Homeಮುಖಪುಟದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

- Advertisement -
- Advertisement -

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ದೆಹಲಿ ಎನ್‌ಸಿಆರ್‌ ಪ್ರದೇಶದಲ್ಲಿ ವಿಪರೀತ ವಾಯುಮಾಲಿನ್ಯ ಹಿನ್ನೆಲೆ, ಗಾಳಿ ಶುದ್ಧೀಕರಿಸುವ ಏರ್‌ ಏರ್ ಪ್ಯೂರಿಫೈಯರ್‌ ಯಂತ್ರಗಳನ್ನು ‘ವೈದ್ಯಕೀಯ ಸಾಧನ’ ಎಂದು ಘೋಷಿಸಿ, ಅದಕ್ಕೆ ಶೇಕಡ 18ರ ಬದಲು 5ರಷ್ಟು ಜಿಎಸ್‌ಟಿ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ವಿಕಾಸ್ ಮಹಾಜನ್ ಮತ್ತು ವಿನೋದ್ ಕುಮಾರ್ ಅವರಿದ್ದ ಪೀಠಕ್ಕೆ ಸರ್ಕಾರ ಪ್ರತಿಕ್ರಿಯೆ ನೀಡಿದೆ.

ಈ ವಿಚಾರವನ್ನು ಉನ್ನತ ಮಟ್ಟದಲ್ಲಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ ಕೇಂದ್ರ ಸರ್ಕಾರ, ಸೂಕ್ತ ಉತ್ತರ ನೀಡುವುದಕ್ಕೆ ಇನ್ನಷ್ಟು ಸಮಯಾವಕಾಶ ಬೇಕು ಎಂದು ಕೋರಿದೆ.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎನ್. ವೆಂಕಟರಾಮನ್ ಅವರು, ಪ್ರಕರಣದಲ್ಲಿ ಜಿಎಸ್‌ಟಿ ಮಂಡಳಿ ಹೊಂದಿರುವ ವ್ಯವಸ್ಥೆಗೆ ಹೊರತಾಗಿ ನಡೆದುಕೊಂಡರೆ, ಸೂಕ್ತ ಪ್ರಕ್ರಿಯೆಯನ್ನು ಅನುಸರಿಸದೆ ಹೋದರೆ ಆಗ ಜಿಎಸ್‌ಟಿ ವಿನಾಯಿತಿ ಕೋರುವ ಪ್ರಕರಣಗಳ ಸಂಖ್ಯೆ ಹೆಚ್ಚಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಆದರೆ, ಅರ್ಜಿದಾರರಾದ ವಕೀಲ ಕಪಿಲ್ ಮದನ್, ಏರ್ ಪ್ಯೂರಿಫೈಯರ್‌ಗಳನ್ನು ಕಡಿಮೆ ಜಿಎಸ್‌ಟಿ ದರದೊಂದಿಗೆ ವೈದ್ಯಕೀಯ ಸಾಧನವೆಂದು ವರ್ಗೀಕರಿಸಬೇಕೆಂದು ಪಟ್ಟುಹಿಡಿದರು. ಆಗ ನ್ಯಾಯಾಲಯ, ಜಿಎಸ್‌ಟಿ ಮಂಡಳಿ ಸಭೆ ಸೇರುವವರೆಗೆ ಕಾಯಬೇಕಾಗಬಹುದು ಎಂದಿತು.

ಇದಕ್ಕೆ ಒಪ್ಪದ ಕಪಿಲ್‌ ಮದನ್‌ ಅವರು, ಸರ್ಕಾರ ಸಮಯ ತೆಗೆದುಕೊಳ್ಳುತ್ತದೆ. ಇದರಿಂದಾಗಿ ಇಡೀ ನಗರ ತೊಂದರೆ ಅನುಭವಿಸುತ್ತದೆ ಎಂದರು.

ವಿಚಾರಣೆಯ ಒಂದು ಹಂತದಲ್ಲಿ ನ್ಯಾಯಾಲಯ ಒಂದು ಏರ್ ಪ್ಯೂರಿಫೈಯರ್ ಬೆಲೆ 10-15 ಸಾವಿರ. ಜಿಎಸ್‌ಟಿಯನ್ನು ಸಮಂಜಸ ಮಟ್ಟಕ್ಕೆ ಏಕೆ ಇಳಿಸಬಾರದು ಎಂದು ಪ್ರಶ್ನಿಸಿತು. ಸರ್ಕಾರ ಪ್ರತಿ ಅಫಿಡವಿಟ್‌ ಸಲ್ಲಿಸಲು ನ್ಯಾಯಾಲಯ ಹತ್ತು ದಿನಗಳ ಕಾಲಾವಕಾಶ ನೀಡಿತು. ಪ್ರಕರಣದ ಮುಂದಿನ ವಿಚಾರಣೆ ಜನವರಿ 9, 2026ರಂದು ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...