Homeದಲಿತ್ ಫೈಲ್ಸ್ಹರಿಯಾಣ| ಕಳ್ಳತನ ಆರೋಪದ ಮೇಲೆ 12 ವರ್ಷದ ದಲಿತ ಬಾಲಕನಿಗೆ ಚಿತ್ರಹಿಂಸೆ; ಕಟ್ಟಿಹಾಕಿ ದೌರ್ಜನ್ಯ

ಹರಿಯಾಣ| ಕಳ್ಳತನ ಆರೋಪದ ಮೇಲೆ 12 ವರ್ಷದ ದಲಿತ ಬಾಲಕನಿಗೆ ಚಿತ್ರಹಿಂಸೆ; ಕಟ್ಟಿಹಾಕಿ ದೌರ್ಜನ್ಯ

- Advertisement -
- Advertisement -

12 ವರ್ಷದ ದಲಿತ ಬಾಲಕನ ಮೇಲೆ ಕಳ್ಳತನದ ಶಂಕೆಯಿಂದ ಹಲವಾರು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿ ಅಕ್ರಮ ಬಂಧನದಲ್ಲಿಟ್ಟ ಆರೋಪದ ಮೇಲೆ ಕುಟುಂಬವೊಂದರ 10 ಸದಸ್ಯರ ವಿರುದ್ಧ ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳ ವಿರುದ್ಧ, ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು, ಅಕ್ರಮ ಬಂಧನ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಇತರ ಅಪರಾಧಗಳ ಜೊತೆಗೆ ಆರೋಪ ಹೊರಿಸಲಾಗಿದೆ. ಇಲ್ಲಿಯವರೆಗೆ ಓರ್ವ ಶಂಕಿತನನ್ನು ಮಾತ್ರ ಬಂಧಿಸಲಾಗಿದೆ. ಆದರೆ ಮೂವರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಅಪ್ರಾಪ್ತ ವಯಸ್ಕನನ್ನು ಹಿಡಿದಿಟ್ಟುಕೊಂಡಿದ್ದ ಗುಂಪು, ಅವನ ಕೈಕಾಲುಗಳನ್ನು ಕಟ್ಟಿ, ಪದೇ ಪದೇ ವಿದ್ಯುತ್ ಶಾಕ್‌ ನೀಡಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಬಾಲಕ ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆ.

ಪೊಲೀಸರ ಪ್ರಕಾರ, ಡಿಸೆಂಬರ್ 10 ಮತ್ತು 11 ರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಸಂತ್ರಸ್ತ ಬಾಲಕ, ತನ್ನ ವಿಧವೆ ತಾಯಿಯನ್ನು ಪೋಷಿಸಲು ಮದುವೆ ಮೆರವಣಿಗೆಗಳಲ್ಲಿ ದೀಪಗಳನ್ನು ಹೊರುವ ಕೆಲಸ ಮಾಡುತ್ತಿದ್ದ. ಕೆಲಸ ಮುಗಿಸಿ ಇಬ್ಬರು ಗೆಳೆಯರೊಂದಿಗೆ ಹೊಡಾಲ್‌ನಿಂದ ಬಂಚಾರಿ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ, ರಾತ್ರಿ 11.30 ರ ಸುಮಾರಿಗೆ ಕುಡಿದ ಮತ್ತಿನಲ್ಲಿದ್ದ ನಿವಾಸಿಗಳು ಚಲಾಯಿಸುತ್ತಿದ್ದ ಕಾರು ಅವರನ್ನು ಬೆನ್ನಟ್ಟಲು ಪ್ರಾರಂಭಿಸಿತು.

ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ, ಬಾಲಕ ಮನೆಯ ಆವರಣಕ್ಕೆ ಹಾರಿದ್ದಾನೆ. ಆದರೆ ಉಳಿದ ಇಬ್ಬರು ಹಳ್ಳಿಯ ಕಡೆಗೆ ಓಡಿಹೋದರು ಎಂದು ಬಾಲಕ ಹೇಳಿದ್ದಾನೆ.

