Homeಮುಖಪುಟಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : 'ಪ್ರಜಾಪ್ರಭುತ್ವದ ಸೌಂದರ್ಯ' ಎಂದ ಕಾಂಗ್ರೆಸ್ ಸಂಸದ ಶಶಿ...

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

- Advertisement -
- Advertisement -

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಆಡಳಿತ ಕೊನೆಗೊಂಡಿದೆ.

ಕೇರಳ ರಾಜಧಾನಿಯಾದ ತಿರುವನಂತಪುರಂ ಮಹಾನಗರ ಪಾಲಿಕೆಯ 101 ಸ್ಥಾನಗಳ ಪೈಕಿ ಎನ್‌ಡಿಎ 50 ಸ್ಥಾನಗಳನ್ನು ಗೆದಿದ್ದೆ. ಮೊದಲ ಬಾರಿಗೆ ಇಷ್ಟು ದೊಡ್ಡ ಜನಾದೇಶವನ್ನು ಪಡೆದುಕೊಂಡಿದೆ.

ತಿರುವನಂತಪುರಂ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್‌ ಅವರು ಪ್ರತಿನಿಧಿಸುವ ಕ್ಷೇತ್ರವಾಗಿದೆ.

ರಾಜ್ಯದಾದ್ಯಂತ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯತ್‌, ಪುರಸಭೆ ಮತ್ತು ಮಹಾನಗರ ಪಾಲಿಕೆಗಳಲ್ಲಿ ಒಟ್ಟಾರೆಯಾಗಿ ಕಾಂಗ್ರೆಸ್‌-ಮುಸ್ಲಿಂ ಲೀಗ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಹೆಚ್ಚಿನ ಸ್ಥಾನಗಳನ್ನು ಪಡೆದುಕೊಂಡಿದೆ.

ಶಶಿ ತರೂರ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತನ್ನ ಪಕ್ಷವಾದ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ತನ್ನ ತವರು ಕ್ಷೇತ್ರದಲ್ಲಿ ಗೆದ್ದ ಎನ್‌ಡಿಎಗೂ ಅಭಿನಂದನೆ ತಿಳಿಸಿದ್ದಾರೆ. ತಿರುವನಂತಪುರಂನಲ್ಲಿ ಎನ್‌ಡಿಎ ಗೆಲುವು “ಪ್ರಜಾಪಪ್ರಭುತ್ವದ ಸೌಂದರ್ಯ” ಎಂದಿದ್ದಾರೆ.

“45 ವರ್ಷಗಳ ಎಲ್‌ಡಿಎಫ್ ದುರಾಡಳಿತದ ಬದಲಾವಣೆಗಾಗಿ ನಾನು ಪ್ರಚಾರ ಮಾಡಿದ್ದೆ. ಆದರೆ, ಮತದಾರರು ಅಂತಿಮವಾಗಿ ಆಡಳಿತದಲ್ಲಿ ಸ್ಪಷ್ಟ ಬದಲಾವಣೆಯನ್ನು ಬಯಸಿದ ಮತ್ತೊಂದು ಪಕ್ಷಕ್ಕೆ ಪ್ರತಿಫಲ ನೀಡಿದ್ದಾರೆ. ಇದು ಪ್ರಜಾಪ್ರಭುತ್ವದ ಸೌಂದರ್ಯ. ಒಟ್ಟಾರೆಯಾಗಿ ಯುಡಿಎಫ್ ಆಗಿರಲಿ ಅಥವಾ ನನ್ನ ಕ್ಷೇತ್ರದಲ್ಲಿ ಬಿಜೆಪಿಯಾಗಿರಲಿ, ಜನರ ತೀರ್ಪನ್ನು ಗೌರವಿಸಬೇಕು” ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ನಾವು ಕೇರಳದ ಅಭಿವೃದ್ದಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ಜನರ ಅಗತ್ಯಗಳನ್ನು ಪೂರೈಸುತ್ತೇವೆ ಮತ್ತು ಉತ್ತಮ ಆಡಳಿತದ ತತ್ವಗಳನ್ನು ಎತ್ತಿಹಿಡಿಯುತ್ತೇವೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...