Homeಮುಖಪುಟಕೇರಳ |ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿ : ಸಿಪಿಐ(ಎಂ) ನಾಯಕರಿಂದ ಆರೋಪ

ಕೇರಳ |ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿ : ಸಿಪಿಐ(ಎಂ) ನಾಯಕರಿಂದ ಆರೋಪ

- Advertisement -
- Advertisement -

ಕೇರಳದಲ್ಲಿ ಪಾಲಕ್ಕಾಡ್‌ನಲ್ಲಿ ನಡೆದ ಛತ್ತೀಸ್‌ಗಢದ ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯರ್ತರು ಭಾಗಿಯಾಗಿದ್ದಾರೆ ಎಂದು ಆಡಳಿತರೂಢ ಸಿಪಿಐ(ಎಂ) ನಾಯಕರು ಆರೋಪಿಸಿದ್ದಾರೆ.

ಸ್ಥಳೀಯ ಸ್ವ-ಆಡಳಿತ ಸಚಿವ ಎಂ.ಬಿ ರಾಜೇಶ್ ಆರಂಭದಲ್ಲಿ ಈ ಆರೋಪ ಮಾಡಿದ್ದು, ಇದನ್ನು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಕೂಡ ಬೆಂಬಲಿಸಿದ್ದಾರೆ.

ಡಿಸೆಂಬರ್ 18ರಂದು ಪಾಲಕ್ಕಾಡ್‌ನ ವಲಯಾರ್‌ನಲ್ಲಿ ಗುಂಪೊಂದು ರಾಮ್ ನಾರಾಯಣ್ ಬಘೇಲ್ ಎಂಬ ಛತ್ತೀಸ್‌ಗಢದ ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ ಮಾಡಿತ್ತು.

ಬಘೇಲ್ ಮೇಲೆ ದಾಳಿ ಮಾಡುವಾಗ ಕೆಲ ಆರೋಪಿಗಳು “ನೀನು ಬಾಂಗ್ಲಾದೇಶದವನಾ?” ಎಂದು ಕೇಳಿ ಥಳಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಬಘೇಲ್ ಸಂಘ ಪರಿವಾರದ ಕೋಮು ರಾಜಕೀಯದ ಬಲಿಪಶು ಎಂದು ರಾಜೇಶ್ ಆರೋಪಿಸಿದ್ದಾರೆ. “ಇದು ಕೇವಲ ಗುಂಪು ಹತ್ಯೆಯಲ್ಲ. ಆರೋಪಿಗಳಲ್ಲಿ ಸಿಪಿಐ(ಎಂ) ಕಾರ್ಯಕರ್ತರನ್ನು ಕೊಲೆ ಮಾಡಲು ಯತ್ನಿಸಿದ ಕ್ರಿಮಿನಲ್ ಹಿನ್ನೆಲೆಯುಳ್ಳ ಆರ್‌ಎಸ್‌ಎಸ್ ಕಾರ್ಯಕರ್ತರು ಸೇರಿದ್ದಾರೆ. ಬಘೇಲ್ ಅವರನ್ನು ಬಾಂಗ್ಲಾದೇಶದವರೇ ಎಂದು ಕೇಳಿ ಹತ್ಯೆ ಮಾಡಲಾಗಿದೆ” ಎಂದು ರಾಜೇಶ್ ಹೇಳಿದ್ದಾರೆ.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕೂಡ ಈ ಕೊಲೆಯಲ್ಲಿ ಆರ್‌ಎಸ್‌ಎಸ್‌ ಭಾಗಿಯಾಗಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ.

ಈ ನಡುವೆ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಘೇಲ್ ಅವರ ಕುಟುಂಬದೊಂದಿಗೆ ಮಾತುಕತೆ ನಡೆಸಿದ ಕಂದಾಯ ಸಚಿವ ಕೆ. ರಾಜನ್, ಕುಟುಂಬಕ್ಕೆ ಕನಿಷ್ಠ 10 ಲಕ್ಷ ರೂ. ಪರಿಹಾರ ನೀಡುವ ಬಗ್ಗೆ ಸಂಪುಟ ನಿರ್ಧರಿಸುತ್ತದೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸುತ್ತದೆ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ಸಚಿವರ ಭರವಸೆಯನ್ನು ಪರಿಗಣಿಸಿ, ಬಘೇಲ್ ಕುಟುಂಬ ಪ್ರತಿಭಟನೆ ಹಿಂಪಡೆದಿದ್ದು, ಮೃತದೇಹ ಸ್ವೀಕರಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...