Homeದಲಿತ್ ಫೈಲ್ಸ್ಕೇರಳ| ನಿರ್ಗಮಿತ ದಲಿತ ಪಂಚಾಯತ್ ಅಧ್ಯಕ್ಷರ ವಿರುದ್ಧ 'ಶುದ್ಧೀಕರಣ ಆಚರಣೆ'; ವರದಿ ಕೇಳಿದ ಎಸ್‌ಸಿ/ಎಸ್‌ಟಿ ಆಯೋಗ

ಕೇರಳ| ನಿರ್ಗಮಿತ ದಲಿತ ಪಂಚಾಯತ್ ಅಧ್ಯಕ್ಷರ ವಿರುದ್ಧ ‘ಶುದ್ಧೀಕರಣ ಆಚರಣೆ’; ವರದಿ ಕೇಳಿದ ಎಸ್‌ಸಿ/ಎಸ್‌ಟಿ ಆಯೋಗ

- Advertisement -
- Advertisement -

ಕೋಝಿಕ್ಕೋಡ್‌ನ ಪೆರಂಬ್ರಾದ ಚಂಗರೋತ್ ಪಂಚಾಯತ್ ಕಚೇರಿಯ ಮುಂದೆ ದಲಿತ ಸಮುದಾಯಕ್ಕೆ ಸೇರಿದ ನಿರ್ಗಮಿತ ಅಧ್ಯಕ್ಷ ಉನ್ನಿ ವೆಂಗೇರಿ ಅವರನ್ನು ಅವಮಾನಿಸಲು “ಶುದ್ಧೀಕರಣ ಆಚರಣೆ” ನಡೆಸಲಾಗಿದೆ ಎಂಬ ಆರೋಪದ ಮೇಲೆ ಕೇರಳ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗವು 10 ದಿನಗಳಲ್ಲಿ ವರದಿ ನೀಡುವಂತೆ ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದೆ.

ಪಂಚಾಯತ್ ಕಚೇರಿಯ ಹೊರಗೆ ಸಗಣಿ ನೀರು ಸಿಂಪಡಿಸಿ, ಅವಮಾನಕರ ರೀತಿಯಲ್ಲಿ ಆಚರಣೆ ನಡೆಸಲಾಗಿದೆ ಎಂಬ ಮಾಧ್ಯಮ ವರದಿಗಳ ಆಧಾರದ ಮೇಲೆ ಆಯೋಗವು ಕ್ರಮ ಕೈಗೊಂಡಿದೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ ಎಂದು ಆಯೋಗದ ಅಧ್ಯಕ್ಷರು ತಿಳಿಸಿದ್ದಾರೆ.

ಸೋಮವಾರ ನಡೆದ ವಿಜಯೋತ್ಸವದ ಸಂದರ್ಭದಲ್ಲಿ, ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಕಾರ್ಯಕರ್ತರ ಗುಂಪು ಪಂಚಾಯತ್ ಕಚೇರಿಯ ಹೊರಗೆ ನೀರು ಸಿಂಪಡಿಸಿ ಆವರಣವನ್ನು ಗುಡಿಸಿ ಸ್ವಚ್ಛಗೊಳಿಸಿದೆ ಎಂದು ಪೆರಂಬ್ರಾ ಪೊಲೀಸರುತಿಳಿಸಿದ್ದಾರೆ ಎಂದು ‘ಆನ್‌ಮನೋರಮಾ’ ವರದಿ ಮಾಡಿದೆ. “ಘಟನೆಯ ಬಗ್ಗೆ ಇನ್ನೂ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲವಾದ್ದರಿಂದ ನಾವು ಪ್ರಕರಣ ದಾಖಲಿಸಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ, ಈ ಕೃತ್ಯದ ಹಿಂದೆ ಐಯುಎಂಎಲ್ ಕಾರ್ಯಕರ್ತರು ಇದ್ದಾರೆ ಎಂದು ವೆಂಗೇರಿ ಆರೋಪಿಸಿದ್ದಾರೆ. ಎಲ್‌ಡಿಎಫ್‌ ವಿರುದ್ಧ ಯುಡಿಎಫ್ ಗೆದ್ದ ಇತರ ಮೂರು ಪಂಚಾಯತ್‌ಗಳಲ್ಲಿ ಈ ರೀತಿಯ ಯಾವುದೇ ಆಚರಣೆಗಳು ನಡೆದಿಲ್ಲ ಎಂದು ಅವರು ಹೇಳಿದರು. ಅವರು ದಲಿತ ಪಂಚಾಯತ್ ಅಧ್ಯಕ್ಷರಾಗಿದ್ದ ಕಾರಣ ಚಂಗರೋತ್‌ನಲ್ಲಿ ನಡೆದ ಘಟನೆ ಎದ್ದು ಕಾಣುತ್ತದೆ ಎಂದು ಹೇಳಿದರು.

