Homeಮುಖಪುಟವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು 'ಗ್ರಾಮ ವಿರೋಧಿ': ರಾಹುಲ್ ಗಾಂಧಿ

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

- Advertisement -
- Advertisement -

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. 

ಇದೇ ವೇಳೆ ಹೊಸದಾಗಿ ಅಂಗೀಕರಿಸಲಾದ ವಿಬಿ-ಜಿ RAM ಜಿ ಶಾಸನವು “ಗ್ರಾಮ ವಿರೋಧಿ” ಮತ್ತು “ರಾಜ್ಯ ವಿರೋಧಿ” ಎಂದು ಅವರು ಕರೆದಿದ್ದಾರೆ. 

ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಗಾಂಧಿಯವರು, ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗಾಗಿ ವಿಕ್ಷಿತ್ ಭಾರತ್ ಗ್ಯಾರಂಟಿ ಮಸೂದೆಯು MGNREGA ಯ ಪರಿಷ್ಕರಣೆಯಲ್ಲ, ಬದಲಾಗಿ ಅದರ ಮೂಲ ತತ್ವಗಳಗಳ ದುರ್ಬಲಗೊಳಿಸುವಿಕೆಯಾಗಿದೆ ಎಂದು ಹೇಳಿದ್ದಾರೆ. 

“ನಿನ್ನೆ ರಾತ್ರಿ, ಮೋದಿ ಸರ್ಕಾರವು ಇಪ್ಪತ್ತು ವರ್ಷಗಳ MGNREGA ವನ್ನು ಒಂದೇ ದಿನದಲ್ಲಿ ಕೆಡವಿತು” ಎಂದು ಹೇಳಿರುವ ಅವರು ಇದು ಹಕ್ಕು ಆಧಾರಿತ, ಬೇಡಿಕೆ ಆಧಾರಿತ ಖಾತರಿಯನ್ನು ಕೆಡವುತ್ತದೆ ಮತ್ತು ಅದನ್ನು ದೆಹಲಿಯಿಂದ ನಿಯಂತ್ರಿಸಲ್ಪಡುವ ಪಡಿತರ ಯೋಜನೆಯನ್ನಾಗಿ ಪರಿವರ್ತಿಸುತ್ತದೆ. ಇದು ರಾಜ್ಯ ವಿರೋಧಿ ಮತ್ತು ಯೋಜಿತವಾಗಿ ಗ್ರಾಮ ವಿರೋಧಿಯಾಗಿದೆ. ಎಂದಿದ್ದಾರೆ. 

ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಸಹ MGNREGA ಗ್ರಾಮೀಣ ಕಾರ್ಮಿಕರಿಗೆ ಚೌಕಾಸಿ ಮಾಡುವ ಶಕ್ತಿಯನ್ನು ನೀಡಿದೆ ಎಂದು ಹೇಳಿದರು.

“ನಿಜವಾದ ಆಯ್ಕೆಗಳೊಂದಿಗೆ, ಶೋಷಣೆ ಮತ್ತು ಸಂಕಷ್ಟದ ವಲಸೆ ಕಡಿಮೆಯಾಯಿತು, ವೇತನ ಹೆಚ್ಚಾಯಿತು, ಕೆಲಸದ ಪರಿಸ್ಥಿತಿಗಳು ಸುಧಾರಿಸಿದವು, ಇವೆಲ್ಲವೂ ಗ್ರಾಮೀಣ ಮೂಲಸೌಕರ್ಯಗಳನ್ನು ನಿರ್ಮಿಸುವ ಮತ್ತು ಪುನರುಜ್ಜೀವನಗೊಳಿಸುವ ಸಮಯದಲ್ಲಿ ನಡೆದವು. ಆ ಹತೋಟಿಯೇ ಈ ಸರ್ಕಾರ ಮುರಿಯಲು ಬಯಸುತ್ತಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

ಕೆಲಸಕ್ಕೆ ಮಿತಿ ಹೇರುವ ಮೂಲಕ ಮತ್ತು ಅದನ್ನು ನಿರಾಕರಿಸಲು ಹೆಚ್ಚಿನ ಮಾರ್ಗಗಳನ್ನು ಸೃಷ್ಟಿಸುವ ಮೂಲಕ, ವಿಬಿ-ಜಿ RAM ಜಿ ಮಸೂದೆಯು ಗ್ರಾಮೀಣ ಬಡವರು ಹೊಂದಿದ್ದ ಒಂದು ಸಾಧನವನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ. 

