Homeಮುಖಪುಟರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

- Advertisement -
- Advertisement -

ರಷ್ಯಾ ಪರವಾಗಿ ಹೋರಾಡಿದ ಆರೋಪದ ಮೇಲೆ ಪ್ರಸ್ತುತ ಉಕ್ರೇನಿಯನ್ ಬಂಧನದಲ್ಲಿರುವ ಗುಜರಾತ್‌ನ ಮೊರ್ಬಿ ಜಿಲ್ಲೆಯ 23 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಿಡುಗಡೆ ಮಾಡಿ, ಸಹಾಯ ಮಾಡುವಂತೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

ತಮ್ಮ ಕುಟುಂಬಕ್ಕೆ ಕಳುಹಿಸಲಾದ ವೀಡಿಯೊ ಸಂದೇಶಗಳಲ್ಲಿ, ಅಧ್ಯಯನ ಅಥವಾ ಕೆಲಸಕ್ಕಾಗಿ ರಷ್ಯಾಕ್ಕೆ ಹೋಗಲು ಯೋಜಿಸುತ್ತಿರುವ ಭಾರತೀಯ ನಾಗರಿಕರು ವಂಚನೆಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಅವರು ಎಚ್ಚರಿಸಿದ್ದಾರೆ.

ಗುಜರಾತ್‌ ಮೊರ್ಬಿ ನಿವಾಸಿ ಸಾಹಿಲ್ ಮೊಹಮ್ಮದ್ ಹುಸೇನ್ ಮಜೋತಿ ಎಂಬ ವ್ಯಕ್ತಿ, ಈ ಅಕ್ಟೋಬರ್ ಆರಂಭದಲ್ಲಿ ಉಕ್ರೇನಿಯನ್ ಪಡೆಗಳಿಗೆ ಶರಣಾಗುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಬಿಡುಗಡೆ ಮಾಡಿದ ನಂತರ ಸುದ್ದಿಯಾದರು.

ಮಜೋತಿ, ಜನವರಿ 10, 2024 ರಂದು ಐಟಿಎಂಒ ವಿಶ್ವವಿದ್ಯಾಲಯದಲ್ಲಿ ರಷ್ಯನ್ ಭಾಷೆ ಮತ್ತು ಸಂಸ್ಕೃತಿಯಲ್ಲಿ ಕೋರ್ಸ್ ಅನ್ನು ಮುಂದುವರಿಸಲು ವಿದ್ಯಾರ್ಥಿ ವೀಸಾದಲ್ಲಿ ಸೇಂಟ್ ಪೀಟರ್ಸ್‌ಬರ್ಗ್‌ಗೆ ಪ್ರಯಾಣ ಬೆಳೆಸಿದ್ದರು.

ನಂತರ ಅವರು ಕಾನೂನು ತೊಂದರೆಯಲ್ಲಿ ಸಿಲುಕಿಕೊಂಡು, ರಷ್ಯಾದಲ್ಲಿ ಜೈಲಿನಲ್ಲಿದ್ದರು. ಉಕ್ರೇನಿಯನ್ ಪಡೆಗಳಿಂದ ಸೆರೆಹಿಡಿಯಲ್ಪಡುವ ಮೊದಲು ರಷ್ಯಾದ ಮಿಲಿಟರಿಗೆ ಸೇರಲು ಒತ್ತಾಯಿಸಲಾಯಿತು ಎಂದು ಆರೋಪಿಸಲಾಗಿದೆ.

ಭಾನುವಾರ ರಾತ್ರಿ ಅವರ ಕುಟುಂಬಕ್ಕೆ ಬಂದಿದೆ ಮತ್ತು ಉಕ್ರೇನಿಯನ್ ಅಧಿಕಾರಿಗಳು ಹಂಚಿಕೊಂಡಿದ್ದಾರೆ ಎಂದು ಹೇಳಲಾದ ಎರಡು ವೀಡಿಯೊ ಸಂದೇಶಗಳಲ್ಲಿ, ಒಂದು ಇಂಗ್ಲಿಷ್ ಮತ್ತು ಇನ್ನೊಂದು ಹಿಂದಿಯಲ್ಲಿದೆ. ಮಜೋತಿ, ತಮ್ಮ ಪರಿಸ್ಥಿತಿಯನ್ನು ಹತಾಶ ಎಂದು ವಿವರಿಸಿದ್ದಾರೆ.