“ಅವನು ಕಳ್ಳನೆಂದು ಶಂಕಿಸಿದ ನಿವಾಸಿಗಳು, ಅಪ್ರಾಪ್ತ ವಯಸ್ಕನನ್ನು ಹಿಡಿದರು. ಅವನು ಬಿಟ್ಟುಬಿಡುವಂತೆ ಬೇಡಿಕೊಳ್ಳುತ್ತಲೇ ಇದ್ದಾಗ, ಗುಂಪು ಬಾಲಕನ ಗುರುತು ಕೇಳಿದ ನಂತರ ಅವನ ಮೇಲೆ ಹಲ್ಲೆ ನಡೆಸಿದರು. ಅವರು ಬಾಲಕನನ್ನು ಮನೆಯೊಳಗೆ ಕರೆದೊಯ್ದು, ಅವನ ಕೈಕಾಲುಗಳನ್ನು ಕಟ್ಟಿ, ಮೂರ್ಛೆ ಹೋದ ನಂತರವೂ ಗಂಟೆಗಟ್ಟಲೆ ವಿದ್ಯುತ್ ಶಾಕ್ ನೀಡಿದರು” ಎಂದು ಅಧಿಕಾರಿ ಹೇಳಿದರು.

ಗುಂಪು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದೆ ಎಂದು ಬಲಿಪಶುವಿನ ಹೇಳಿಕೆಯನ್ನು ಉಲ್ಲೇಖಿಸಿ ಅಧಿಕಾರಿ ಹೇಳಿದರು.

ಅವರು ಹುಡುಗನನ್ನು ಬಂಧಿಸಿದ ಕೆಲವೇ ಗಂಟೆಗಳ ನಂತರ, ಅಂತಿಮವಾಗಿ ಪೊಲೀಸರಿಗೆ ಕರೆ ಮಾಡಿ ಬಲಿಪಶುವನ್ನು ವಶಕ್ಕೆ ಪಡೆದರು. 12 ವರ್ಷದ ಬಾಲಕ ಕಳ್ಳತನದ ಪ್ರಕರಣದಲ್ಲಿ ಶಂಕಿತನಾಗಿದ್ದರಿಂದ ಆ ಸಮಯದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹಲ್ಲೆಯ ಪರಿಣಾಮವಾಗಿ ಬಲಿಪಶುವಿನ ಎದೆ ಮತ್ತು ಹೊಟ್ಟೆಯ ಮೇಲೆ ಕನಿಷ್ಠ 16 ಸುಟ್ಟ ಗಾಯಗಳಾಗಿವೆ. ಕರೆಂಟ್ ವೈರ್‌ಗಳನ್ನು ಮುಟ್ಟಿದ್ದರಿಂದ ಅವನ ಎದೆ ಮತ್ತು ಹೊಟ್ಟೆಯ ಮೇಲೆ ಕನಿಷ್ಠ 16 ಸುಟ್ಟ ಗಾಯಗಳಾಗಿವೆ ಎಂದು ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರು ಈ ವಿಷಯದ ಕುರಿತು ಧ್ವನಿ ಎತ್ತಿದ ನಂತರ, ಡಿಸೆಂಬರ್ 13 ರಂದು, ಪೊಲೀಸರು ಹತ್ತು ಜನರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್‌ಗಳು 115 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 127(2) (ಅಕ್ರಮ ಬಂಧನ), 190 (ಕಾನೂನುಬಾಹಿರ ಸಭೆ), 191(2) (ಗಲಭೆ) ಮತ್ತು 351(3) (ಸಾವು ಅಥವಾ ಗಂಭೀರ ಗಾಯವನ್ನುಂಟುಮಾಡುವ ಬೆದರಿಕೆಯಿಂದ ಕ್ರಿಮಿನಲ್ ಬೆದರಿಕೆ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ ಕಾಯ್ದೆ) ಮತ್ತು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿಯಲ್ಲಿ ಮುಂಡ್ಕಟಿ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ.

ಡಿಸೆಂಬರ್ 11 ರಂದು ಮುಂಡ್ಕಟಿ ಪೊಲೀಸ್ ಠಾಣೆಯಿಂದ ತನಗೆ ಕರೆ ಬಂದಿತ್ತು ಎಂದು ಸಂತ್ರಸ್ತೆಯ ತಾಯಿ ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ. “ನಾನು ಅಲ್ಲಿಗೆ ತಲುಪಿದಾಗ ಮಗನನ್ನು ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡೆ. ಅವನಿಗೆ ನಡೆಯಲು ಸಹ ಸಾಧ್ಯವಾಗಲಿಲ್ಲ” ಎಂದು ಅವರು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.

“ನಾನು ಮಗನನ್ನು ಹೊಡಾಲ್‌ನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದೆ. ಆದರೆ, ಅವನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಬೇರೆ ಆಸ್ಪತ್ರೆಗೆ ಕಳುಹಿಸಿದರು. ನಾನು ಅವನನ್ನು ಪಲ್ವಾಲ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ದೆ, ಅಲ್ಲಿಂದ ಅವನನ್ನು ಫರಿದಾಬಾದ್‌ಗೆ ಸ್ಥಳಾಂತರಿಸಲಾಯಿತು” ಎಂದು ಅವರು ಹೇಳಿದರು.

