Homeಕರ್ನಾಟಕಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಳವಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಳವಳ್ಳಿಯಲ್ಲಿ ಪ್ರತಿಭಟನೆ

- Advertisement -
- Advertisement -

ಹುಬ್ಬಳ್ಳಿಯಲ್ಲಿ ನಡೆದ ಗರ್ಭಿಣಿ ಯುವತಿಯ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಂಡ್ಯದ ಮಳವಳ್ಳಿ ಪಟ್ಟಣದ ಅನಂತ್ ರಾವ್ ವೃತ್ತದಲ್ಲಿ ಜನವಾದಿ ಮಹಿಳಾ ಸಂಘಟನೆ, ಡಿವೈಎಫ್‌ಐ, ಎಸ್‌ಎಫ್‌ಐ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ (ಡಿ.24) ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ದೇವಿ ಅವರು, ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಂದಿರುವ ಕ್ರೂರ ಘಟನೆಯನ್ನು ಮಾನವೀಯ ನಾಗರಿಕ ಸಮಾಜ ಸಹಿಸುವುದಿಲ್ಲ ಎಂದರು.

ಎಂಟು ಶತಮಾನಗಳ ಹಿಂದೆಯೇ ಬಸವಣ್ಣನವರು ಅಂತರ್ಜಾತಿ ವಿವಾಹ ಮಾಡಿ ಜಾತಿಯತೆಯನ್ನು ಹೋಗಲಾಡಿಸಲು ಅಡಿಪಾಯ ಹಾಕಿದ್ದರು. ಆದರೆ, ಸಮಾಜದಲ್ಲಿ ಇಂದಿಗೂ ಮೇಲ್ಜಾತಿಯವರ ಅಟ್ಟಹಾಸ, ಜಾತಿ ತಾರತಮ್ಯ, ಜಾತಿ ದ್ವೇಷ, ಅಸ್ಪೃಶ್ಯತೆ, ದಲಿತರನ್ನು ಒಪ್ಪಿಕೊಳ್ಳಲಾಗದಂತ ಮನಸ್ಥಿತಿ ಆಳವಾಗಿದೆ ಎಂಬುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಗರ್ಭಿಣಿಯಾದ ತನ್ನ ಮಗಳನ್ನೇ ಅಮಾನುಷವಾಗಿ ತಂದೆಯೇ ಕೊಲ್ಲುವ ಜಾತಿ ಪ್ರತಿಷ್ಠೆಯು ಘನ ಘೋರವಾಗಿದೆ. ಈ ಜಾತಿ ತಾರತಮ್ಯ, ಜಾತಿ ದ್ವೇಷ, ಅಸ್ಪೃಶ್ಯತೆ ನಿರ್ಭೀಜಗೊಳಿಸದೆ ಸಮಾಜದಲ್ಲಿ ಬೆಳವಣಿಗೆ, ಸಾಮರಸ್ಯ ತರುವುದು ಸಾಧ್ಯವಿಲ್ಲ ಎಂದು ತಿಳಿಸಿದರು.

ಮರ್ಯಾದೆಗೇಡು ಹತ್ಯೆ ನಡೆಸಿದ ಎಲ್ಲರ ಮೇಲೂ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಮೃತ ಮಾನ್ಯಾಳ ಪತಿ ವೀವೇಕಾನಂದ ದೊಡ್ಡಮನಿ ಹಾಗೂ ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಸರ್ಕಾರ ಅಂತರ್ಜಾತಿ ವಿವಾಹವಾಗುವ ಎಲ್ಲಾ ಯುವಕ, ಯುವತಿಯರಿಗೆ ಸೂಕ್ತ ಕಾನೂನು ರಕ್ಷಣೆ ನೀಡಬೇಕು. ಅವರಿಗೆ ಸಾಮಾಜಿಕ, ಆರ್ಥಿಕ ಬಲ ತುಂಬಲು ಪ್ರೋತ್ಸಾಹ ಧನ ಹೆಚ್ಚಳಗೊಳಿಸಬೇಕು ಹಾಗೂ ಮೀಸಲಾತಿ ಸೌಲಭ್ಯ ಒದಗಿಸುವುದು ಸೇರಿದಂತೆ ವಿಶೇಷ ಸೌಲಭ್ಯಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಮರ್ಯಾದಗೇಡು ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂ ‌ಕೋರ್ಟ್ ಹಲವು ಮಹತ್ವದ ಆದೇಶಗಳನ್ನು ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಬದ್ದತೆಯಿಂದ ಪಾಲಿಸುವ ಮೂಲಕ ಸಮಾಜದಲ್ಲಿ ಮರ್ಯಾದೆಗೇಡು ಹತ್ಯೆಯ ವಿರುದ್ದ ಕಠಿಣ ಕಾನೂನು ಜಾರಿಗೆ ತರಬೇಕು. ಮಹಿಳೆಯರ ಮೇಲಾಗುವ ಎಲ್ಲ ತರಹದ ದೌರ್ಜನ್ಯಗಳನ್ನು ತಡೆಗಟ್ಟಲು ನ್ಯಾ. ಜಿ.ಎಸ್ ವರ್ಮಾ ಸಮಿತಿಯ ಹಾಗೂ ಉಗ್ರಪ್ಪ ಸಮಿತಿಯ ಶಿಫಾರಸ್ಸುಗಳನ್ನು ತ್ವರಿತವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಜನವಾದಿ ಮಹಿಳಾ ಸಂಘಟನೆಯ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಸುಶೀಲಾ ಹಾಗೂ ಜಿಲ್ಲಾ ಉಪಾಧ್ಯಕ್ಷೆ ಶೋಭಾ ಪ್ರತಿಭಟನೆಯಲ್ಲಿ ಮಾತನಾಡಿದರು. ತಾಲೂಕು ಅಧ್ಯಕ್ಷ ಜಯಶೀಲ, ಪ್ರೇಮ, ಸಿಐಟಿಯು ರಾಜ್ಯ ಮುಖಂಡ ರಾಮಕೃಷ್ಣ, ಆನಂದ ಮತ್ತಯ ಇತರರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...