Homeಮುಖಪುಟಜಾರ್ಖಂಡ್‌ ಚುನಾವಣೆ: ಬಿಜೆಪಿ ಕನಸು ಛಿದ್ರ - ಸರಳ ಬಹುಮತದತ್ತ ಕಾಂಗ್ರೆಸ್‌ ಮೈತ್ರಿಕೂಟ

ಜಾರ್ಖಂಡ್‌ ಚುನಾವಣೆ: ಬಿಜೆಪಿ ಕನಸು ಛಿದ್ರ – ಸರಳ ಬಹುಮತದತ್ತ ಕಾಂಗ್ರೆಸ್‌ ಮೈತ್ರಿಕೂಟ

- Advertisement -
- Advertisement -

ಕುತೂಹಲ ಕೆರಳಿಸಿದ್ದ ಜಾರ್ಖಂಡ್‌ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದ್ದ ಹಾಲಿ ಅಧಿಕಾರದಲ್ಲಿದ್ದ ಬಿಜೆಪಿಗೆ ಮುಖಭಂಗವಾಗುವ ಸಾಧ್ಯತೆಯಿದೆ. ಸದ್ಯದ ವರದಿಗಳ ಪ್ರಕಾರ 80 ಕ್ಷೇತ್ರಗಳಲ್ಲಿ ಸುಮಾರು 40 ರಲ್ಲಿ ಜೆಎಂಎಂ-ಆರ್‌ಜೆಡಿ ಮತ್ತು ಕಾಂಗ್ರೆಸ್‌ ನೇತೃತ್ವದ ಮೈತ್ರಿಕೂಟವು ಮುನ್ನಡೆ ಸಾಧಿಸಿದ್ದು ಸರಳ ಬಹುಮತದತ್ತ ದಾಪುಗಾಲು ಹಾಕಿವೆ.

ಇನ್ನೊಂದೆಡೆ ಕಳೆದ ಬಾರಿ 43 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿ 29ರಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಕಳೆದ ಬಾರಿ ಬಿಜೆಪಿ ಜೆವಿಎಂ ಜೊತೆ ಮೈತ್ರಿ ಮಾಡಿಕೊಂಡಿತ್ತು. ಆದರೆ ಈ ಬಾರಿ ಅವೆರಡು ಸಹ ಪ್ರತ್ಯೇಕವಾಗಿ ಸ್ಪರ್ಧಿಸಿವೆ. ಜೆವಿಎಂ ಇದುವರೆಗೂ ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಹಾಲಿ ಮುಖ್ಯಮಂತ್ರಿ ರಘುಭರ್‌ದಾಸ್‌ ಎರಡನೇಬಾರಿಗೆ ಮುಖ್ಯಮಂತ್ರಿಯಾಗುವ ಕನಸು ಕಂಡಿದ್ದರು. ಆದರೆ ಅದು ಸುಲಭವಲ್ಲ ಎಂಬುದು ಫಲಿತಾಂಶದ ದಿಕ್ಕು ನೋಡಿದರೆ ತಿಳಿಯುತ್ತಿದೆ. ಆದರೆ ಮುನ್ನಡೆಯೇ ಅಂತಿಮವಲ್ಲ, ಬಿಜೆಪಿ ಬಹುಮತ ಪಡೆಯುವ ನಿರೀಕ್ಷೆಯಿದೆ ಎಂದು ರಘುಭರ್‌ದಾಸ್‌ ತಿಳಿಸಿದ್ದಾರೆ.

ಇನ್ನುಳಿದಂತೆ ಎಜೆಎಸ್‌ಯು ಪಕ್ಷವು 4 ಸ್ಥಾನಗಳಲ್ಲಿ ಮುನ್ನಡೆ ಕಂಡಿದ್ದರೆ, ಸಿಪಿಐ(ಎಂಎಲ್‌) ಒಂದು ಕಡೆ, ಎನ್‌ಸಿಪಿ ಒಂದು ಕಡೆ, ಪಕ್ಷೇತರರು ಒಂದು ಕಡೆ ಮುನ್ನಡೆ ಸಾಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...