Homeಮುಖಪುಟಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ನಿರ್ದೇಶಿಸಿದೆ.

ಸುದೀರ್ಘ ವಿಮಾನ ರದ್ದತಿಯಿಂದ ಉಂಟಾದ ಬಿಕ್ಕಟ್ಟನ್ನು ಪರಿಹರಿಸಲು ತ್ವರಿತವಾಗಿ ಕಾರ್ಯನಿರ್ವಹಿಸದ ಕಾರಣ ದೆಹಲಿ ಹೈಕೋರ್ಟ್ ಡಿಸೆಂಬರ್ 10 ರಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಇದರಿಂದಾಗಿ ಲಕ್ಷಾಂತರ ಪ್ರಯಾಣಿಕರು ಸಿಲುಕಿಕೊಂಡರು, ಇತರ ವಿಮಾನಯಾನ ಸಂಸ್ಥೆಗಳು ಅತಿಯಾದ ದರವನ್ನು ವಿಧಿಸಬೇಕಾಯಿತು. ಸಮಸ್ಯೆ ಎದುರಿಸಿದ ಪ್ರಯಾಣಿಕರಿಗೆ ಬೆಂಬಲ ಮತ್ತು ಮರುಪಾವತಿಯನ್ನು ಒದಗಿಸಲು ಕೇಂದ್ರಕ್ಕೆ ನಿರ್ದೇಶನಗಳನ್ನು ನೀಡುವಂತೆ ಪಿಐಎಲ್ ಕೋರಿತು.

ಸೋಮವಾರ, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಾಮಚೋಲಿ ಅವರನ್ನೊಳಗೊಂಡ ಪೀಠವು ಅರ್ಜಿದಾರ ನರೇಂದ್ರ ಮಿಶ್ರಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸಬೇಕು ಎಂಬ ಅರ್ಜಿಯನ್ನು ಗಮನಿಸಿತು. ಆದರೆ, ಹೈಕೋರ್ಟ್ ಈಗಾಗಲೇ ಇದೇ ರೀತಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸ್ವೀಕರಿಸಿದೆ ಎಂದು ಪೀಠವು ಗಮನಿಸಿತು. ಮಿಶ್ರಾ ಅವರನ್ನು ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಲು ಹೆಳಿದ್ದು, ಅಲ್ಲಿ ದೂರು ಪರಿಹರಿಸದಿದ್ದರೆ ಉನ್ನತ ನ್ಯಾಯಾಲಯಕ್ಕೆ ಮರಳಲು ನಿಮಗೆ ಸ್ವಾತಂತ್ರ್ಯ ಇದೆ ಎಂದು ಸೂಚಿಸಿದೆ.

ಇಂಡಿಗೋ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟ್ಗಿ, ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಡಿಸೆಂಬರ್ 5 ರಂದು ರದ್ದತಿ, ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸಿದೆ ಎಂದು ಪೀಠಕ್ಕೆ ತಿಳಿಸಿದರು.

“ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಬಾಕಿ ಇದೆ ಎಂದು ಪೀಠವು ತಿಳಿಸಿದೆ. ಅರ್ಜಿದಾರರಿಗೆ ದೆಹಲಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಹಾಜರಾಗಲು ಅವಕಾಶವಿದೆ. ಕುಂದುಕೊರತೆಗಳನ್ನು ಪರಿಹರಿಸದಿದ್ದರೆ, ಅವರು ಅಥವಾ ಯಾವುದೇ ಇತರ ಸಾರ್ವಜನಿಕ ಮನೋಭಾವದ ವ್ಯಕ್ತಿ ಈ ನ್ಯಾಯಾಲಯವನ್ನು ಸಂಪರ್ಕಿಸುವುದನ್ನು ಯಾರಿಂದಲೂ ತಡೆಯುವುದಕ್ಕೆ ಸಾಧ್ಯವಿಲ್ಲ” ಎಂದು ಹೇಳಿದೆ.

ಪದೇ ಪದೇ ವಿಮಾನ ರದ್ದತಿಯಿಂದಾಗಿ ಪ್ರಯಾಣಿಕರು ಎದುರಿಸುತ್ತಿರುವ ತೊಂದರೆಗಳ ಕುರಿತು ಮಿಶ್ರಾ ಮಾತನಾಡಿದರು. “ಇದು ಸಾರ್ವಜನಿಕರಿಗೆ ಗಂಭೀರ ಕಳವಳವಾಗಿದೆ… ಈಗಾಗಲೇ ಹೈಕೋರ್ಟ್ ಇದನ್ನು ಪರಿಶೀಲಿಸುತ್ತಿದೆ. ಇದು ಸಾಂವಿಧಾನಿಕ ನ್ಯಾಯಾಲಯವೂ ಆಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಟೀಕಿಸಿದರು.

ಇದಕ್ಕೂ ಮೊದಲು, ಅರ್ಜಿಯ ತುರ್ತು ವಿಚಾರಣೆಗೆ ಪೀಠ ನಿರಾಕರಿಸಿತು. ಕೇಂದ್ರವು ಪರಿಸ್ಥಿತಿಯನ್ನು ಅರಿತುಕೊಂಡು ಅದನ್ನು ಪರಿಹರಿಸಲು ಕ್ರಮಗಳನ್ನು ಪ್ರಾರಂಭಿಸಿದೆ ಎಂಬುದನ್ನು ಗಮನಿಸಿತು.

ಪೈಲಟ್‌ಗಳ ಹಾರಾಟದ ಕರ್ತವ್ಯ ಮತ್ತು ನಿಯಮಾವಳಿಗಳಲ್ಲಿನ ನಿಯಂತ್ರಕ ಬದಲಾವಣೆಗಳನ್ನು ಉಲ್ಲೇಖಿಸಿ, ನೂರಾರು ವಿಮಾನಗಳನ್ನು ರದ್ದುಗೊಳಿಸಿದ್ದಕ್ಕಾಗಿ ಇಂಡಿಗೋ ಸಂಸ್ತೆಯು ಸರ್ಕಾರ ಮತ್ತು ಪ್ರಯಾಣಿಕರಿಂದ ಟೀಕೆಗಳನ್ನು ಎದುರಿಸಿದೆ. ಈ ಅಡೆತಡೆಗಳಿಂದಾಗಿ ಭಾರತದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಲಕ್ಷಾಂತರ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...