Homeಮುಖಪುಟಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ...

ಎಸ್‌ಐಆರ್‌ ದೊಡ್ಡ ಹಗರಣ : ನೈಜ ಮತದಾರರನ್ನು ಕೈಬಿಟ್ಟರೆ ಚು.ಆಯೋಗದ ಕಚೇರಿಗೆ ಘೇರಾವ್ : ಮಮತಾ ಬ್ಯಾನರ್ಜಿ ಎಚ್ಚರಿಕೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಮತದಾರರ ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೆ, ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಘೇರಾವ್ ಹಾಕುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಡಿ.30) ಎಚ್ಚರಿಕೆ ನೀಡಿದ್ದಾರೆ.

ಬಂಕುರಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ವಾಗ್ದಾಳಿ ನಡೆಸಿದ್ದು, ಎಸ್‌ಐಆರ್ ಕೃತಕ ಬುದ್ಧಿಮತ್ತೆ (ಎಐ) ಸಹಾಯದಿಂದ ನಡೆಸಲಾಗುತ್ತಿರುವ ದೊಡ್ಡ ‘ಹಗರಣ’ ಎಂದಿದ್ದಾರೆ.

“ಎಐ ಬಳಸಿ ಎಸ್‌ಐಆರ್‌ ನಡೆಸಲಾಗುತ್ತಿದೆ, ಇದು ಒಂದು ದೊಡ್ಡ ಹಗರಣ. ನೀವು (ಅಮಿತ್ ಶಾ) ಮತ್ತು ನಿಮ್ಮ ಮಗ ಮಾತ್ರ ಬದುಕುಳಿಯುತ್ತೀರಿ. ಪಶ್ಚಿಮ ಬಂಗಾಳದ ಬಡ ಜನರನ್ನು ಎಸ್‌ಐಆರ್ ಹೆಸರಿನಲ್ಲಿ ಹಿಂಸಿಸಲಾಗುತ್ತಿದೆ. ಎಸ್‌ಐಆರ್‌ನಿಂದಾಗಿ ಸುಮಾರು 60 ಜನರು ಸಾವನ್ನಪ್ಪಿದ್ದಾರೆ. ದಾಖಲೆ ಪರಿಶೀಲನೆ ವಿಚಾರಣೆಗೆ ವೃದ್ಧರನ್ನು ಕರೆಯಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೂ, ಟಿಎಂಸಿ ದೆಹಲಿಯ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕುತ್ತದೆ” ಎಂದು ಎಚ್ಚರಿಕ ನೀಡಿದ್ದಾರೆ.

ಟಿಎಂಸಿ ಸರ್ಕಾರದ ಅಡಿಯಲ್ಲಿ ಬಂಗಾಳ ಭಯೋತ್ಪಾದಕರ ಕೇಂದ್ರವಾಗಿದೆ ಎಂಬ ಅಮಿತ್ ಶಾ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, “ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರೇ ಇಲ್ಲದಿದ್ದರೆ, ಪಹಲ್ಗಾಮ್ ದಾಳಿ ಹೇಗೆ ಸಂಭವಿಸಿತು? ಪಹಲ್ಗಾಮ್‌ನಲ್ಲಿ ನೀವು ದಾಳಿ ನಡೆಸಿದ್ದಾ? ದೆಹಲಿಯಲ್ಲಿ ನಡೆದ ಘಟನೆಯ ಹಿಂದೆ ಯಾರಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ದಾಳಿಗಳಿಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಚುನಾವಣೆ ಬಂದಾಗಲೆಲ್ಲಾ ‘ಸೋನಾರ್ ಬಾಂಗ್ಲಾ’ ನಿರ್ಮಿಸುವುದಾಗಿ ಬಿಜೆಪಿ ಭರವಸೆ ನೀಡುತ್ತದೆ. ವಾಸ್ತವದಲ್ಲಿ ಅದು ಆಳುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಥಳಿಸಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಎಸ್‌ಐಆರ್‌ ಬಳಿಕ ಡಿಸೆಂಬರ್ 16ರಂದು ಪಶ್ಚಿಮ ಬಂಗಾಳದಲ್ಲಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದೆ. ಒಟ್ಟು 7.6 ಕೋಟಿ ಮತದಾರರ ಪೈಕಿ ಸುಮಾರು 1.66 ಕೋಟಿ ಮತದಾರರ ‘ಪ್ರಾಮಾಣಿಕತೆ’ಯ ಬಗ್ಗೆ ಚುನಾವಣಾ ಆಯೋಗವು ಊಹಾಪೋಹಗಳನ್ನು ಎತ್ತಿದ್ದು, ಅವರ ದಾಖಲೆಗಳನ್ನು ಮತ್ತೊಮ್ಮೆ ಪರಿಶೀಲಿಸಲು ವಿಚಾರಣೆಗೆ ಕರೆಯಲಾಗಿದೆ.

ಪಶ್ಚಿಮ ಬಂಗಾಳದ ಸಿಇಒಗೆ ಬರೆದ ಪತ್ರದಲ್ಲಿ, ಡಬ್ಲ್ಯುಬಿಸಿಎಸ್ (ಕಾರ್ಯನಿರ್ವಾಹಕ) ಅಧಿಕಾರಿಗಳ ಸಂಘವು, ಚುನಾವಣಾ ನೋಂದಣಿ ಅಧಿಕಾರಿಗಳ (ಇಆರ್‌ಒ) ಶಾಸನಬದ್ಧ ಪಾತ್ರವನ್ನು ನಿರ್ಲಕ್ಷಿಸಿ ಕರಡು ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು ಸ್ವಯಂ ಪ್ರೇರಿತವಾಗಿ ಅಳಿಸಲಾಗಿದೆ ಎಂದು ಆಕ್ಷೇಪಣೆ ಎತ್ತಿದೆ.

ದೊಡ್ಡ ಮಟ್ಟದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಒಂದೇ ಸಮನೆ ತೆಗದು ಹಾಕಲಾಗಿದೆ. ಈ ಮತದಾರರು ಕಾನೂನಿನ ಪ್ರಕಾರ ಮತ ಚಲಾಯಿಸಲು ಅರ್ಹರಾಗಿರಬಹುದು. ಆದರೆ, ಮತದಾರರ ಪಟ್ಟಿ ತಯಾರಿಸುವ ಅಥವಾ ಪರಿಶೀಲಿಸುವ ಸಮಯದಲ್ಲಿ (ಗಣತಿ ಪ್ರಕ್ರಿಯೆ) ಯಾವುದೋ ಕಾರಣಕ್ಕೆ ಹಾಜರಿರಲಿಕ್ಕಿಲ್ಲ ಅಥವಾ ಭಾಗವಹಿಸಿರಲಿಕ್ಕಿಲ್ಲ. ಇಂತಹ ವ್ಯಕ್ತಿಗಳ ಹಕ್ಕುಗಳನ್ನು ಒಂದೇ ಸಮಯದಲ್ಲಿ ಅಳಿಸಿ ಹಾಕುವುದು ಅನ್ಯಾಯವೆಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...