Homeಮುಖಪುಟಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

- Advertisement -
- Advertisement -

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಕೊನೆಗೊಳಿಸಿದೆ.

56 ಸದಸ್ಯರ ಕೌನ್ಸಿಲ್‌ನಲ್ಲಿ ಯುಡಿಎಫ್ 27 ಸ್ಥಾನಗಳನ್ನು ಗೆದ್ದು, ಕಾರ್ಪೊರೇಷನ್ ಮೇಲೆ ಹಿಡಿತ ಸಾಧಿಸಿತು. ಈ ಮೂಲಕ ಕೇರಳದಲ್ಲಿ ಪ್ರಮುಖ ರಾಜಕೀಯ ಪುನರಾಗಮನವನ್ನು ಗುರುತಿಸಿದೆ. ಎಲ್‌ಡಿಎಫ್ ಇಲ್ಲಿ ಬಲವಾದ ಬಹುಮತವನ್ನು ಹೊಂದಿದ್ದ 2020 ರ ಚುನಾವಣೆಗಳಿಗಿಂತ ಸಾಕಷ್ಟು ಹಿಮ್ಮುಖ ಫಲಿತಾಂಶವಾಗಿದೆ. ಈ ಫಲಿತಾಂಶವು ನಗರ ಮತದಾರರ ಮನಸ್ಥಿತಿಯಲ್ಲಿ ಸ್ಪಷ್ಟ ಬದಲಾವಣೆಯನ್ನು ಸೂಚಿಸುತ್ತದೆ ಎನ್ನಲಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಯುಡಿಎಫ್‌ಗೆ ದೊಡ್ಡ ರಾಜಕೀಯ ಉತ್ತೇಜನ ನೀಡುತ್ತದೆ.

ಈ ಫಲಿತಾಂಶವು ಕೊಲ್ಲಂನ ರಾಜಕೀಯ ಭೂದೃಶ್ಯದಲ್ಲಿ ಪ್ರಮುಖ ಬದಲಾವಣೆಯನ್ನು ತೋರಿಸುತ್ತದೆ. ಯುಡಿಎಫ್ ಅತಿದೊಡ್ಡ ಲಾಭ ಗಳಿಸಿದ ಪಕ್ಷವಾಗಿ ಹೊರಹೊಮ್ಮಿದರೂ, ಎಲ್‌ಡಿಎಫ್ ಭಾರೀ ಹಿನ್ನಡೆಯನ್ನು ಅನುಭವಿಸಿತು. ಕೆಲವೆಡೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಸಹ ಬಲವಾದ ನೆಲೆ ಗಳಿಸಿತು. 2020 ರಲ್ಲಿ 39 ಸ್ಥಾನಗಳನ್ನು ಹೊಂದಿದ್ದ ಎಲ್‌ಡಿಎಫ್‌ನ ಸ್ಥಾನಗಳ ಸಂಖ್ಯೆ 2025 ರಲ್ಲಿ ಕೇವಲ 16 ಕ್ಕೆ ಕುಸಿದಿದೆ. ಇದಕ್ಕೆ ವ್ಯತಿರಿಕ್ತವಾಗಿ, ಯುಡಿಎಫ್ ಕೇವಲ 9 ಸ್ಥಾನಗಳಿಂದ 27 ಕ್ಕೆ ಜಿಗಿದಿದೆ. ಎನ್‌ಡಿಎ ತನ್ನ ಅಸ್ತಿತ್ವವನ್ನು ದ್ವಿಗುಣಗೊಳಿಸಿದೆ, 12 ಸ್ಥಾನಗಳನ್ನು ಗೆದ್ದಿದೆ.

ವಡಕ್ಕುಂಭಾಗಂನಿಂದ ಮಾಜಿ ಮೇಯರ್‌ಗಳಾದ ಸಿಪಿಐ ನಾಯಕ ಹನಿ ಬೆಂಜಮಿನ್ ಮತ್ತು ಉಲಿಯಕೋವಿಲ್‌ನಿಂದ ಸಿಪಿಐ(ಎಂ) ನಾಯಕ ವಿ ರಾಜೇಂದ್ರಬಾಬು ಅವರ ಸೋಲು ಕಾರ್ಪೊರೇಷನ್‌ನಲ್ಲಿ ಬಲವಾದ ಆಡಳಿತ ವಿರೋಧಿ ಅಲೆಯನ್ನು ಎತ್ತಿ ತೋರಿಸಿದೆ. ಫಲಿತಾಂಶಗಳು ಎಲ್‌ಡಿಎಫ್ ಆಡಳಿತದ ಬಗ್ಗೆ, ವಿಶೇಷವಾಗಿ ನಾಗರಿಕ ಸಮಸ್ಯೆಗಳ ಬಗ್ಗೆ ವ್ಯಾಪಕ ಅಸಮಾಧಾನವನ್ನು ಸೂಚಿಸುತ್ತವೆ.

