Homeಮುಖಪುಟಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

- Advertisement -
- Advertisement -

ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಪುದುಶ್ಶೇರಿಯ ಕಲಾದಿತ್ತರ ನಿವಾಸಿ ಅಶ್ವಿನ್ ರಾಜ್ ಬಂಧಿತ ಆರೋಪಿ. ಈತ ಬಿಜೆಪಿ-ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಕಸಬಾ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದು, ಶೀಘ್ರದಲ್ಲೇ ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ.

ಪುದುಶ್ಶೇರಿಯ ಸುರಭಿ ನಗರದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅಶ್ವಿನ್ ರಾಜ್ ಮತ್ತು ಇತರ ಇಬ್ಬರು ಸುಮಾರು 10 ಜನರಿದ್ದ ಕ್ಯಾರೋಲ್ ಗುಂಪಿನ ಮೇಲೆ ಹಲ್ಲೆ ನಡೆಸಿ, ಆ ಪ್ರದೇಶದಲ್ಲಿ ಇಂತಹ ಪ್ರದರ್ಶನಗಳನ್ನು ಅನುಮತಿಸುವುದಿಲ್ಲ ಎಂದು ಕೂಗಿದ್ದಾರೆ.

ಕ್ಯಾರೋಲ್ ಗುಂಪು ಬಳಿ ಇದ್ದ ಡ್ರಮ್‌ನಲ್ಲಿ ‘ಸಿಪಿಐ(ಎಂ)’ ಎಂದು ಬರೆದಿದ್ದಕ್ಕೆ ವಾಗ್ವಾದ ನಡೆದು, ನಂತರ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ದಾಳಿಕೋರರು ಬ್ಯಾಂಡ್ ಸೆಟ್ ಮತ್ತು ಇತರ ಸಂಗೀತ ಉಪಕರಣಗಳಿಗೆ ಹಾನಿ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಘಟನೆ ಸಂಬಂಧ ಕ್ಯಾರೋಲ್ ಗುಂಪು ಕಸಬಾ ಪೊಲೀಸರಿಗೆ ದೂರು ನೀಡಿತ್ತು. ಈ ದಾಳಿಯನ್ನು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ನಡೆಸಿದ್ದಾರೆ ಎಂದು ಆರೋಪಿಸಿತ್ತು.

ಘಟನಾ ಸ್ಥಳಕ್ಕೆ ರಾತ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಹೆಚ್ಚಿನ ತಪ್ಪಿಸಿಕೊಳ್ಳುವಲ್ಲಿ ತಾವು0 ಯಶಸ್ವಿಯಾಗಿದ್ದೇವೆ ಎಂದು ಕ್ಯಾರೋಲ್ ಗುಂಪು ಹೇಳಿಕೊಂಡಿದ್ದು, ದಾಳಿಕೋರರು ಕೋಲುಗಳನ್ನು ಹಿಡಿದು ಸಿದ್ದರಾಗಿದ್ದರು. ನಮ್ಮ ಪ್ರದರ್ಶನ ತಡೆಯಲು ಪ್ರಯತ್ನಿಸಿದರು ಎಂದು ತಿಳಿಸಿದೆ.

ಕಸಬಾ ಇನ್ಸ್‌ಪೆಕ್ಟರ್ ಎಂ. ಸುಜಿತ್ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ದೃಢಪಡಿಸಿದ್ದಾರೆ.

ದಾಳಿಗೊಳಗಾದವರು 10 ರಿಂದ 15 ವರ್ಷ ವಯಸ್ಸಿನ ಮಕ್ಕಳು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪುದುಶ್ಶೇರಿ ಪ್ರದೇಶ ಸಮಿತಿಯ ನಾಯಕರು ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಮಕ್ಕಳ ಕೋರಿಕೆಯ ಮೇರೆಗೆ ಬ್ಯಾಂಡ್ ಏರ್ಪಡಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಕೋಮು ಸಾಮರಸ್ಯವನ್ನು ಕದಡಲು ಮತ್ತು ಪ್ರದೇಶದ ಶಾಂತಿಯುತ ವಾತಾವರಣವನ್ನು ಹಾಳುಗೆಡವಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷವೂ ಪಾಲಕ್ಕಾಡ್‌ನ ಸರ್ಕಾರಿ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಅಡ್ಡಿಪಡಿಸಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್‌ನ ಇಬ್ಬರು ನಾಯಕರು ಮತ್ತು ಬಜರಂಗದಳದ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಮೂವರು ಆರೋಪಿಗಳು ನಲ್ಲೇಪಿಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ಶಿಕ್ಷಕರನ್ನು ನಿಂದಿಸಿ, ಕ್ರಿಸ್‌ಮಸ್ ಮಾತ್ರ ಏಕೆ ಆಚರಿಸಲಾಗುತ್ತಿದೆ ಎಂದು ಪ್ರಶ್ನಿಸಿದ್ದರು ಮತ್ತು ಶ್ರೀ ಕೃಷ್ಣ ಜಯಂತಿಯನ್ನು ಕೂಡ ಆಚರಿಸಬೇಕೆಂದು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...