“ಕೋವಿಡ್ ಸಮಯದಲ್ಲಿ MGNREGA ಎಂದರೆ ಏನೆಂದು ನಾವು ನೋಡಿದ್ದೇವೆ. ಆರ್ಥಿಕತೆ ಸ್ಥಗಿತಗೊಂಡು ಜೀವನೋಪಾಯ ಕುಸಿದಾಗ, ಅದು ಲಕ್ಷಾಂತರ ಜನರು ಹಸಿವು ಮತ್ತು ಸಾಲಕ್ಕೆ ಸಿಲುಕದಂತೆ ತಡೆಯಿತು” ಎಂದು ಗಾಂಧಿ ಹೇಳಿಕೊಂಡಿದ್ದಾರೆ. 

“ಇದು ವರ್ಷದಿಂದ ವರ್ಷಕ್ಕೆ ಮಹಿಳೆಯರಿಗೆ ಹೆಚ್ಚು ಸಹಕಾರಿಯಾಗಿತ್ತು. ಇದರಿಂದ ಅವರ ಕೊಡುಗೆಯನ್ನು ಹೆಚ್ಚಿಸುತ್ತಿತ್ತು ಎಂದು ಅವರು ಹೇಳಿದ್ದಾರೆ. 

“ನೀವು ಉದ್ಯೋಗ ಕಾರ್ಯಕ್ರಮವನ್ನು ಪಡಿತರ ಮಾಡುವಾಗ, ಮಹಿಳೆಯರು, ದಲಿತರು, ಆದಿವಾಸಿಗಳು, ಭೂಹೀನ ಕಾರ್ಮಿಕರು ಮತ್ತು ಬಡ ಒಬಿಸಿ ಸಮುದಾಯಗಳನ್ನು ಮೊದಲು ಹೊರಹಾಕಲು ಇಚ್ಛಿಸುತ್ತೀರಾ ಎಂದು ಅವರು ಆರೋಪಿಸಿದರು. 

ಮಸೂದೆಯನ್ನು ಅಂಗೀಕರಿಸಿದ ರೀತಿಯನ್ನು ಟೀಕಿಸಿದ ರಾಹುಲ್, ಮಸೂದೆಯ ಬಗ್ಗೆ ಸರಿಯಾದ ರೀತಿಯಲ್ಲಿ ಪರಿಶೀಲನೆಯಿಲ್ಲದೆ ವಿರೋಧಗಳ ನಡುವೆಯೇ ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಆರೋಪಿಸಿದರು. ಇದರಿಂದ ಗ್ರಾಮೀಣ ಜೀವನೋಪಾಯದ ಮೇಲೆ ದೂರಗಾಮಿ ಪರಿಣಾಮ ಬೀರಿದ್ದರೂ, ಮಸೂದೆಯನ್ನು ಸ್ಥಾಯಿ ಸಮಿತಿಗೆ ಉಲ್ಲೇಖಿಸಬೇಕೆಂಬ ವಿರೋಧ ಪಕ್ಷದ ಬೇಡಿಕೆಯನ್ನು ತಿರಸ್ಕರಿಸಲಾಗಿದೆ ಎಂದು ಗಾಂಧಿ ಹೇಳಿದರು.