ಕೊಲ್ಲಂ ಕಾರ್ಪೊರೇಷನ್ ರಾಜಕೀಯದಲ್ಲಿ ಎನ್‌ಡಿಎ ಒಂದು ಮಹತ್ವದ ಶಕ್ತಿಯಾಗಿದೆ ಎಂದು ಚುನಾವಣೆಗಳು ದೃಢಪಡಿಸಿದವು. 12 ಸ್ಥಾನಗಳೊಂದಿಗೆ, ಎನ್‌ಡಿಎ ಎಲ್‌ಡಿಎಫ್‌ಗಿಂತ ಕೇವಲ ನಾಲ್ಕು ಸ್ಥಾನಗಳನ್ನು ಕಡಿಮೆ ಪಡೆದುಕೊಂಡಿತು. ಇದು ಸ್ಪಷ್ಟವಾದ ತ್ರಕೋನ ರಾಜಕೀಯ ಸ್ಪರ್ಧೆಯನ್ನು ಸೃಷ್ಟಿಸಿತು. ಎಣಿಕೆಯ ಆರಂಭಿಕ ಗಂಟೆಗಳಲ್ಲಿ, ಎನ್‌ಡಿಎ ಒಟ್ಟಾರೆಯಾಗಿ ಎರಡನೇ ಸ್ಥಾನದಲ್ಲಿತ್ತು, ಅದರ ಏರಿಕೆ ಮತ್ತು ಎಲ್‌ಡಿಎಫ್‌ನ ಕುಸಿತ ಎರಡನ್ನೂ ಒತ್ತಿಹೇಳಿತು.

ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ ಪ್ರಾಬಲ್ಯ

ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವು 101 ವಾರ್ಡ್‌ಗಳಲ್ಲಿ 50 ಅನ್ನು ಗೆದ್ದು 45 ವರ್ಷಗಳ ಎಡ ನಿಯಂತ್ರಣವನ್ನು ಕೊನೆಗೊಳಿಸಿತು. ಎಲ್‌ಡಿಎಫ್ 29 ವಾರ್ಡ್‌ಗಳನ್ನು ಗೆದ್ದುಕೊಂಡಿತು, ಯುಡಿಎಫ್ 19 ವಾರ್ಡ್‌ಗಳನ್ನು ಗೆದ್ದಿತು. ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಜಯಶೀಲರಾಗಿದ್ದಾರೆ. ಎನ್‌ಡಿಎ ಪಾಲಕ್ಕಾಡ್ ಪುರಸಭೆಯನ್ನು ಉಳಿಸಿಕೊಂಡಿತು, ಕಾಂಗ್ರೆಸ್‌ನಿಂದ ತ್ರಿಪ್ಪುನಿತುರವನ್ನು ಗೆದ್ದಿತು. ತ್ರಿಶೂರ್ ಜಿಲ್ಲೆಯ ಹಲವಾರು ಪುರಸಭೆಗಳಲ್ಲಿ ಗಮನಾರ್ಹ ಲಾಭ ಗಳಿಸಿತು.

ರಾಜ್ಯ ಚುನಾವಣಾ ಆಯೋಗದ ಪ್ರಕಾರ, ಎನ್‌ಡಿಎ ಕೇರಳದಾದ್ಯಂತ 1,402 ಗ್ರಾಮ ಪಂಚಾಯತ್ ವಾರ್ಡ್‌ಗಳನ್ನು ಮತ್ತು 53 ಬ್ಲಾಕ್ ಪಂಚಾಯತ್ ವಾರ್ಡ್‌ಗಳನ್ನು ಗೆದ್ದಿದೆ. ಅದರ ಗೆಲುವುಗಳು ಕೊಲ್ಲಂ ಕಾರ್ಪೊರೇಷನ್‌ನಲ್ಲಿ 11 ವಾರ್ಡ್‌ಗಳು, ಕೋಝಿಕ್ಕೋಡ್ ಕಾರ್ಪೊರೇಷನ್‌ನಲ್ಲಿ 13, ಕಣ್ಣೂರು ಕಾರ್ಪೊರೇಷನ್‌ನಲ್ಲಿ ನಾಲ್ಕು ಮತ್ತು ಕೊಚ್ಚಿ ಕಾರ್ಪೊರೇಷನ್‌ನಲ್ಲಿ ಆರು ವಾರ್ಡ್‌ಗಳನ್ನು ಒಳಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...