Homeಮುಖಪುಟದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

- Advertisement -
- Advertisement -

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಆಯೋಜಿಸಿರುವ ‘ಮತಗಳ್ಳತನದ ವಿರುದ್ದದ’ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದ ವೇಳೆ ಅವರು ಮಾತನಾಡಿದರು.

ಬಿಜೆಪಿಯವರು ದೆಹಲಿಗೆ ಬರುವ ನಮ್ಮ ವಾಹನಗಳನ್ನು ತಡೆಯುತ್ತಿದ್ದಾರೆ. ದೆಹಲಿ ಪ್ರವೇಶಿಸಲು ಬಿಡುತ್ತಿಲ್ಲ ಎಂಬ ಮಾಹಿತಿ ಬಂದಿದೆ. ಅವರಿಗೆ ನಮ್ಮ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ. ನಾವು ದೇಶದ ಪರವಾಗಿ, ಜನರ ಪರವಾಗಿ, 140 ಕೋಟಿ ಜನರ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ ಎಂದರು.

ನಾವು ಒಂದೂವರೆ ಸಾವಿರ ಜನರಿಗೆ ವಾಸ್ತವ್ಯ ವ್ಯವಸ್ಥೆ ಮಾಡಿದ್ದೇವೆ. ಸುಮಾರೂ ಎರಡೂವರೆ ಸಾವಿರ ಜನರು ಅವರಾಗಿಯೇ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ರೈಲು, ವಿಮಾನಗಳ ಮೂಲಕ ದೆಹಲಿಗೆ ಆಗಮಿಸಿದ್ದಾರೆ. ಒಟ್ಟು 3 ರಿಂದ 4 ಸಾವಿರ ಜನರು ಕರ್ನಾಟಕದಿಂದ ಭಾಗಿಯಾಗುತ್ತಿದ್ದಾರೆ. ಮತಗಳ್ಳತನದ ವಿರುದ್ದ 1 ಕೋಟಿ 42 ಲಕ್ಷ ಜನರು ಸಹಿ ಹಾಕಿದ್ದಾರೆ. ನಮ್ಮ ಉತ್ಸಾಹಕ್ಕೆ ಇಲ್ಲಿ ಸೇರಿರುವ ಪಕ್ಷದ ನಾಯಕರು ಮತ್ತು ಕಾರ್ಯಕರ್ತರೇ ಸಾಕ್ಷಿ ಎಂದು ಡಿಕೆಶಿ ಹೇಳಿದರು.

ಕಾಂಗ್ರೆಸ್ ಸೋಲಿನ ಹತಾಶೆಯಲ್ಲಿ ಮತಗಳ್ಳತನ ಆರೋಪ ಮಾಡುತ್ತಿದ್ದ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಅವರ ಖುಷಿಗೆ ಏನು ಬೇಕಾದರೂ ಮಾತನಾಡಲಿ, ಕಾಂಗ್ರೆಸ್‌ ಸೋಲಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ, ಸಂವಿಧಾನ, ಪ್ರಜಾಪ್ರಭುತ್ವ ತಂದು ಕೊಡುವಾಗ ನಮ್ಮ ಅನೇಕ ನಾಯಕರು ಪ್ರಾಣತ್ಯಾಗ ಮಾಡಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ದೇಶಕ್ಕೋಸ್ಕರ ಪ್ರಾಣ ಕೊಟ್ಟಿದ್ದಾರೆ. ನೆಹರು, ಗಾಂಧಿ ಜೈಲಲ್ಲಿದ್ದರು ಎಂದರು.

ಸಿಎಂ ಸಿದ್ದರಾಮಯ್ಯ ಕೂಡ ಬರುತ್ತಿದ್ದಾರೆ. ನಾನು ಮತ್ತು ಅವರು ಒಟ್ಟಿಗೆ ಸಮಾವೇಶಕ್ಕೆ ಹೋಗುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...