“ಸದ್ಯ ನಾನು ಯುದ್ಧ ಅಪರಾಧಿಯಾಗಿ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದೇನೆ. ನಾನು ಹತಾಶನಾಗಿದ್ದೇನೆ. ಭವಿಷ್ಯದಲ್ಲಿ ಏನಾಗುತ್ತದೆ ಎಂದು ತಿಳಿದಿಲ್ಲ” ಎಂದು ಅವರು ವೀಡಿಯೊಗಳಲ್ಲಿ ಒಂದರಲ್ಲಿ ಹೇಳುತ್ತಾರೆ. “ಉನ್ನತ ಅಧ್ಯಯನ ಅಥವಾ ಕೆಲಸಕ್ಕಾಗಿ ರಷ್ಯಾಕ್ಕೆ ಬರುವವರು ಬಹಳ ಜಾಗರೂಕರಾಗಿರಬೇಕು. ಇಲ್ಲಿ ಅನೇಕ ವಂಚಕರಿದ್ದಾರೆ. ನೀವು ಕ್ರಿಮಿನಲ್, ಮಾದಕ ದ್ರವ್ಯ ಅಥವಾ ಅಕ್ರಮ ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ಸಾಧ್ಯವಾದಷ್ಟು, ಇದೆಲ್ಲದರಿಂದ ದೂರವಿರಿ” ಎಂದು ಹೇಳಿದ್ದಾರೆ.

ಭಾರತೀಯ ಅಧಿಕಾರಿಗಳಲ್ಲಿ ಮನವಿ ಮಾಡಿರುವ ಮಜೋತಿ, “ದಯವಿಟ್ಟು ನನಗೆ ಸಹಾಯ ಮಾಡಬೇಕು ಎಂದು ನಾನು ಭಾರತ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ವಿನಂತಿಸುತ್ತೇನೆ” ಎಂದು ಹೆಳಿದ್ದಾರೆ.

ಇಂಗ್ಲಿಷ್ ಭಾಷೆಯ ವೀಡಿಯೊದಲ್ಲಿ ಮಾತನಾಡಿರುವ ಅವರು, ಉಕ್ರೇನಿಯನ್ ಮಿಲಿಟರಿ ಜೈಲಿನಲ್ಲಿ ನಾನು ಬಂಧಿಸಲ್ಪಟ್ಟಿದ್ದೇನೆ. ರಷ್ಯಾದ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಮಾತ್ರ ಯುದ್ಧದಲ್ಲಿ ಹೋರಾಡಲು ಒಪ್ಪಂದಕ್ಕೆ ಸಹಿ ಹಾಕಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

“ನಾನು ರಷ್ಯಾದ ಜೈಲಿನಲ್ಲಿ ಸಿಲುಕಿದ್ದಾಗ ಯುದ್ಧ ಒಪ್ಪಂದಕ್ಕೆ ಸಹಿ ಹಾಕಿದೆ. ಅದು ನನ್ನ ಜೀವನದ ದೊಡ್ಡ ತಪ್ಪು. ಭಾರತೀಯ ಅಧಿಕಾರಿಗಳು ತಮ್ಮ ಮನೆಗೆ ಮರಳಲು ಅನುಕೂಲವಾಗುವಂತೆ ರಷ್ಯಾದೊಂದಿಗೆ ತಮ್ಮ ಪ್ರಕರಣದ ಕುರಿತು ಮಾತನಾಡಬೇಕು” ಎಂದು ಮನವಿ ಮಾಡಿದ್ದಾರೆ.

ರಷ್ಯಾದಲ್ಲಿ ಮಾದಕವಸ್ತು ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಯಿತು. ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಯುದ್ಧಕ್ಕೆ ಸೇರುವಂತೆ ದಾರಿ ತಪ್ಪಿಸಲಾಯಿತು ಎಂದು ಮಜೋತಿ ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...