Homeಮುಖಪುಟಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ 'ಕರ್ಮಶ್ರೀ' ಯೋಜನೆಗೆ ಮಹಾತ್ಮ ಗಾಂಧಿ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ ‘ಕರ್ಮಶ್ರೀ’ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ.

ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ ನನಗೆ ನಾಚಿಕೆಯಾಗುತ್ತಿದೆ ಎಂದ ಮಮತಾ ಬ್ಯಾನರ್ಜಿ, ರಾಷ್ಟ್ರಪಿತನಿಗೆ ಅವರು ಗೌರವ ಸಲ್ಲಿಸದಿದ್ದರೆ ನಾನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಕೋಲ್ಕತ್ತಾದ ಧೋನೋ ಧನ್ಯೋ ಸಭಾಂಗಣದಲ್ಲಿ ನಡೆದ ವ್ಯಾಪಾರ ಮತ್ತು ಕೈಗಾರಿಕಾ ಸಮಾವೇಶದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)’ಯ ಹೆಸರು ಮತ್ತು ನಿಬಂಧನೆಗಳನ್ನು ಬದಲಿಸುವ ‘ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) 2025 (ವಿಬಿ-ಜಿ ರಾಮ್‌-ಜಿ) ಎಂಬ ಹೊಸ ಮಸೂದೆಗೆ ಗುರುವಾರ (ಡಿಸೆಂಬರ್ 18) ಲೋಕಸಭೆಯ ಅನುಮೋದನೆ ಪಡೆದಿದೆ.

ಈ ಮಸೂದೆ 2005ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದ ನರೇಗಾ ಕಾಯ್ದೆ ಮತ್ತು ಯೋಜನೆಯ ಹೆಸರು, ನಿಬಂಧನೆಗಳನ್ನು ಬದಲಿಸಲಿದೆ. ಮುಖ್ಯವಾಗಿ ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದು ಹಾಕಲಿದೆ.

ನರೇಗಾ ಕಾಯ್ದೆಯ ಹೆಸರು ಬದಲಿಸಿರುವ ಕೇಂದ್ರ ಕೆಲಸದ ದಿನಗಳನ್ನು 100ರಿಂದ 125ಕ್ಕೆ ಹೆಚ್ಚಳ ಮಾಡುವುದಾಗಿ ಹೇಳಿದೆ. ಇದಕ್ಕೆ ಟಕ್ಕರ್ ಕೊಟ್ಟಿರುವ ಮಮತಾ ಬ್ಯಾನರ್ಜಿ ‘ಕರ್ಮಶ್ರೀ’ ಯೋಜನೆಯಡಿ ಪ್ರಸ್ತುತ ಇರುವ ಕೆಲಸದ ದಿನಗಳು 75 ಅನ್ನು100ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.

“ನಾವು ಈಗಾಗಲೇ ‘ಕರ್ಮಶ್ರೀ’ ಅಡಿಯಲ್ಲಿ ಸಾಕಷ್ಟು ಕೆಲಸದ ದಿನಗಳನ್ನು ಸೃಷ್ಟಿಸಿದ್ದೇವೆ. ಅದನ್ನು ನಾವು ನಮ್ಮ ಸ್ವಂತ ಸಂಪನ್ಮೂಲಗಳಿಂದ ನಡೆಸುತ್ತಿದ್ದೇವೆ. ಕೇಂದ್ರ ನಿಧಿಯನ್ನು ನಿಲ್ಲಿಸಿದರೂ, ಜನರಿಗೆ ಕೆಲಸ ಸಿಗುವಂತೆ ನೋಡಿಕೊಳ್ಳುತ್ತೇವೆ. ನಾವು ಭಿಕ್ಷುಕರಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಪಾಲಿಸದ ಕಾರಣ ನೀಡಿ 2005ರ ನರೇಗಾ ಕಾಯ್ದೆಯ ಸೆಕ್ಷನ್ 27 ಅನ್ನು ಅನ್ವಯಿಸಿ ಕೇಂದ್ರ ಸರ್ಕಾರ ಮಾರ್ಚ್ 9, 2022ರಿಂದ ಪಶ್ಚಿಮ ಬಂಗಾಳಕ್ಕೆ ಯೋಜನೆಯ ಹಣ ಬಿಡುಗಡೆ ಮಾಡುವುದನ್ನು ಸ್ಥಗಿತಗೊಳಿಸಿದೆ.

ಅಂದಿನಿಂದ, ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಯಾವುದೇ ಕೆಲಸ ನಡೆದಿಲ್ಲ. ಯೋಜನೆಯನ್ನು ಸ್ಥಗಿತಗೊಳಿಸುವ ಮೊದಲು, 2014-15 ಮತ್ತು 2021-22 ರ ನಡುವೆ ಪಶ್ಚಿಮ ಬಂಗಾಳದ 51 ಲಕ್ಷದಿಂದ 80 ಲಕ್ಷ ಕುಟುಂಬಗಳು ವಾರ್ಷಿಕವಾಗಿ ಅದರ ಲಾಭ ಪಡೆಯುತ್ತಿದ್ದವು.

ಕೇಂದ್ರ ಸರ್ಕಾರ ಹಣ ನೀಡುವುದನ್ನು ನಿಲ್ಲಿಸಿರುವುದರ ವಿರುದ್ದ ಪಶ್ಚಿಮ ಬಂಗಾಳ ಸರ್ಕಾರ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆಗಸ್ಟ್ 1, 2025ರಿಂದ ಪಶ್ಚಿಮ ಬಂಗಾಳದಲ್ಲಿ ಯೋಜನೆಯನ್ನು ಪುನರ್‌ ಅನುಷ್ಠಾನಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಅಕ್ಟೋಬರ್ 27, 2025ರಂದು ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಯಾದ ಕಾರಣ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಪಶ್ಚಿಮ ಬಂಗಾಳದಲ್ಲಿ ವಿಶೇಷ ಷರತ್ತುಗಳೊಂದಿಗೆ ಯೋಜನೆ ಪುನರಾರಂಭಿಸಲು ಮುಂದಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...