“ಗ್ರಾಮೀಣ ಸಾಮಾಜಿಕ ಒಪ್ಪಂದವನ್ನು ಮರುಹೊಂದಿಸುವ ಕಾನೂನನ್ನು ತಜ್ಞರ ಸಮಾಲೋಚನೆ ಮತ್ತು ಸಾರ್ವಜನಿಕ ವಿಚಾರಣೆಗಳಿಲ್ಲದೆ ಆತುರದಿಂದ ಜಾರಿಗೆ ತರಬಾರದು” ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಕೇಂದ್ರೀಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ಗ್ರಾಮೀಣ ಭಾರತದ, ವಿಶೇಷವಾಗಿ ದಲಿತರು, ಒಬಿಸಿಗಳು ಮತ್ತು ಆದಿವಾಸಿಗಳಲ್ಲಿ ಕಾರ್ಮಿಕರನ್ನು ದುರ್ಬಲಗೊಳಿಸುವುದು ಮತ್ತು ಚೌಕಾಸಿ ಮಾಡುವ ಶಕ್ತಿಯನ್ನು ದುರ್ಬಲಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಆರೋಪಿಸಿದರು, ಆದರೆ ಈ ಕ್ರಮವನ್ನು ಸುಧಾರಣೆಯೆಂದು ಬಿಂಬಿಸಿದರು.

MGNREGA ವಿಶ್ವದ ಅತ್ಯಂತ ಯಶಸ್ವಿ ಬಡತನ ನಿರ್ಮೂಲನೆ ಮತ್ತು ಸಬಲೀಕರಣ ಕಾರ್ಯಕ್ರಮಗಳಲ್ಲಿ ಒಂದಾಗಿದೆ ಎಂದು ಕರೆದ ಗಾಂಧಿ, ಕಾಂಗ್ರೆಸ್ ಹೊಸ ಕಾನೂನನ್ನು ವಿರೋಧಿಸುತ್ತದೆ ಎಂದು ಹೇಳಿದರು.

“ಈ ಕ್ರಮವನ್ನು ಸೋಲಿಸಲು ಮತ್ತು ಕಾನೂನನ್ನು ಹಿಂತೆಗೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ನಾವು ಕಾರ್ಮಿಕರು, ಪಂಚಾಯತ್‌ಗಳು ಮತ್ತು ರಾಜ್ಯಗಳೊಂದಿಗೆ ನಿಲ್ಲುತ್ತೇವೆ” ಎಂದು ಅವರು ಹೇಳಿದರು.

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ ‘ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು.

ಈ ಮಸೂದೆ 2005ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ) ಮತ್ತು ಯೋಜನೆಯ ಹೆಸರು ಮತ್ತು ನಿಬಂಧನೆಗಳನ್ನು ಬದಲಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ವಿರುದ್ಧ ಒಂದಾದ ದಲಿತ, ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು: ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ರಾಷ್ಟ್ರಧ್ವಜದೊಂದಿಗೆ ಜಾಥಾ

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯ; ಬೆಂಗಳೂರಿನಲ್ಲಿ ದಲಿತ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಮತ್ತು ಅಲ್ಪಸಂಖ್ಯಾತ ಸಂಘಟನೆಗಳ ಒಗ್ಗಟ್ಟಿನ ಹೋರಾಟ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರದ್ದುಗೊಳಿಸಬೇಕು, ಮುಖ್ಯ ಚುನಾವಣಾ...

ಎಸ್‌ಐಆರ್ ವಿರುದ್ಧ ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ಚುನಾವಣಾ ಆಯೋಗದತ್ತ ಮೆರವಣಿಗೆ, ಹಲವರನ್ನು ವಶಕ್ಕೆ ಪಡೆದ ಪೊಲೀಸರು 

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸಲಾಗುತ್ತಿದೆ ಎಂದು ಆರೋಪಿಸಿ, ದೆಹಲಿಯಲ್ಲಿ ಶುಕ್ರವಾರ ನಡೆದ ‘ಪೀಪಲ್ ಅಗೇನ್ಸ್ಟ್ ಎಸ್‌ಐಆರ್’ ಪ್ರತಿಭಟನಾ...