ಡಿಎಸ್‌ಪಿ (ಹೊಡಾಲ್) ಸುರೇಂದರ್ ಕುಮಾರ್ ಮಾತನಾಡಿ, ಖಂಬಿ ಗ್ರಾಮದ ರಾಮ್ ಕುಮಾರ್ ಎಂದು ಗುರುತಿಸಲಾದ ಓರ್ವ ಆರೋಪಿಯನ್ನು ಮಾತ್ರ ಇಲ್ಲಿಯವರೆಗೆ ಬಂಧಿಸಲಾಗಿದೆ (ಡಿಸೆಂಬರ್ 20 ರಂದು) ಎಂದು ಹೇಳಿದರು. “ಮೂವರು ಪ್ರಮುಖ ಆರೋಪಿಗಳು ಬಂಚರಿಯಿಂದ ಓಡಿಹೋದ ನಂತರ ಈತ ಅವರಿಗೆ ಆಶ್ರಯ ನೀಡಿದ್ದನು” ಎಂದು ಅವರು ಹೇಳಿದರು.

ಡಿಸೆಂಬರ್ 22 ರಂದು ಮೂವರು ಪ್ರಮುಖ ಶಂಕಿತರು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಸಲ್ಲಿಸಿದರು. ಅಪ್ರಾಪ್ತ ವಯಸ್ಕನಿಗೆ ಆಗಿರುವ ಗಾಯಗಳ ಬಗ್ಗೆ ಯಾವುದೇ ವೈದ್ಯಕೀಯ ವರದಿ ಲಭ್ಯವಿಲ್ಲದ ಕಾರಣ, ಬುಧವಾರ ಪಲ್ವಾಲ್‌ನ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಜನಶಕ್ತಿ ಸಕ್ರಿಯ ಕಾರ್ಯಕರ್ತೆ, ಹೋರಾಟದ ಒಡನಾಡಿ ಕೆ.ಪದ್ಮಾ ಇನ್ನಿಲ್ಲ

ಹಿರಿಯ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿ ಸಂಘಟನೆಯ ಸಕ್ರಿಯ ಕಾರ್ಯಕರ್ತೆ ಕೆ ಪದ್ಮಾ ಅವರು ಹೋರಾಟದ ಬದುಕನ್ನು ಮುಗಿಸಿದ್ದಾರೆ. ಬುಧವಾರ ರಾತ್ರಿ, ಬೆಂಗಳೂರಿನಲ್ಲಿ ಕೊನೆಯುಸಿಳೆದಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ತಮ್ಮನ್ನು ಬಾಧಿಸುತ್ತಿದ್ದ...

ದೇಶದ ಹಲವೆಡೆ ಕ್ರೈಸ್ತರ ಮೇಲೆ ಮತಾಂಧ ಕೋಮುವಾದಿಗಳ ದಾಳಿ : ಕ್ರಿಸ್‌ಮಸ್ ಆಚರಣೆಗೆ ಅಡ್ಡಿ

ಪ್ರತಿ ವರ್ಷದಂತೆ ಈ ವರ್ಷವೂ ಡಿಸೆಂಬರ್ ತಿಂಗಳಲ್ಲಿ, ವಿಶೇಷವಾಗಿ ಡಿಸೆಂಬರ್ 25ರಂದು ಇಡೀ ಜಗತ್ತು ಕ್ರಿಸ್‌ಮಸ್ ಹಬ್ಬದ ಸಂಭ್ರಮದಲ್ಲಿದೆ. ಏಸು ಕ್ರಿಸ್ತನ ಜನ್ಮದಿನದ ಪ್ರಯುಕ್ತ ಜನರು ಗಡಿಗಳನ್ನು ಮೀರಿ ಪರಸ್ಪರ ಸಂತಸ ಹಂಚಿಕೊಳ್ಳುತ್ತಿದ್ದಾರೆ. ಈ...

ಉನ್ನಾವೋ ಅತ್ಯಾಚಾರಿಯ ಶಿಕ್ಷೆ ಅಮಾನತು : ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲು ಮುಂದಾದ ಸಿಬಿಐ

ಉನ್ನಾವೋ ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತಿನಲ್ಲಿಟ್ಟ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕೇಂದ್ರ ತನಿಖಾ ದಳ (ಸಿಬಿಐ) ಮುಂದಾಗಿದೆ ಎಂದು ಬುಧವಾರ (ಡಿ.24) ವರದಿಯಾಗಿದೆ. ಸಿಬಿಐ ಈ ಪ್ರಕರಣದ ತನಿಖೆ...

