Homeಕರ್ನಾಟಕಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ ಮೇವು ನೀಡಲು ಹೆಚ್ಚು ಖರ್ಚುಗಳು ಆಗುತ್ತವೆ. ಮೇವು ಸಾಕಾಣಿಕೆಗೆ ರೈತರಿಗೆ ನೆರವಾಗಲು, ಮೇವಿನ ಹಿಂಡಿ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಮ್ಮ ಸರ್ಕಾರದಿಂದ ಪ್ರತಿಲೀಟರ್ ಹಾಲಿನ ಮೇಲೆ 5 ರೂಪಾಯಿ ಸಹಾಯಧನವನ್ನು ಹಿಂದೆ ನೀಡಲಾಗುತ್ತಿತ್ತು. ಅದನ್ನೀಗ ಈ ವರ್ಷದ ಅವಧಿಯಲ್ಲೇ 7 ರೂಪಾಯಿಗೆ ಹೆಚ್ಚಿಸುತ್ತಿದ್ದೇವೆ ಎಂದು ಘೋಷಿಸಿದ್ದಾರೆ. 

ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದ್ದಾರೆ. 

ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು.

ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ,165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದರ ಜೊತೆಗೆ ಬಜೆಟ್‌ನಲ್ಲಿ ಘೋಷಿಸದೆ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು. ಪ್ರಸ್ತುತ (2023ರ ನಂತರ) ಪ್ರಣಾಳಿಕೆಯಲ್ಲಿನ 593 ಭರವಸೆಗಳ ಪೈಕಿ 293 ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, ಉಳಿದ ಭರವಸೆಗಳನ್ನು ಮುಂದಿನ ಮೂರು ಬಜೆಟ್‌ಗಳಲ್ಲಿ ಈಡೇರಿಸಲಾಗುವುದು ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...