ಆದರೆ, ಐಯುಎಂಎಲ್ ನಾಯಕರು ಆರೋಪಗಳನ್ನು ನಿರಾಕರಿಸಿದರು. ಪಂಚಾಯತ್ ಭ್ರಷ್ಟಾಚಾರವನ್ನು ತೊಡೆದುಹಾಕುತ್ತಿದೆ ಎಂದು ಸಾಂಕೇತಿಕವಾಗಿ ತಿಳಿಸಲು ಯುವಕರು ನೀರು ಮತ್ತು ಪೊರಕೆಯನ್ನು ಬಳಸಿ ಪ್ರದೇಶವನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಹೇಳಿದರು.

ಈ ಘಟನೆಯು ಜಿಲ್ಲೆಯಲ್ಲಿ ರಾಜಕೀಯ ಪ್ರತಿಭಟನೆಗಳನ್ನು ಹುಟ್ಟುಹಾಕಿದೆ. ಸಿಪಿಎಂನ ಯುವ ವಿಭಾಗವಾದ ಡಿವೈಎಫ್‌ಐ ಮಂಗಳವಾರ ಚಂಗರೋತ್ ಪಂಚಾಯತ್ ಕಚೇರಿಗೆ ಮೆರವಣಿಗೆ ನಡೆಸಿ, ಆಪಾದಿತ ಕೃತ್ಯವನ್ನು ಖಂಡಿಸಿತು. ಪ್ರತಿಭಟನೆ ಶಾಂತಿಯುತವಾಗಿತ್ತು, ಈ ಪ್ರದೇಶದಲ್ಲಿ ಯಾವುದೇ ಉದ್ವಿಗ್ನತೆ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಎಡ ಪ್ರಜಾಸತ್ತಾತ್ಮಕ ರಂಗವು ಆ ಒಂದು ದಿನದ ನಂತರ ಮತ್ತೊಂದು ಪ್ರತಿಭಟನಾ ಮೆರವಣಿಗೆ ನಡೆಸಲಿದೆ ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇನಾಲಯ (ಇಡಿ) ದಾಖಲಿಸಿದ್ದ ಹಣ ಅಕ್ರಮ ವರ್ಗಾವಣೆ (ಪಿಎಂಎಲ್‌ಎ) ದೂರು ಸ್ವೀಕರಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಸ್ವಾಗತಿಸಿದೆ. ಬಿಜೆಪಿ...

ಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?

ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಇತ್ತೀಚೆಗೆ ತಮ್ಮ ನೇಮಕಾತಿ ಪತ್ರವನ್ನು ಪಡೆದಿದ್ದರೂ ಬಿಹಾರ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಾಟ್ನಾದಲ್ಲಿ ನಡೆದ ಸಕಾfರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ...

ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್...

ಬೆಳ್ತಂಗಡಿ | ಆಭರಣ ಮಳಿಗೆ ವ್ಯವಸ್ಥಾಪಕನಿಂದ ಮೂವರು ವಿದ್ಯಾರ್ಥಿಗಳಿಗೆ ಹಲ್ಲೆ : ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪಟ್ಟಣದಲ್ಲಿ ಸೋಮವಾರ (ಡಿ.16) ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಂ ವಿದ್ಯಾರ್ಥಿಗಳಿಗೆ ಆಭರಣ ಮಳಿಗೆಯ ವ್ಯವಸ್ಥಾಪಕ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ...

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

ಡಿಸೆಂಬರ್ 13ರಂದು ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭೇಟಿ ನೀಡಿದ ಸಂದರ್ಭದಲ್ಲಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ ಉಂಟಾದ ಹಿನ್ನೆಲೆ, ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು ತನ್ನ...

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ‘ನಾವು ಮರೆತಿಲ್ಲ..’; ಎಂದ ಜಾಮಿಯಾ ವಿದ್ಯಾರ್ಥಿಗಳು

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದರು....

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...