Homeಮುಖಪುಟಇಂದೋರ್| ಕಲುಷಿತ ನೀರು ಸೇವಿಸಿ ಏಳು ಜನರು ಸಾವು; ದೃಢಪಡಿಸಿದ ಮೇಯರ್

ಇಂದೋರ್| ಕಲುಷಿತ ನೀರು ಸೇವಿಸಿ ಏಳು ಜನರು ಸಾವು; ದೃಢಪಡಿಸಿದ ಮೇಯರ್

- Advertisement -
- Advertisement -

ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಮತ್ತು ವಾಂತಿಯಿಂದ ಇದುವರೆಗೆ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದರು.

“ಭಾಗೀರಥಪುರ ಪ್ರದೇಶದಲ್ಲಿ ಅತಿಸಾರದಿಂದ ಮೂರು ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಆದರೆ ನನಗೆ ತಿಳಿದ ಮಟ್ಟಿಗೆ, ಈ ಕಾಯಿಲೆಯಿಂದ ಬಳಲುತ್ತಿರುವ ಇನ್ನೂ ನಾಲ್ಕು ಜನರನ್ನು ಆಸ್ಪತ್ರೆಗೆ ಕರೆತರಲಾಯಿತು, ಅವರು ಸಹ ಸಾವನ್ನಪ್ಪಿದರು” ಎಂದು ಅವರು ವರದಿಗಾರರಿಗೆ ತಿಳಿಸಿದರು.

ಪ್ರಾಥಮಿಕ ಅಂದಾಜಿನ ಪ್ರಕಾರ, ಒಳಚರಂಡಿ ನೀರು ಸೋರಿಕೆಯಾಗಿ ಕುಡಿಯುವ ನೀರಿನ ಪೈಪ್‌ಲೈನ್‌ಗೆ ಪ್ರವೇಶಿಸಿದೆ. ಇದು ಭಾಗೀರಥಪುರ ಪ್ರದೇಶದಲ್ಲಿ ಅತಿಸಾರ ಮತ್ತು ವಾಂತಿಗೆ ಕಾರಣವಾಯಿತು ಎಂದು ಭಾರ್ಗವ ಹೇಳಿದರು.

ಕಲುಷಿತ ಕುಡಿಯುವ ನೀರಿನಿಂದ ಉಂಟಾದ ಅತಿಸಾರದಿಂದ ನಾಲ್ಕು ಜನರು ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿವಂ ವರ್ಮಾ ಹೇಳಿದರು.

ಈ ಕಾಯಿಲೆಯಿಂದ ಬಳಲುತ್ತಿರುವ 149 ರೋಗಿಗಳನ್ನು ನಗರದಾದ್ಯಂತ 27 ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಕಳೆದ ಒಂದು ವಾರದಲ್ಲಿ ಭಾಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ ಆರು ಮಹಿಳೆಯರು ಸೇರಿದಂತೆ ಕನಿಷ್ಠ ಎಂಟು ಜನರು ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಮೋಹನ್ ಯಾದವ್ ದುಃಖ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಘೋಷಿಸಿದರು. ಜೊತೆಗೆ ಎಲ್ಲಾ ರೋಗಿಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಸೂಚನೆಗಳನ್ನು ಅನುಸರಿಸಿ, ಭಾಗೀರಥಪುರದ ಪುರಸಭೆಯ ವಲಯ ಅಧಿಕಾರಿ ಮತ್ತು ಸಹಾಯಕ ಎಂಜಿನಿಯರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಉಸ್ತುವಾರಿ ಉಪ ಎಂಜಿನಿಯರ್‌ಗಳನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಲುಷಿತ ಕುಡಿಯುವ ನೀರಿನ ಘಟನೆಯ ತನಿಖೆಗಾಗಿ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಭಗೀರಥಪುರದ ಮುಖ್ಯ ನೀರು ಸರಬರಾಜು ಪೈಪ್‌ಲೈನ್‌ನಲ್ಲಿ ಶೌಚಾಲಯ ನೀರು ಸೋರಿಕೆಯಾಗಿರುವುದು ಕಂಡುಬಂದಿದೆ. ಈ ಸೋರಿಕೆಯಿಂದಾಗಿ ಕುಡಿಯುವ ನೀರು ಕಲುಷಿತವಾಗಿರಬಹುದು ಎಂದು ಪುರಸಭೆ ಆಯುಕ್ತ ದಿಲೀಪ್ ಕುಮಾರ್ ಯಾದವ್ ಹೇಳಿದ್ದಾರೆ.