“ಭಿನ್ನಾಭಿಪ್ರಾಯ ಅಪರಾಧವಲ್ಲ”: ಬಾಬರಿ ಮಸೀದಿ ತೀರ್ಪಿನ ವಿರುದ್ಧ ಪೋಸ್ಟರ್ ಹಾಕಿದ್ದ 13 ಜನರ ಮೇಲಿನ ದೇಶದ್ರೋಹ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಮಂಗಳೂರು: ಸುಪ್ರೀಂ ಕೋರ್ಟ್‌ನ ಬಾಬರಿ ಮಸೀದಿ ತೀರ್ಪಿನ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಪೋಸ್ಟರ್‌ಗಳನ್ನು ಹಾಕಿದ್ದ ಆರೋಪದ ಮೇಲೆ 13 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಸರ್ಕಾರದ ಅಥವಾ ನ್ಯಾಯಾಲಯದ...

ಯುಪಿ ಎಂಎಲ್‌ಸಿ ಚುನಾವಣೆ: ‘ಕಳ್ಳಮತದಾನ’ ಹಾಗೂ ‘ಬೂತ್ ಕ್ಯಾಪ್ಚರಿಂಗ್’ ರಂಪಾಟ; ಬಿಜೆಪಿ ನಾಯಕರು ಹಾಗೂ ಅಧಿಕಾರಿಗಳ ವಿರುದ್ಧ ಎಸ್‌ಪಿ ಗಂಭೀರ ಆರೋಪ!

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಎಂಎಲ್‌ಸಿ (ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ) ಚುನಾವಣೆಯ ಮತದಾನದ ವೇಳೆ ಆಡಳಿತಾರೂಢ ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳು ಸಾಲು ಸಾಲು ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ...

ತಮಿಳುನಾಡು| ದಲಿತ ವಿದ್ಯಾರ್ಥಿ ಸಾವು; ಶಾಲೆಯಲ್ಲಿ ಜಾತಿ ತಾರತಮ್ಯ ಎಂದು ಆರೋಪಿಸಿದ ಪೋಷಕರು

ತಮಿಳುನಾಡಿನ ಕೊಯಮತ್ತೂರಿನಲ್ಲಿ 11ನೇ ತರಗತಿಯ ದಲಿತ ವಿದ್ಯಾರ್ಥಿಯೊಬ್ಬ ಶಾಲೆಯ ಪೂಜಾ ರಜೆ ಮುಗಿಸಿ ಮರಳಿ ಶಾಲೆಗೆ ತೆರಳಿದ ದಿನವೇ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಶಾಲೆಯಲ್ಲಿ ತನ್ನ ಮಗ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸುತ್ತಿದ್ದ...

ಅರುಣಾಚಲ ಪ್ರದೇಶದಲ್ಲಿ ಚೀನಾ ಜೊತೆ ಮುಂದುವರಿದ ಮುಖಾಮುಖಿ: ಮೋದಿ ಸರ್ಕಾರದ ‘ಕಿವುಡಗೊಳಿಸುವ ಮೌನ’ವನ್ನು ಟೀಕಿಸಿದ ಕಾಂಗ್ರೆಸ್

ನವದೆಹಲಿ: ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾದ ಸೈನಿಕರೊಂದಿಗೆ ಹಲವು ಸ್ಥಳಗಳಲ್ಲಿ ಮುಖಾಮುಖಿ ಮುಂದುವರಿದಿದೆ ಎಂಬ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮಹಾನಿರ್ದೇಶಕ ಶತ್ರುಜೀತ್ ಕಪೂರ್ ಅವರ ಹೇಳಿಕೆಯ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ...

ಅರುಣಾಚಲದಲ್ಲಿ ಚೀನಾ ಒಳನುಗ್ಗುವಿಕೆ ದೃಢ: ಬ್ರಿಕ್ಸ್ ಸಮಯದಲ್ಲೂ ಮುಂದುವರಿದಿತ್ತು ಗಡಿ ಬಿಕ್ಕಟ್ಟು; ಐಟಿಬಿಪಿ ಡಿಜಿ ಹೇಳಿಕೆಯಿಂದ ಕೇಂದ್ರ ಸರ್ಕಾರದ ಮೌನ ಬಟಾಬಯಲು!