ಚಿತ್ರದುರ್ಗ | ಹೊತ್ತಿ ಉರಿದ ಖಾಸಗಿ ಬಸ್​​​​ : 10ಕ್ಕೂ ಹೆಚ್ಚು ಜನರು ಸಜೀವ ದಹನ, ಹಲವರಿಗೆ ಗಾಯ

ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದ ಪರಿಣಾಮ 10ಕ್ಕೂ ಹೆಚ್ಚು ಜನರು ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಗುರುವಾರ (ಡಿ.25) ನಡೆದಿದೆ. ರಾಷ್ಟ್ರೀಯ ಹೆದ್ದಾರಿ...

ಜಾಮಿಯಾ ಮಿಲ್ಲಿಯಾ |’ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ’ದ ಬಗ್ಗೆ ಪ್ರಶ್ನೆ ಕೇಳಿದ ಪ್ರಾಧ್ಯಾಪಕ ಅಮಾನತು

ಪದವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿದ್ದ "ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ವಿವರಿಸಿ" ಎಂಬ ಪ್ರಶ್ನೆಯ ಬಗ್ಗೆ ದೂರುಗಳು ಬಂದ ನಂತರ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು ಸಮಾಜ ಕಾರ್ಯ...

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಳವಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ನಡೆದ ಗರ್ಭಿಣಿ ಯುವತಿಯ ಮರ್ಯಾದೆಗೇಡು ಹತ್ಯೆ ಖಂಡಿಸಿ ಮಂಡ್ಯದ ಮಳವಳ್ಳಿ ಪಟ್ಟಣದ ಅನಂತ್ ರಾವ್ ವೃತ್ತದಲ್ಲಿ ಜನವಾದಿ ಮಹಿಳಾ ಸಂಘಟನೆ, ಡಿವೈಎಫ್‌ಐ, ಎಸ್‌ಎಫ್‌ಐ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ (ಡಿ.24) ಪ್ರತಿಭಟನೆ ನಡೆಯಿತು....

ಕೇಂದ್ರದ ಜಿ ರಾಮ್‌ ಜಿ ಕಾಯ್ದೆ ವಿರುದ್ದ ತಮಿಳುನಾಡಿನಾದ್ಯಂತ ಬೃಹತ್ ಪ್ರತಿಭಟನೆ

ಕೇಂದ್ರದ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್) ಕಾಯ್ದೆ, 2025 (ವಿಬಿ-ಜಿ ರಾಮ್‌ ಜಿ) ವಿರುದ್ದ ತಮಿಳುನಾಡಿನ ಆಡಳಿತರೂಢ ಡಿಎಂಕೆ ಮೈತ್ರಿಕೂಟವು ಬುಧವಾರ (ಡಿ.24) ರಾಜ್ಯದಾದ್ಯಂತ ಬೃಹತ್...

ಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ಎನ್ನಲಾದ ನಾಝಿಯಾ ಇಲಾಹಿ (ನಾಝಿಯಾ ಇಲಾಹಿ ಖಾನ್) ಪದೇ ಪದೇ ಮುಸ್ಲಿಮರನ್ನು ತುಚ್ಛವಾಗಿ ನಿಂದಿಸಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರಾಜಾರೋಷವಾಗಿ ಹಂಚಿಕೊಳ್ಳುತ್ತಿದ್ದು, ಪೊಲೀಸರು ಯಾವುದೇ ಕ್ರಮ...

ತೆಲಂಗಾಣ: ಸರಪಂಚ್ ಚುನಾವಣೆಯಲ್ಲಿ ಬೆಂಬಲಿಸದ ದಲಿತ ಕುಟುಂಬದ ಮನೆ ಕೆಡವಿದ ಕಾಂಗ್ರೆಸ್ ಸದಸ್ಯರು

ಕಾಂಗ್ರೆಸ್ ಬೆಂಬಲಿತ ಸರಪಂಚ್ ಆಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಪದ್ಮಾವತಿ ಮತ್ತು ಅವರ ಮಗ ಪ್ರಸಾದ್ ರೆಡ್ಡಿ ಎಂಬುವವರು ಸೋಮವಾರ ಕೊಹಿರ್ ಮಂಡಲದ ಸಜ್ಜಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ದಲಿತ ಕುಟುಂಬದ ಮನೆಯನ್ನು...

“ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

"ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ" ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ...