Homeಅಂತರಾಷ್ಟ್ರೀಯಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

- Advertisement -
- Advertisement -

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ ಈ ಘಟನೆಗೆ ಯಾವುದೇ ಕೋಮು ಆಯಾಮವಿಲ್ಲ, ಇದು ಸಾಮಾನ್ಯ ಅಪರಾಧ ಸ್ವರೂಪದ ಘಟನೆ ಎಂದು ಹೇಳಿದೆ.

ದಿ ಡೈಲಿ ಸ್ಟಾರ್ ವರದಿಯ ಪ್ರಕಾರ, ಡಿಸೆಂಬರ್ 24 ರಂದು ರಾತ್ರಿ 11 ಗಂಟೆ ಸುಮಾರಿಗೆ ರಾಜ್‌ಬರಿಯ ಪಂಗ್ಶಾ ಉಪಜಿಲ್ಲಾದ ಪಂಗ್ಶಾ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸೆಂದಂಗಾ ಗ್ರಾಮದಲ್ಲಿ ‘ಸಾಮ್ರಾಟ್’ ಎಂದೂ ಕರೆಯಲ್ಪಡುವ ಅಮೃತ್ ಮೊಂಡಲ್ ಎಂಬ ವ್ಯಕ್ತಿಯನ್ನು ಸ್ಥಳೀಯರು ಥಳಿಸಿದ್ದಾರೆ. ಸುಲಿಗೆ ಹಣವನ್ನು ಸಂಗ್ರಹಿಸಲು ಮೊಂಡಲ್ ಈ ಪ್ರದೇಶಕ್ಕೆ ಹೋಗಿದ್ದರು ಎಂಬ ಆರೋಪದ ನಂತರ ಹಿಂಸಾಚಾರ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ಪಡೆದ ನಂತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಂಭೀರ ಸ್ಥಿತಿಯಲ್ಲಿದ್ದ ಮೊಂಡಲ್ ಅವರನ್ನು ರಕ್ಷಿಸಿದರು. ಅವರನ್ನು ಪಂಗ್ಶಾ ಉಪಜಿಲ್ಲಾ ಆರೋಗ್ಯ ಸಂಕೀರ್ಣಕ್ಕೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ದೇಬ್ರತಾ ಸರ್ಕಾರ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಮೊಂಡಲ್ ಅವರ ಸಹಚರರಲ್ಲಿ ಒಬ್ಬರಾದ ಮೊಹಮ್ಮದ್ ಸೆಲೀಮ್ ಅವರನ್ನು ಸ್ಥಳದಿಂದ ಬಂಧಿಸಿದ್ದಾರೆ ಮತ್ತು ಪಿಸ್ತೂಲ್, ಪೈಪ್ ಗನ್ ಸೇರಿದಂತೆ ಎರಡು ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊಂಡಲ್ ವಿರುದ್ಧ ಪಂಗ್ಶಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಸೇರಿದಂತೆ ಕನಿಷ್ಠ ಎರಡು ಪ್ರಕರಣಗಳು ದಾಖಲಾಗಿವೆ ಮತ್ತು 2023 ರಲ್ಲಿ ದಾಖಲಾದ ಹಲವಾರು ಸುಲಿಗೆ ಸಂಬಂಧಿತ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎಂದು ಸರ್ಕಾರ್ ಹೇಳಿದ್ದಾರೆ.

ಸ್ಥಳೀಯ ನಿವಾಸಿಗಳು ದಿ ಡೈಲಿ ಸ್ಟಾರ್‌ಗೆ ನೀಡಿದ ಮಾಹಿತಿಯ ಪ್ರಕಾರ, ಮೊಂಡಲ್ ಸುಲಿಗೆ ಮತ್ತು ಇತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ಇತ್ತೀಚೆಗೆ ಭಾರತದಿಂದ ಹಿಂದಿರುಗಿದ್ದ. ಬಳಿಕ ಸ್ವಲ್ಪ ಸಮಯ ಸುಮ್ಮನಿದ್ದ. ಹತ್ಯೆಯಾದ ರಾತ್ರಿ, ಆತ ಮತ್ತು ಆತನ ಹಲವಾರು ಸಹಚರರು ಹಣ ಸಂಗ್ರಹಿಸಲು ಗ್ರಾಮಸ್ಥರ ಮನೆಗೆ ಹೋಗಿದ್ದರು ಎನ್ನಲಾಗಿದೆ. ನಿವಾಸಿಗಳು ಎಚ್ಚರಿಕೆ ನೀಡಿದಾಗ, ಸ್ಥಳೀಯರು ಒಟ್ಟುಗೂಡಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಆತನ ಗುಂಪಿನ ಇತರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಗುರುವಾರ (ಡಿಸೆಂಬರ್ 25) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಹತ್ಯೆಯನ್ನು ಖಂಡಿಸಿದೆ. ಆದರೆ, ಸಾರ್ವಜನಿಕರು ಮತ್ತು ಅಂತಾರಾಷ್ಟ್ರೀಯ ವೀಕ್ಷಕರು ಈ ಘಟನೆಯನ್ನು ಧಾರ್ಮಿಕ ದೃಷ್ಟಿಕೋನದಿಂದ ನೋಡಿದ್ದಾರೆ.

“ಪೊಲೀಸರ ಮಾಹಿತಿ ಮತ್ತು ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಈ ಘಟನೆಯು ಯಾವುದೇ ರೀತಿಯಲ್ಲಿ ಕೋಮು ದಾಳಿಯಲ್ಲ ಎಂಬುದು ಸ್ಪಷ್ಟವಾಗಿದೆ. ಇದು ಸುಲಿಗೆ ಮತ್ತು ಅಪರಾಧ ಚಟುವಟಿಕೆಗಳ ಹಿನ್ನೆಲೆ ನಡೆದಿದೆ” ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಮೊಂಡಲ್‌ ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಆತನ ವಿರುದ್ದ 2023ರಿಂದ ಹಲವಾರು ವಾರೆಂಟ್‌ಗಳನ್ನು ಹೊರಡಿಸಲಾಗಿದೆ. ಕೆಲವು ಗುಂಪುಗಳು ಮೃತನ ಧಾರ್ಮಿಕ ಗುರುತನ್ನು ಮುಂದಿಟ್ಟುಕೊಂಡು ಈ ಘಟನೆಯನ್ನು ಕೋಮು ದಾಳಿ ಎಂದು ಬಿಂಬಿಸಲು ಪ್ರಯತ್ನಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದೆ. ಅಂತಹ ಪ್ರಯತ್ನವು ಸಂಪೂರ್ಣ ಆಧಾರರಹಿತ ಮತ್ತು ದುರುದ್ದೇಶಪೂರಿತ ಎಂದು ಹೇಳಿದೆ.

ಗುಂಪು ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ. ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆ ಅಥವಾ ಗುಂಪು ಹಿಂಸಾಚಾರವನ್ನು ಬೆಂಬಲಿಸುವುದಿಲ್ಲ ಎಂದು ಪುನರುಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...