Homeಮುಖಪುಟಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಚುನಾವಣಾ ಬಾಂಡ್‌ ರದ್ದತಿ ಬಳಿಕ ಮೂರು ಪಟ್ಟು ಹೆಚ್ಚಾದ ಕಾರ್ಪೋರೇಟ್ ದೇಣಿಗೆ

- Advertisement -
- Advertisement -

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ಸಲ್ಲಿಸಿದ ದೇಣಿಗೆ ವರದಿಗಳ ಪ್ರಕಾರ, ಒಂಬತ್ತು ಚುನಾವಣಾ ಟ್ರಸ್ಟ್‌ಗಳು ರಾಜಕೀಯ ಪಕ್ಷಗಳಿಗೆ ಒಟ್ಟು 3,811.37 ಕೋಟಿ ರೂ.ಗಳನ್ನು ದೇಣಿಗೆ ನೀಡಿವೆ. ಅದರಲ್ಲಿ, ಕೇಂದ್ರ ಸರ್ಕಾರವನ್ನು ಮುನ್ನಡೆಸುವ ಭಾರತೀಯ ಜನತಾ ಪಕ್ಷ (ಬಿಜೆಪಿ) 3,112.50 ಕೋಟಿ ರೂ.ಗಳನ್ನು ಪಡೆದುಕೊಂಡಿದೆ. ಇದು ಒಟ್ಟು ನಿಧಿಯ ಸುಮಾರು ಶೇಕಡ 82 ಆಗಿದೆ.

ಕಾಂಗ್ರೆಸ್ ಪಕ್ಷವು ಸರಿಸುಮಾರು 298.77 ಕೋಟಿ ರೂ.ಗಳನ್ನು ಪಡೆದಿದ್ದು, ಇದು ಒಟ್ಟು ದೇಣಿಗೆಯ ಶೇಕಡ 8ರಷ್ಟಿದೆ. ಇತರ ಪಕ್ಷಗಳು ಒಟ್ಟಾರೆಯಾಗಿ ಸುಮಾರು 400 ಕೋಟಿ ರೂ.ಗಳನ್ನು ಪಡೆದಿವೆ.

ಸುಪ್ರೀಂ ಕೋರ್ಟ್ ಅನಾಮಧೇಯ ಚುನಾವಣಾ ಬಾಂಡ್ ಯೋಜನೆಯನ್ನು ಅಸಾಂವಿಧಾನಿಕ ಎಂದು ಘೋಷಿಸಿದ ನಂತರ, ಟ್ರಸ್ಟ್ ಆಧಾರಿತ ನಿಧಿಯಲ್ಲಿನ ಈ ಹೆಚ್ಚಳವು ಗಮನಾರ್ಹ ಬದಲಾವಣೆಯನ್ನು ಸೂಚಿಸುತ್ತದೆ. ಹಿಂದಿನ ಹಣಕಾಸು ವರ್ಷದಲ್ಲಿ (2023-24), ಟ್ರಸ್ಟ್‌ಗಳ ಒಟ್ಟು ಕೊಡುಗೆಗಳು 1,218 ಕೋಟಿ ರೂ.ಗಳಷ್ಟಿತ್ತು.

ಪ್ರಮುಖ ದಾನಿಗಳು ಯಾರು?

ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ ಅತಿ ದೊಡ್ಡ ದಾನಿಯಾಗಿ ಹೊರಹೊಮ್ಮಿದ್ದು, ಒಟ್ಟು 2,668.46 ಕೋಟಿ ರೂ.ಗಳನ್ನು ರಾಜಕೀಯ ಪಕ್ಷಗಳಿಗೆ ವಿತರಿಸಿದೆ. ಅದರಲ್ಲಿ 2,180.71 ಕೋಟಿ ರೂ.ಗಳು ಬಿಜೆಪಿಗೆ ಹೋಗಿವೆ.

ಭಾರ್ತಿ ಏರ್‌ಟೆಲ್‌ನ ಮಾತೃ ಕಂಪನಿಯಾದ ಭಾರ್ತಿ ಎಂಟರ್‌ಪ್ರೈಸಸ್ ಬೆಂಬಲಿತ ಈ ಟ್ರಸ್ಟ್, ಜಿಂದಾಲ್ ಸ್ಟೀಲ್ ಮತ್ತು ಪವರ್, ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್, ಭಾರ್ತಿ ಏರ್‌ಟೆಲ್, ಅರಬಿಂದೋ ಫಾರ್ಮಾ ಮತ್ತು ಟೊರೆಂಟ್ ಫಾರ್ಮಾಸ್ಯುಟಿಕಲ್ಸ್ ಸೇರಿದಂತೆ ಪ್ರಮುಖ ಕಾರ್ಪೊರೇಟ್‌ಗಳಿಂದ ಹಣವನ್ನು ಪಡೆದುಕೊಂಡಿದೆ.

