ಕಣ್ಣೂರಿನಲ್ಲಿ ಗೆಲುವು ದಾಖಲಿಸಿದೆ. ಆದರೆ, ಒಟ್ಟಾರೆಯಾಗಿ 2020ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆದಿದೆ.

ಪುರಸಭೆಗಳಲ್ಲಿ ಎನ್‌ಡಿಎ ದೊಡ್ಡ ಮಟ್ಟದ ಗೆಲುವು ಪಡೆದಿಲ್ಲ. ಆದರೂ, ಕೆಲವೆಡೆ ಗಮನಾರ್ಹ ಪ್ರದರ್ಶನ ತೋರಿದೆ. ಇನ್ನೂ ಕೆಲವೆಡೆ ಪ್ರಬಲ ಪೈಪೋಟಿ ನೀಡಿದೆ. ಪಾಲಕ್ಕಾಡ್ ಮತ್ತು ತ್ರಿಪುಣಿತ್ತುರದಲ್ಲಿ ಎನ್‌ಡಿಎ ಗೆದ್ದಿದೆ. ತೊಡುಪುಝ ಮತ್ತು ಕಾಂಞಂಗಾಡ್‌ನಲ್ಲಿ ಪ್ರಬಲ ಪೈಪೋಟಿ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...