“ಬಿಜೆಪಿಯವರು ‘ಗದ್ದಾರ್‌ಗಳು’ (ದೇಶದ್ರೋಹಿಗಳು) ಮತ್ತು ‘ಡ್ರಮೆಬಾಜ್’ (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.
ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ ಬೃಹತ್ ರ್ಯಾಲಿಯಲ್ಲಿ ‘ವೋಟ್ ಚೋರ್ ಗದ್ದಿ ಛೋಡ್’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು,”ಮತ ಚೋರಿ”ಯಲ್ಲಿ ತೊಡಗಿರುವವರು “ಗದ್ದಾರ್‌ಗಳು” ಮತ್ತು ಮತದಾನದ ಹಕ್ಕು ಮತ್ತು ಸಂವಿಧಾನವನ್ನು ಉಳಿಸಲು ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು ಎಂದು ಹೇಳಿದ್ದಾರೆ.
ಡಿಸೆಂಬರ್ 14, 2025ರಂದು ರಾಮಲೀಲಾ ಮೈದಾನದಲ್ಲಿ ನಡೆದ ಪಕ್ಷದ ‘ವೋಟ್ ಚೋರ್ ಗದ್ದಿ ಛೋಡ್’ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಕಾಂಗ್ರೆಸ್ ಸಿದ್ಧಾಂತವನ್ನು ಒಗ್ಗಟ್ಟಿನಿಂದ ಬಲಪಡಿಸುವುದು ಎಲ್ಲಾ ಭಾರತೀಯರ ಕರ್ತವ್ಯವಾಗಿದೆ, ಏಕೆಂದರೆ ಈ ಪಕ್ಷ ಮಾತ್ರ ದೇಶವನ್ನು ಉಳಿಸಬಲ್ಲದು ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್ ಸಿದ್ಧಾಂತವು “ರಾಷ್ಟ್ರವನ್ನು ಮುಗಿಸುತ್ತದೆ” ಎಂದು ಅವರು ಆರೋಪಿಸಿದ್ದಾರೆ.