ಟಾಟಾ ಸನ್ಸ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್), ಮತ್ತು ಟಾಟಾ ಸ್ಟೀಲ್ ಸೇರಿದಂತೆ ಟಾಟಾ ಗ್ರೂಪ್ ಕಂಪನಿಗಳಿಂದ ನಿಧಿಯನ್ನು ಸಂಗ್ರಹಿಸಿದ ಪ್ರೋಗ್ರೆಸ್ಸಿವ್ ಎಲೆಕ್ಟೋರಲ್ ಟ್ರಸ್ಟ್, 914.97 ಕೋಟಿ ರೂ.ಗಳನ್ನು ದೇಣಿಗೆ ನೀಡುವ ಮೂಲಕ ಮತ್ತೊಂದು ಪ್ರಮುಖ ದಾನಿಯಾಗಿದೆ ಗುರುತಿಸಿಕೊಂಡಿದೆ. ಈ ಮೊತ್ತದ ಸರಿಸುಮಾರು 81 ಶೇಕಡ ಬಿಜೆಪಿಗೆ ಹೋಗಿದೆ.

ಇತರ ಗಮನಾರ್ಹ ಕೊಡುಗೆಗಳು

ಮಹೀಂದ್ರಾ ಗ್ರೂಪ್ (ಮಹೀಂದ್ರಾ & ಮಹೀಂದ್ರಾ, ಟೆಕ್ ಮಹೀಂದ್ರಾ) ನಿಂದ ನಿಧಿಯನ್ನು ಪಡೆದ ನ್ಯೂ ಡೆಮಾಕ್ರಟಿಕ್ ಎಲೆಕ್ಟೋರಲ್ ಟ್ರಸ್ಟ್, ಒಟ್ಟು 160 ಕೋಟಿ ರೂಪಾಯಿಗಳನ್ನು ರಾಜಕೀಯ ಪಕ್ಷಗಳಿಗೆ ನೀಡಿದೆ. ಇದರಲ್ಲಿ 150 ಕೋಟಿ ರೂಪಾಯಿ ಬಿಜೆಪಿಗೆ ಹೋಗಿದೆ.

ಸಿಜಿ ಪವರ್ ಮತ್ತು ಇಂಡಸ್ಟ್ರಿಯಲ್ ಸೊಲ್ಯೂಷನ್ಸ್ ಲಿಮಿಟೆಡ್ ಅನ್ನು ಅತಿದೊಡ್ಡ ಕೊಡುಗೆದಾರನನ್ನಾಗಿ ಹೊಂದಿರುವ ಟ್ರಯಂಫ್ ಎಲೆಕ್ಟೋರಲ್ ಟ್ರಸ್ಟ್, ಒಟ್ಟು 25 ಕೋಟಿ ರೂ.ಗಳನ್ನು ನೀಡಿದ್ದು, ಇದರಲ್ಲಿ 21 ಕೋಟಿ ರೂ. ಬಿಜೆಪಿಗೆ ದೊರೆತಿದೆ.

ಶಿವಸೇನೆ (ಯುಬಿಟಿ) ಗೆ ದೇಣಿಗೆ ನೀಡಿದ ಏಕೈಕ ಸಂಸ್ಥೆ ಜನಪ್ರಗತಿ ಎಲೆಕ್ಟೋರಲ್ ಟ್ರಸ್ಟ್, ಕೆಇಸಿ ಇಂಟರ್ನ್ಯಾಷನಲ್ ಲಿಮಿಟೆಡ್‌ನಿಂದ ಹೆಚ್ಚು ನಿಧಿ ಪಡೆದ ಈ ಸಂಸ್ಥೆ, 1 ಕೋಟಿ ರೂಪಾಯಿಯನ್ನು ಕೊಡುಗೆಯಾಗಿ ನೀಡಿದೆ.

ಜನಕಲ್ಯಾಣ್ ಎಲೆಕ್ಟೋರಲ್ ಟ್ರಸ್ಟ್ ತನ್ನ ಒಟ್ಟು ದೇಣಿಗೆಯಾದ 19 ಲಕ್ಷ ರೂ.ಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಾನವಾಗಿ ಹಂಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...