Homeಮುಖಪುಟದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ ಸೌರಭ್ ಭಾರದ್ವಾಜ್, ಸಂಜೀವ್ ಝಾ ಮತ್ತು ಆದಿಲ್ ಅಹ್ಮದ್ ಖಾನ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಗುರುವಾರ (ಡಿ.25) ಎಎನ್‌ಐ ವರದಿ ಮಾಡಿದೆ.

ಕ್ರಿಸ್‌ಮಸ್ ಆಚರಣೆಗೆ ಮುನ್ನ ಡಿಸೆಂಬರ್ 17 ಮತ್ತು 18ರಂದು ಎಎಪಿ ನಾಯಕರು ವಿಡಿಯೋ ಪೋಸ್ಟ್ ಮಾಡಿದ್ದರು. ಈ ವಿಡಿಯೋವನ್ನು ದೆಹಲಿಯ ಕನ್ನೌಟ್ ಪ್ಲೇಸ್ ಪ್ರದೇಶದಲ್ಲಿ ಚಿತ್ರೀಕರಿಸಲಾಗಿತ್ತು. “ದೆಹಲಿ ಮಾಲಿನ್ಯದಿಂದ ಸಾಂತಾಕ್ಲಾಸ್ ಮೂರ್ಛೆ ಹೋದರು” ಎಂಬ ಶೀರ್ಷಿಕೆಯನ್ನು ವಿಡಿಯೋಗೆ ಕೊಡಲಾಗಿತ್ತು.

ದೆಹಲಿಯ ವಾಯುಮಾಲಿನ್ಯದಿಂದ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರ ವಿಫಲವಾಗಿದ ಎಂದು ತೋರಿಸುವ ಸಲುವಾಗಿ ಮತ್ತು ಸರ್ಕಾರದ ವಿರುದ್ದ ಪ್ರತಿಭಟನೆ ವ್ಯಕ್ತಪಡಿಸಿ ಎಎಪಿ ನಾಯಕರು ಈ ಸ್ಕಿಟ್ ಮಾಡಿದ್ದರು.

ಸೌರಭ್ ಭಾರದ್ವಾಜ್ ಹಂಚಿಕೊಂಡಿರುವ ವಿಡಿಯೋದಲ್ಲಿ, ದೆಹಲಿಯ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಇಬ್ಬರು ವ್ಯಕ್ತಿಗಳು ಕುಸಿದು ಬೀಳುವುದು, ಅವರನ್ನು ಭಾರಧ್ವಾಜ್ ಸೇರಿದಂತೆ ಸುತ್ತಲು ನೆರೆದವರು ಮೇಲೆತ್ತುವುದು ಇದೆ. ವಿಡಿಯೋದ ಕೊನೆಯಲ್ಲಿ “ದೆಹಲಿಯ ವಿಪರೀತ ವಾಯುಮಾಲಿನ್ಯದಿಂದ ಕ್ರಿಸ್‌ಮಸ್‌ ಮುನ್ನ ಭಾರತಕ್ಕೆ ಬಂದ, ಭಾರತದ ರಾಜಧಾನಿಗೆ ಬಂದ ಸಾಂತಾಕ್ಲಾಸ್ ಮೂರ್ಛೆ ಹೋಗಿದ್ದಾರೆ ಎಂದು ಭಾರದ್ವಾಜ್ ಹೇಳಿದ್ದಾರೆ.

ಮುಂದುವರಿದು, “ವಾಯುಗುಣಮಟ್ಟ (ಎಕ್ಯೂಐ) ಸಂಖ್ಯೆಗಳಲ್ಲಿ ಮಾತ್ರ ಕಡಿಮೆಯಾಗಿದೆ, ನಿಜವಾಗಿ ಕಡಿಮೆಯಾಗಿಲ್ಲ. ಹಾಗಾಗಿ, ವಿಫಲ ಮುಖ್ಯಮಂತ್ರಿ ರೇಖಾಗುಪ್ತ ರಾಜೀನಾಮೆ ಕೊಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ರಾಜಕೀಯ ಸ್ಕಿಟ್ ಮಾಡುವಾಗ ಕ್ರೈಸ್ತ ಧರ್ಮೀಯರು ಪವಿತ್ರವಾಗಿ ಪರಿಗಣಿಸುವ ಸಾಂತಾಕ್ಲಾಸ್ ವಸ್ತ್ರ ಧರಿಸಿ ಅವರ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗಿದೆ. ಕ್ರೈಸ್ತರ ಸಂಸ್ಕೃತಿಯನ್ನು ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಿ ಎಎಪಿ ನಾಯಕರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಎನ್‌ಐ ವರದಿ ಉಲ್ಲೇಖಿಸಿದೆ.

