Homeಮುಖಪುಟಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

- Advertisement -
- Advertisement -

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) ‘ಅನುಕರಣೀಯ’ ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ ನೀಡಬೇಕು ಎಂದು ಸಂಸದೀಯ ಸಮಿತಿ ಹೇಳಿದೆ.

ಈ ವಾರದ ಆರಂಭದಲ್ಲಿ ಕಾಂಗ್ರೆಸ್ ಸಂಸದ ದಿಗ್ವಿಜಯ ಸಿಂಗ್ ನೇತೃತ್ವದ ಸಮಿತಿಯು ಸಂಸತ್ತಿನಲ್ಲಿ ಮಂಡಿಸಿರುವ ವರದಿಯಲ್ಲಿ ಹೆಚ್‌ಐಎಎಲ್‌ಗೆ ಯುಜಿಸಿಯಿಂದ ಇನ್ನೂ ಮಾನ್ಯತೆ ನೀಡದಿರುವ ಬಗ್ಗೆ ತನ್ನ ಕಳವಳ ವ್ಯಕ್ತಪಡಿಸಿದೆ.

ಕೇಂದ್ರ ಶಿಕ್ಷಣ ಸಚಿವಾಲಯ ಹೆಚ್‌ಐಎಎಲ್‌ ಮಾದರಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಬೇಕು ಮತ್ತು ಶಿಕ್ಷಣದಲ್ಲಿ ನಾವೀನ್ಯತೆ ಕೇಂದ್ರಗಳು ಅಥವಾ ಇತರ ರೀತಿಯಲ್ಲಿ ಅದನ್ನು ಬೇರೆಡೆ ಹೇಗೆ ಪ್ರಯೋಗಿಸಬಹುದು ಎಂಬುದನ್ನು ಪರಿಗಣಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ವಾಂಗ್ಚುಕ್ ಅವರ ಸಂಸ್ಥೆಯ ಕುರಿತು ಅಧ್ಯಯನಕ್ಕೆ ಲಡಾಖ್‌ಗೆ ಭೇಟಿ ನೀಡಿದ ಸಮಿತಿ, ಹೆಚ್‌ಐಎಎಲ್‌ ನಡೆಸುತ್ತಿರುವ ಶೈಕ್ಷಣಿಕ, ಸಂಶೋಧನೆ ಮತ್ತು ಉದ್ಯಮಶೀಲತೆಯ ವ್ಯವಸ್ಥೆಗಳಿಂದ ಬಹಳ ಪ್ರಭಾವಿತಗೊಂಡಿದೆ. ವಿಶೇಷವಾಗಿ, ಸ್ಥಳೀಯ ಸಾಮಾಜಿಕ-ಸಾಂಸ್ಕೃತಿಕ ಮತ್ತು ಪರಿಸರ ವ್ಯವಸ್ಥೆಗಳಲ್ಲಿ ಬೇರೂರಿದ ಅನುಭವಾಧಾರಿತ ಶಿಕ್ಷಣ ಮತ್ತು ಕಲಿಕೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿರುವುದು ಸಮಿತಿಯನ್ನು ಆಕರ್ಷಿಸಿದೆ ಎಂದು ಶಿಕ್ಷಣ, ಮಹಿಳೆಯರು, ಮಕ್ಕಳು, ಯುವಕರು ಮತ್ತು ಕ್ರೀಡೆಗಳ ಸ್ಥಾಯಿ ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ.

ಯುಜಿಸಿ ಇನ್ನೂ ಹೆಚ್‌ಐಎಎಲ್‌ಗೆ ಮಾನ್ಯತೆ ನೀಡಿಲ್ಲ. ಈ ವಿಷಯ ಹಲವು ವರ್ಷಗಳಿಂದ ಬಾಕಿ ಇದೆ ಎಂದು ತಿಳಿದು ಸಮಿತಿ ಕಳವಳ ವ್ಯಕ್ತಪಡಿಸಿದೆ. ಹೆಚ್‌ಐಎಎಲ್ ಸ್ಥಳೀಯ ಸಮುದಾಯದ ಮೇಲೆ ಅಗಾಧ ಪರಿಣಾಮ ಬೀರಿದೆ ಮತ್ತು ಅದರ ಐಸ್ ಸ್ತೂಪಗಳು ಮತ್ತು ಇತರ ಸಮುದಾಯ ತೊಡಗಿಸಿಕೊಳ್ಳುವಿಕೆ ಚಟುವಟಿಕೆಗಳ ಮೂಲಕ ಅಂತಾರಾಷ್ಟ್ರೀಯ ಖ್ಯಾತಿಯನ್ನು ಗಳಿಸಿದೆ ಎಂದು ವರದಿ ಹೇಳಿದೆ.

ಅನುಭವದ ಮತ್ತು ಯೋಜನೆ ಆಧಾರಿತ ಕಲಿಕೆ, ಸಮುದಾಯದ ತೊಡಗಿಸಿಕೊಳ್ಳುವಿಕೆ ಮತ್ತು ಭಾರತೀಯ ಜ್ಞಾನ ವ್ಯವಸ್ಥೆಗಳ ಏಕೀಕರಣಕ್ಕೆ ಕರೆ ನೀಡುವ ಎನ್‌ಇಪಿ 2020ರ ಅನುಷ್ಠಾನದಲ್ಲಿ ಹೆಚ್‌ಐಎಎಲ್‌ ಅನುಕರಣೀಯವಾಗಿದೆ ಎಂದು ವರದಿ ತಿಳಿಸಿದೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಆರನೇ ಪರಿಚ್ಚೇದದ ಅಡಿ ಸೇರಿಸಬೇಕು ಎಂದು ಒತ್ತಾಯಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ನಾಲ್ವರು ಸಾವನ್ನಪ್ಪಿ 90 ಜನರು ಗಾಯಗೊಂಡ ಎರಡು ದಿನಗಳ ನಂತರ, ಅಂದರೆ ಸೆಪ್ಟೆಂಬರ್ 26 ರಂದು ವಾಂಗ್ಚುಕ್ ಅವರನ್ನು ಕಠಿಣ ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿದೆ. ಸರ್ಕಾರ ವಾಂಗ್ಚುಕ್ ವಿರುದ್ದ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪ ಹೊರಿಸಿದೆ.

ಲಡಾಖ್ ಆಡಳಿತವು ಹೆಚ್ಐಎಎಲ್‌ಗೆ ಭೂ ಹಂಚಿಕೆಯನ್ನು ರದ್ದುಗೊಳಿಸಿದೆ. ಕೇಂದ್ರ ಗೃಹ ಸಚಿವಾಲಯವು ಕಾನೂನು ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಂಸ್ಥೆಯ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ) ನೋಂದಣಿಯನ್ನು ರದ್ದುಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...