ಕಲುಷಿತ ಕುಡಿಯುವ ನೀರಿನ ಪ್ರಕರಣದಲ್ಲಿ ತನ್ನ ನಿರ್ಲಕ್ಷ್ಯವನ್ನು ಮುಚ್ಚಿಹಾಕಲು ಆಡಳಿತವು ನಿಜವಾದ ಸಾವಿನ ಸಂಖ್ಯೆಯನ್ನು ಮರೆಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ನೀಲಭ್ ಶುಕ್ಲಾ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಬುರ್ಖಾ ಧರಿಸಿ ಧುರಂಧರ್ ಹಾಡಿಗೆ ನೃತ್ಯ; ಹುಡುಗರ ಪುಂಡಾಟಕ್ಕೆ ಆಕ್ರೋಶ

ಧುರಂಧರ್ ಚಿತ್ರದ ಹಾಡಿಗೆ ಬುರ್ಖಾ ಧರಿಸಿ ನೃತ್ಯ ಮಾಡಿದ ಯುವಕರು ಇಸ್ಲಾಮಿಕ್ ಉಡುಗೆಯನ್ನು ಬಹಿರಂಗವಾಗಿ ಅಪಹಾಸ್ಯ ಮಾಡಿದ್ದಾರೆ ಎಂಬ ಕಾರಣಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಶಾಲಾ ಕಾರ್ಯಕ್ರಮವೊಂದರಲ್ಲಿ ಈ...

ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಝಿಯಾ ಅಂತ್ಯಕ್ರಿಯೆ : ಭಾರತದಿಂದ ಸಚಿವ ಜೈಶಂಕರ್ ಭಾಗಿ

ಮಂಗಳವಾರ (ಡಿ.30) ನಿಧನರಾದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ಅವರ ಅಂತ್ಯಕ್ರಿಯೆ ಬುಧವಾರ (ಡಿ.31) ಢಾಕಾದಲ್ಲಿ ನಡೆಯಿತು. ಭಾರತದಿಂದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್ ಪಾಲ್ಗೊಂಡು ಪ್ರಧಾನಿ ಮೋದಿ...

ಉತ್ತರ ಪ್ರದೇಶ| ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಆರೋಪಿ ಬಂಧನ

ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ವಶಕ್ಕೆ ಪಡೆದು...

ಚಲಿಸುತ್ತಿದ್ದ ವ್ಯಾನ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ರಸ್ತೆಗೆ ಎಸೆದ ಪ್ರಕರಣ : ಇಬ್ಬರ ಬಂಧನ

ಚಲಿಸುತ್ತಿದ್ದ ವ್ಯಾನ್‌ನಲ್ಲಿ 25 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ನಂತರ ಆಕೆಯನ್ನು ರಸ್ತೆಗೆ ಎಸೆದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್‌ನಲ್ಲಿ ನಡೆದಿದ್ದು, ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು...

ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು....

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನ್ಯಾಯಯುತ ಮತ್ತು...

ಉತ್ತರಾಖಂಡ: ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು, ಸರಕು ರೈಲಿಗೆ ಡಿಕ್ಕಿ ಹೊಡೆದು ಸುಮಾರು...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30)...

ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು

ಧಾರವಾಡದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ...

ಯುಪಿ: ತಂದೆ ಮತ್ತು ಮಾನಸಿಕ ಅಸ್ವಸ್ಥ ಮಗಳನ್ನು ಐದು ವರ್ಷ ಕೋಣೆಯಲ್ಲಿ ಕೂಡಿ ಹಾಕಿದ ಸೇವಕ ದಂಪತಿ: ತಂದೆ ಸಾವು, ಅಸ್ಥಿಪಂಜರದಂತೆ ಪತ್ತೆಯಾದ ಮಗಳು

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ನಿವೃತ್ತ ರೈಲ್ವೆ ಉದ್ಯೋಗಿ ಮತ್ತು ಅವರ ಮಾನಸಿಕ ಅಸ್ವಸ್ಥ ಮಗಳನ್ನು ಅವರ ಆರೈಕೆದಾರರು ಐದು ವರ್ಷಗಳ ಕಾಲ ಬಂಧಿಯಾಗಿಟ್ಟು ಚಿತ್ರಹಿಂಸೆ ನೀಡಿ, ಆ ವ್ಯಕ್ತಿಯ ಸಾವಿಗೆ ಕಾರಣವಾದ...