ಎಎಪಿ ನಾಯಕರು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ದುರುದ್ದೇಶಪೂರ್ವಕವಾಗಿ ಕೃತ್ಯಗಳನ್ನು ಎಸಗಿದ್ದಾರೆ ಎಂದು ಆರೋಪಿಸಿ ವಕೀಲೆ ಖುಷ್ಬೂ ಜಾರ್ಜ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿದ ಭಾರದ್ವಾಜ್, “ದೂರುದಾರರು ಬಿಜೆಪಿ ನಾಯಕರೊಂದಿಗೆ ಇರುವ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ” ಎಂದಿದ್ದಾರೆ. ದೆಹಲಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಮನೋಜ್ ತಿವಾರಿ ಅವರೊಂದಿಗೆ ದೂರು ನೀಡಿದ ಜಾರ್ಜ್ ಇರುವ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. “ನಾವು ಈ ಜನರಿಗೆ ಉಚಿತ ಪ್ರಚಾರ ನೀಡಬಾರದು” ಎಂದು ಭಾರದ್ವಾಜ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ...

ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ

ನಲ್ಬರಿ ಜಿಲ್ಲೆಯ ಶಾಲೆಯೊಂದಕ್ಕೆ ನುಗ್ಗಿ ಕ್ರಿಸ್‌ಮಸ್ ಅಲಂಕಾರವನ್ನು ಧ್ವಂಸ ಮಾಡಿದ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ನಾಲ್ವರನ್ನು ಅಸ್ಸಾಂ ಪೊಲೀಸರು ಗುರುವಾರ (ಡಿ.25) ಬಂಧಿಸಿದ್ದಾರೆ. ಬಂಧಿತರನ್ನು ವಿಹೆಚ್‌ಪಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್...

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...

ಹತ್ಯೆಯ ಕೆಲವೇ ಗಂಟೆಗಳ ಮೊದಲು ನಾನು ಹಮಾಸ್ ಮುಖ್ಯಸ್ಥರನ್ನು ಭೇಟಿಯಾಗಿದ್ದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಟೆಹ್ರಾನ್‌ನಲ್ಲಿ ಹಮಾಸ್‌ನ ಮಾಜಿ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಅವರನ್ನು ಭೇಟಿಯಾಗಿದ್ದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಹಿರಂಗಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಧ್ಯಕ್ಷ...

ಕರ್ನಾಟಕ ಜನಶಕ್ತಿ ಸಕ್ರಿಯ ಕಾರ್ಯಕರ್ತೆ, ಹೋರಾಟದ ಒಡನಾಡಿ ಕೆ.ಪದ್ಮಾ ಇನ್ನಿಲ್ಲ

ಹಿರಿಯ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿ ಸಂಘಟನೆಯ ಸಕ್ರಿಯ ಕಾರ್ಯಕರ್ತೆ ಕೆ ಪದ್ಮಾ ಅವರು ಹೋರಾಟದ ಬದುಕನ್ನು ಮುಗಿಸಿದ್ದಾರೆ. ಬುಧವಾರ ರಾತ್ರಿ, ಬೆಂಗಳೂರಿನಲ್ಲಿ ಕೊನೆಯುಸಿಳೆದಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ತಮ್ಮನ್ನು ಬಾಧಿಸುತ್ತಿದ್ದ...

ದೇಶದ ಹಲವೆಡೆ ಕ್ರೈಸ್ತರ ಮೇಲೆ ಮತಾಂಧ ಕೋಮುವಾದಿಗಳ ದಾಳಿ : ಕ್ರಿಸ್‌ಮಸ್ ಆಚರಣೆಗೆ ಅಡ್ಡಿ

ಪ್ರತಿ ವರ್ಷದಂತೆ ಈ ವರ್ಷವೂ ಡಿಸೆಂಬರ್ ತಿಂಗಳಲ್ಲಿ, ವಿಶೇಷವಾಗಿ ಡಿಸೆಂಬರ್ 25ರಂದು ಇಡೀ ಜಗತ್ತು ಕ್ರಿಸ್‌ಮಸ್ ಹಬ್ಬದ ಸಂಭ್ರಮದಲ್ಲಿದೆ. ಏಸು ಕ್ರಿಸ್ತನ ಜನ್ಮದಿನದ ಪ್ರಯುಕ್ತ ಜನರು ಗಡಿಗಳನ್ನು ಮೀರಿ ಪರಸ್ಪರ ಸಂತಸ ಹಂಚಿಕೊಳ್ಳುತ್ತಿದ್ದಾರೆ. ಈ...