Homeಮುಖಪುಟನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಬೇಕು ಎಂದು ನೋಯ್ಡಾ ಸೆಕ್ಟರ್ 126 ಪೊಲೀಸ್ ಠಾಣೆಗೆ ಸೂಚಿಸಿದೆ.

ನೋಯ್ಡಾ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಇದು ಸಿಸಿಟಿವಿ ದೃಶ್ಯಾವಳಿಗಳನ್ನು ನಿರ್ಬಂಧಿಸಿದ ಪ್ರಕರಣವಾಗಿದೆ ಎಂದು ಹೇಳಿದೆ. ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿಗಳು ಕಾರ್ಯನಿರ್ವಹಿಸದಂತೆ ನೋಡಿಕೊಳ್ಳುವ ದೊಡ್ಡ ಸಮಸ್ಯೆ ಇದೆ ಎಂಬುದನ್ನು ಗಮನಿಸಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎನ್ ವಿ ಅಂಜಾರಿಯಾ ಅವರ ಪೀಠವು, “ನ್ಯಾಯಾಲಯವು ಸಾಮಾನ್ಯವಾಗಿ ಇಂತಹ ಪ್ರಕರಣಗಳನ್ನು ಪರಿಗಣಿಸುವುದಿಲ್ಲ” ಎಂದು ಹೇಳಿದೆ. ಆದರೆ, ಪೊಲೀಸರ ಮೇಲಿನ ಗಂಭೀರ ಆರೋಪಗಳನ್ನು ಪರಿಗಣಿಸಿ, ಈ ವಿಷಯವು ಸಿಸಿಟಿವಿ ಕ್ಯಾಮೆರಾಗಳ ನಿರ್ಬಂಧಕ್ಕೂ ಸಂಬಂಧಿಸಿದೆ ಎಂಬ ಕಾರಣಕ್ಕೆ ನ್ಯಾಯಾಲಯವು ವಿನಾಯಿತಿ ನೀಡಿದೆ” ಎಂದು ಹೇಳಿದೆ.

ಜನವರಿ 7 ರೊಳಗೆ ಉತ್ತರ ನೀಡಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ. “ಪೊಲೀಸ್ ಆಯುಕ್ತ ಗೌತಮ್ ಬುದ್ಧ ನಗರ ಪೊಲೀಸ್ ಠಾಣೆಯಲ್ಲಿ ಸಂಬಂಧಪಟ್ಟ ಅವಧಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸದಂತೆ ಮತ್ತು ಮುಚ್ಚಿದ ಕವರ್‌ನಲ್ಲಿ ಇರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಆದೇಶಿಸಿದರು.

ನೋಯ್ಡಾ ಸೆಕ್ಟರ್ 126 ರ ಪೊಲೀಸ್ ಠಾಣೆಯಲ್ಲಿ ಡಿಸೆಂಬರ್ 3 ರಂದು ರಾತ್ರಿ ಕಕ್ಷಿದಾರರಿಗೆ ಸಹಾಯ ಮಾಡಲು ಹೋದಾಗಿನಿಂದ, ವಕೀಲೆಯಾಗಿರುವ ಅರ್ಜಿದಾರರನ್ನು ಸಮವಸ್ತ್ರ ಧರಿಸಿದ ಪೊಲೀಸ್ ಸಿಬ್ಬಂದಿ ಸತತ 14 ಗಂಟೆಗಳ ಕಾಲ ಅಕ್ರಮ ಬಂಧನ, ಕಸ್ಟಡಿಯಲ್ಲಿ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ ನೀಡಿದದ್ದಾರೆ ಎಂದು ಆರೋಪಿಸಲಾಗಿದೆ.

ಈ ಅವಧಿಯಲ್ಲಿ, ಮಹಿಳಾ ವಕೀಲೆ ಕಸ್ಟಡಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರು, ಅಲ್ಲಿ ಎಸ್‌ಎಚ್‌ಒ ಸೇರಿದಂತೆ ಪುರುಷ ಪೊಲೀಸ್ ಸಿಬ್ಬಂದಿ ಅವರಿಗೆ ದೈಹಿಕ ಕಿರುಕುಳ ನೀಡಿ, ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದರು. ವಕೀಲೆಗೆ ಲೈಂಗಿಕ ಬೆದರಿಕೆಗಳನ್ನು ಸಹ ನೀಡಿದರು ಎಂದು ದೂರಿನಲ್ಲಿ ಉಲ್ಲೆಖಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಪೊಲೀಶರು ಬಲವಂತವಾಗಿ ವಕೀಲರ ಕೋಟನ್ನು ಹರಿದು, “ರಹಸ್ಯ ವೀಡಿಯೊ ರೆಕಾರ್ಡರ್” ಅನ್ನು ಹುಡುಕಲು ಅವರ ದೇಹ ಮತ್ತು ಬಟ್ಟೆಗಳನ್ನು ಪರೀಕ್ಷಿಸಿದರು. ಅವರಿಗೆ ಅಸಭ್ಯ ಬೆದರಿಕೆ ಹಾಕಿದರು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಪೊಲೀಸರು ವಕೀಲೆ ಕುತ್ತಿಗೆಗೆ ಪಿಸ್ತೂಲ್ ಇಟ್ಟು, ಅವರ ಮೊಬೈಲ್ ಫೋನ್ ಪಾಸ್‌ವರ್ಡ್‌ಗಳನ್ನು ಒಪ್ಪಿಸುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

“ನಕಲಿ ಎನ್‌ಕೌಂಟರ್” ನಲ್ಲಿ ಕೊಲ್ಲಲ್ಪಡುವ ನಿರಂತರ ಬೆದರಿಕೆಗಳನ್ನು ಸಹ ಅವರು ಎದುರಿಸುತ್ತಿದ್ದರು ಎಂದು ದೂರಿದ್ದಾರೆ.

ಈ ಬಲವಂತವು ಅವರ ಮತ್ತು ಅವರ ಕಕ್ಷಿದಾರರ ಮೊಬೈಲ್ ಸಾಧನಗಳಿಂದ ಎಲ್ಲಾ ರೆಕಾರ್ಡ್ ಮಾಡಿದ ವೀಡಿಯೊ ಸಾಕ್ಷ್ಯಗಳನ್ನು ತಕ್ಷಣ ಮತ್ತು ಉದ್ದೇಶಪೂರ್ವಕವಾಗಿ ಅಳಿಸಲು ಕಾರಣವಾಯಿತು ಎಂದು ಅವರ ಅರ್ಜಿಯಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...