ಭಾರತ ಮತ್ತು ಚೀನಾ ಗಡಿಯ ನೈಜ ಪರಿಸ್ಥಿತಿಯ ಕುರಿತು ಕೇಂದ್ರ ಸರ್ಕಾರವು ಬಿಂಬಿಸುತ್ತಾ ಬಂದಿರುವ ಸಮಾಧಾನಕರ ಚಿತ್ರಣದ ರಾಜತಾಂತ್ರಿಕ ಧೋರಣೆಯ ವಿರುದ್ಧ ಗಂಭೀರ ಪ್ರಶ್ನೆಗಳು ಎದ್ದಿವೆ. ಅರುಣಾಚಲ ಪ್ರದೇಶದ ಗಡಿ ಭಾಗಗಳಲ್ಲಿ ಚೀನಾ...

ಚುನಾವಣಾ ಆಯೋಗದಲ್ಲಿ ಆಡಳಿತಾತ್ಮಕ ಭಿನ್ನಮತ: ಆರ್‌ಟಿಐ ದಾಖಲೆಗಳಿಂದ ಬಯಲಾಯ್ತು ಆಂತರಿಕ ಸಂಘರ್ಷ!

ಭಾರತೀಯ ಚುನಾವಣಾ ಆಯೋಗದ ಉನ್ನತ ಆಡಳಿತಾತ್ಮಕ ಮಟ್ಟದಲ್ಲಿ ಮೂಡಿದ್ದ ಆಂತರಿಕ ಭಿನ್ನಾಭಿಪ್ರಾಯಗಳು ಹಾಗೂ ಕಚೇರಿಯ ಅಧಿಕಾರ ಹಂಚಿಕೆ ಕುರಿತಾದ ಸಂಘರ್ಷಗಳು ಈಗ ಆರ್‌ಟಿಐ ದಾಖಲೆಗಳ ಮೂಲಕ ಅಧಿಕೃತವಾಗಿ ಬಹಿರಂಗಗೊಂಡಿವೆ. ಆಯೋಗದ ಹಿರಿಯ ಅಧಿಕಾರಿಯೊಬ್ಬರು...

‘ಪ್ರತಿ ಗಲ್ಲಿಯೂ ಜಂತರ್ ಮಂತರ್..’; ಎಸ್‌ಐಆರ್‌ ವಿರುದ್ಧ ಅ.23ರಂದು ದೇಶಾದ್ಯಂತ ಪ್ರತಿಭಟನೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರನ್ನು ಸಂಸತ್ತಿನ ಮೂಲಕ ಪದಚ್ಯುತಗೊಳಿಸಬೇಕು ಹಾಗೂ "ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಬೇಕು" ಎಂದು ಆಗ್ರಹಿಸಿ "ಪೀಪಲ್‌...

SIR ಅಂತಿಮ ಪಟ್ಟಿಯಲ್ಲಿದ್ದ 13 ಸಾವಿರಕ್ಕೂ ಹೆಚ್ಚು ಮತದಾರರ ಹೆಸರುಗಳಲ್ಲಿ ಬದಲಾವಣೆ : ಯುಪಿಯಲ್ಲಿ ಮತಗಳ್ಳತನದ ಹೊಸ ಸಂಚು ಬೆಳಕಿಗೆ; ಇಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ

ಉತ್ತರ ಪ್ರದೇಶದ ಪಿಲಿಭಿತ್ ವಿಧಾನಸಭಾ ಕ್ಷೇತ್ರದ ಇಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬುಧವಾರ (ಅಕ್ಟೋಬರ್ 21) ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ಸೂಚಿಸಿದ್ದಾರೆ. ಆಂತರಿಕ ತನಿಖೆಯಲ್ಲಿ ಮತದಾರರ ಗುರುತಿನ...