HomeಚಳವಳಿNRC ವಿವಾದ: ಛತ್ತೀಸ್‌ಘಡದ ಅರ್ಧ ಜನರ ಬಳಿ ದಾಖಲೆಗಳಿಲ್ಲ, ಮೊದಲು ನಾನೇ ಸಹಿ ಹಾಕುವುದಿಲ್ಲ: ಸಿಎಂ...

NRC ವಿವಾದ: ಛತ್ತೀಸ್‌ಘಡದ ಅರ್ಧ ಜನರ ಬಳಿ ದಾಖಲೆಗಳಿಲ್ಲ, ಮೊದಲು ನಾನೇ ಸಹಿ ಹಾಕುವುದಿಲ್ಲ: ಸಿಎಂ ಭೂಪೇಶ್ ಬಾಗೆಲ್

- Advertisement -
- Advertisement -

ಎನ್‌ಆರ್‌ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಜಾರಿಗೆ ಬಂದರೆ, ರಿಜಿಸ್ಟರ್‌ಗೆ ಸಹಿ ಮಾಡದ ಮೊದಲ ವ್ಯಕ್ತಿ ನಾನಾಗಿರುತ್ತೇನೆ ಎಂದು ಛತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಘೋಷಿಸಿದ್ದಾರೆ.

ಛತ್ತೀಸ್‌ಘಡದ ಅರ್ಧದಷ್ಟು ಜನರ ಪೂರ್ವಜರು ವಿವಿಧ ರಾಜ್ಯಗಳಿಂದ ವಲಸೆ ಬಂದ ಅನಕ್ಷರಸ್ಥರಾಗಿದ್ದರಿಂದ ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಅವರ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಭೂಪೇಶ್ ಬಾಗೆಲ್ ಹೇಳಿದ್ದಾರೆ.

1906 ರಲ್ಲಿ ಆಫ್ರಿಕಾದ ಬ್ರಿಟಿಷರ ಗುರುತಿನ ಯೋಜನೆಯನ್ನು ಮಹಾತ್ಮ ಗಾಂಧಿ ವಿರೋಧಿಸಿದ ರೀತಿ ನಾವು ಎನ್‌ಆರ್‌ಸಿಯನ್ನು ವಿರೋಧಿಸುವುದಾಗಿ ಪುನರುಚ್ಚರಿಸಿದ್ದಾರೆ.

ಛತ್ತೀಸ್‌ಘಡದಲ್ಲಿ 2.80 ಕೋಟಿ ಜನರಿದ್ದಾರೆ. ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಸಾಧ್ಯವಾಗುವುದಿಲ್ಲ. ಅವರಿಗೆ ಭೂ ದಾಖಲೆಗಳೂ ಇಲ್ಲ, ಭೂಮಿಯೂ ಇಲ್ಲ. ಅವರ ಪೂರ್ವಜರು ಅನಕ್ಷರಸ್ಥರಾಗಿದ್ದರು. ಅವರಲ್ಲಿ ಹೆಚ್ಚಿನವರು ಇತರ ರಾಜ್ಯಗಳಿಂದ ವಲಸೆ ಬಂದವರು. 50-100 ವರ್ಷಗಳ ಹಳೆಯ ದಾಖಲೆಗಳನ್ನು ಅವರು ಎಲ್ಲಿಂದ ತರಬೇಕು? ಎಂದು ಅವರು ಪ್ರಶ್ನಿಸಿದ್ದಾರೆ.

“ಇದು ಜನರ ಮೇಲೆ ಅನಗತ್ಯ ಹೊರೆಯಾಗಿದೆ. ದೇಶದಲ್ಲಿ ಒಳನುಸುಳುವಿಕೆಯನ್ನು ಪರೀಕ್ಷಿಸಲು ನಮ್ಮಲ್ಲಿ ಹಲವಾರು ಏಜೆನ್ಸಿಗಳಿವೆ. ಒಳನುಸುಳುವವರ ವಿರುದ್ಧ ಏಜೆನ್ಸಿಗಳು ಕ್ರಮ ತೆಗೆದುಕೊಳ್ಳಬಹುದು. ಆದರೆ ಕೇಂದ್ರ ಸರ್ಕಾರದಿಂದ ನೇರವಾಗಿ ಸಾಮಾನ್ಯ ಜನರಿಗೆ ತೊಂದರೆಯಾಗಬಹುದು” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...